Karnataka Covid Death: ರಾಜ್ಯದಲ್ಲಿ ಇಳಿಯುತ್ತಿರುವ ಕೊರೋನಾ ಕೇಸ್; ಇಂದು 14,304 ಜನರಲ್ಲಿ ಸೋಂಕು ಪತ್ತೆ, 464 ಜನ ಸಾವು!

ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 14,304 ಜನ ಸೋಂಕಿಗೆ ತುತ್ತಾಗಿದ್ದಾರೆ. ಇನ್ನೂ 382 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 3,418 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 276 ಜನ ಸಾವನ್ನಪ್ಪಿದ್ದಾರೆ.

ಮೃತ ಸೋಂಕಿತರ ಅಂತ್ಯಕ್ರಿಯೆ.

ಮೃತ ಸೋಂಕಿತರ ಅಂತ್ಯಕ್ರಿಯೆ.

 • Share this:
  ಬೆಂಗಳೂರು (ಜೂನ್. 01); ಕಳೆದ ಐದು ವಾರಗಳಿಂದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಸತತ ಏರಿಕೆಯ ಹಾದಿಯಲ್ಲಿ ಕೊರೋನಾ ವೈರಸ್​ ಇದೀಗ ಹಂತಹಂತವಾಗಿ ಇಳಿಯುತ್ತಿದೆ. ಕಳೆದ ವಾರದವರೆಗೆ ದಿನವೊಂದಕ್ಕೆ ಸರಿ ಸುಮಾರು 25 ರಿಂದ 30 ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಸಾವಿನ ಸಂಖ್ಯೆಯೂ ಆಘಾತಕಾರಿಯಾಗಿತ್ತು. ಆದರೆ, ಇದೀಗ ಸೋಂಕಿತರ ಸಂಖ್ಯೆ 15ಕ್ಕಿಂತ ಕೆಳಕ್ಕೆ ಇಳಿದಿರುವುದು ತುಸು ನೆಮ್ಮದಿಗೆ ಕಾರಣವಾಗಿದೆ. ಈ ನಡುವೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 14,304 ಜನ ಸೋಂಕಿಗೆ ತುತ್ತಾಗಿದ್ದಾರೆ. ಇನ್ನೂ 382 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 3,418 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 276 ಜನ ಸಾವನ್ನಪ್ಪಿದ್ದಾರೆ. ಅಲ್ಲದೆ, 5483 ಜನ ಡಿಸ್ವಾರ್ಜ್ ಆಗಿದ್ದು, ಆಕ್ಟಿವ್ ಕೇಸ್​ಗಳ ಸಂಖ್ಯೆ 1,43,702 ಕ್ಕೆ ಇಳಿದಿದೆ.

  ರಾಜ್ಯದಲ್ಲಿ ಕೊರೋನಾ ಸೋಂಕು ನಿವಾರಣೆಯ ಸಂಬಂಧ ಈಗಾಗಲೇ ಜೂನ್​07ರ ವರೆಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಕೊರೋನಾ ಸೋಂಕನ್ನು ತಡೆಯಲು ಲಾಕ್​ಡೌನ್ ಒಂದೇ ಏಕೈಕ ಮಾರ್ಗ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿಯೇ ಕಳೆದ ಕೆಲ ದಿನಗಳಿಂದ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದೆ. ಹೀಗಾಗಿ ಜೂನ್ 07ರ ನಂತರವೂ ಲಾಕ್​ಡೌನ್​ ಅನ್ನು ಮುಂದುವರೆಸಬೇಕು ಎಂದು ಹಲವರು ಬೇಡಿಕೆಯನ್ನು ಮುಂದಿಡುತ್ತಿದ್ದಾರೆ.

  ಆದರೆ, ಈ ಬಗ್ಗೆ ಈವರೆಗೂ ಯಾವುದೇ ನಿರ್ಧಾರಕ್ಕೆ ಬರದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನಾಳೆ ಸಂಜೆ 6 ಗಂಟೆಗೆ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮತ್ತೊಂದು ಸುತ್ತಿನ ಲಾಕ್​ಡೌನ್​ ಹೇರುವ ಬಗ್ಗೆ ಚರ್ಚೆ ನಡೆಸಿ ಆ ನಂತರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನೂ ಹಲವು ರಾಜ್ಯಗಳು ಈಗಾಗಲೇ ಲಾಕ್​ಡೌನ್ ಅನ್ನು ಮತ್ತೊಂದು ಅವಧಿಗೆ ವಿಸ್ತರಣೆ ಮಾಡಿದ್ದು, ಕರ್ನಾಟಕ ಸರ್ಕಾರ ಸಹ ಇದೇ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.

  ಭಾರತದಲ್ಲಿ ಕೊರೋನಾ ಸ್ಥಿತಿ:

  ಮೊದಲ ಅಲೆಗಿಂತಲೂ ತೀವ್ರವಾಗಿ ದೇಶವನ್ನು ಕಾಡಿ ಕಂಗೆಡಿಸಿದ್ದ ಕೊರೋನಾ ಎರಡನೇ ಅಲೆ ನಿಧಾನಕ್ಕೆ ಕೊನೆಯಾಗುವ ಲಕ್ಷಣಗಳು ಗೋಚರಿಸತೊಡಗಿವೆ. 54 ದಿನದ ಬಳಿಕ 1.27 ಲಕ್ಷ ಕೇಸುಗಳು ದಾಖಲಾಗಿರುವುದು ಇಂಥದೊಂದು ಆಶಾವಾದ ಮೂಡಿಸಿದೆ. ಅಲ್ಲದೆ 43 ದಿನಗಳ ಬಳಿಕ ಮೊದಲ ಬಾರಿಗೆ ಸಕ್ರೀಯ ಪ್ರಕರಣಗಳ ಸಂಖ್ಯೆ 20 ಲಕ್ಷಕ್ಕಿಂತ ಕಡಿಮೆ ಆಗಿರುವುದು ಮತ್ತು ಒಂದೇ ದಿನ 1,30,572 ಸಕ್ರೀಯ ಪ್ರಕರಣಗಳು ಇಳಿಕೆ ಆಗಿರುವುದು ತುಸು ಸಮಾಧಾನ ಮೂಡಿಸಿದೆ.

  ಇದನ್ನೂ ಓದಿ: Corona 3rd Wave: ಮಕ್ಕಳಿಗೆ ಬೆದರಿಕೆಯಾಗಲಿರುವ ಕೊರೋನಾ ಮೂರನೇ ಅಲೆ; ಶೀಘ್ರದಲ್ಲೇ ಸರ್ಕಾರದಿಂದ ಮಕ್ಕಳಿಗೆ ಮಾರ್ಗಸೂಚಿ-ಲಸಿಕೆ!

  ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನ ಎರಡನೇ ಅಲೆ ತಾರಕಕ್ಕೇ ಏರುತ್ತದೆ. ತಿಂಗಳ ಕೊನೆಯಲ್ಲಿ ಕಡಿಮೆ ಆಗುತ್ತದೆ ಎಂಬ ತಜ್ಞರು ಅಭಿಪ್ರಾಯ ಪಟ್ಟಿದ್ದರು. ಅದೇ ರೀತಿ ಮೇ 6ರಂದು 4,14,188 ಪ್ರಕರಣಗಳು ಕಂಡುಬಂದಿದ್ದು ದೇಶದಲ್ಲಿ ದಿನ ಒಂದರಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿದ್ದವು. ನಂತರ ಕೆಳಮುಖವಾಗಿ ಸಾಗಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು. ಮೇ 24ರಂದು ಮೊದಲ ಬಾರಿಗೆ ಎರಡು ಲಕ್ಷಕ್ಕಿಂತ ಕಡಿಮೆ (1,96,427) ಪ್ರಕರಣಗಳು ಪತ್ತೆ ಆಗಿದ್ದವು. ಮೇ 30ರಂದು ಕೇಸುಗಳ ಸಂಖ್ಯೆ ಒಂದೂವರೆ ಲಕ್ಷದ (1,52,734) ಸಮೀಪ ಬಂದಿದೆ. ಈಗ ಮೇ 31ರಂದು 1,27,510 ಪ್ರಕರಣಗಳು ಪತ್ತೆ ಆಗಿವೆ.

  ಇದನ್ನೂ ಓದಿ: ಬ್ಲಾಕ್​ ಫಂಗಸ್​: ಭಾರತದ ನೀತಿಯನ್ನು ಪ್ರಶ್ನಿಸಿ ಕೇಂದ್ರದ ಎದುರು 3 ಪ್ರಶ್ನೆಗಳನ್ನಿಟ್ಟ ರಾಹುಲ್ ಗಾಂಧಿ!

  ಮಂಗಳವಾರ 1,27,510 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,81,75,044ಕ್ಕೆ ಏರಿಕೆ ಆಗಿದೆ.‌ ಮಂಗಳವಾರ 2,795 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,31,895ಕ್ಕೆ ಏರಿಕೆ ಆಗಿದೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 21 ಕೋಟಿ ದಾಟಿದೆ.‌ ಈವರೆಗೆ 21,60,46,638 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ.

  ದೇಶದಲ್ಲಿ ಇನ್ನೂ 20,26,092 ಆಕ್ಟಿವ್ ಕೇಸುಗಳಿವೆ. ಈವರೆಗೆ 2,59,47,629 ಮಂದಿ ಕೊರೋನಾದಿಂದ ಗುಣಮುಖ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,55,287 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸತತವಾಗಿ 19ನೇ ದಿನವೂ ದೈನಂದಿನ ಹೊಸ ಪ್ರಕರಣಗಳಿಗಿಂತ ಗುಣ ಆಗುವವರ ಸಂಖ್ಯೆ ಹೆಚ್ಚಾಗಿದೆ. ಸಾಪ್ತಾಹಿಕ ಪಾಸಿಟಿವಿಟಿ ದರ ಪ್ರಸ್ತುತ 9.04ರಷ್ಟಾಗಿದೆ‌.‌ ದೈನಂದಿನ ಪಾಸಿಟಿವಿಟಿ ದರ 6.62ರಷ್ಟಾಗಿದ್ದು ಸತತವಾಗಿ 8 ದಿನಗಳವರೆಗೆ ಶೇಕಡಾ 10ಕ್ಕಿಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ‌.
  Published by:MAshok Kumar
  First published: