HOME » NEWS » Coronavirus-latest-news » KARNATAKA GOVERNMENT RAISES MASK FINE TO 1000 IN BANGALORE KARNATAKA UNLOCK GUIDELINES SCT

ಮನೆಯಿಂದ ಹೊರಹೋಗುವ ಮುನ್ನ ಎಚ್ಚರ!; ಮಾಸ್ಕ್ ಧರಿಸದಿದ್ದರೆ 1,000 ರೂ. ದಂಡ

ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂ. ಹಾಗೂ ಇತರೆ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು.

news18-kannada
Updated:October 2, 2020, 11:07 AM IST
ಮನೆಯಿಂದ ಹೊರಹೋಗುವ ಮುನ್ನ ಎಚ್ಚರ!; ಮಾಸ್ಕ್ ಧರಿಸದಿದ್ದರೆ 1,000 ರೂ. ದಂಡ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಅ. 2): ಇನ್ನುಮುಂದೆ ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಟ್ಟರೆ ದುಬಾರಿ ದಂಡ ತೆರಬೇಕಾದೀತು. ಹೌದು, ಕೊರೋನಾ ಸೋಂಕಿನ ಪ್ರಮಾಣ ಮಿತಿಮೀರುತ್ತಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ತೋರುತ್ತಿರುವವರಿಗೆ ದುಬಾರಿ ದಂಡ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂ. ಹಾಗೂ ಇತರೆ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರಾ ಎಂದು ಅಂಗಡಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕಂಟೇನ್​ಮೆಂಟ್ ಪ್ರದೇಶದಲ್ಲಿ ಲಾಕ್​ಡೌನ್ ಮುಂದುವರಿಕೆಯಾಗಲಿದೆ. ಶಾಲೆಗಳ ಪುನರಾರಂಭಕ್ಕೆ ಅ. 15ರ ನಂತರ ಪರಿಸ್ಥಿತಿ ಆಧರಿಸಿ ಹಂತ ಹಂತವಾಗಿ ತಿರ್ಮಾನ ತೆಗೆದುಕೊಳ್ಳಲಾಗುವುದು. ಪೋಷಕರ ಹಾಗೂ ತಂದೆ ತಾಯಿಯ ಲಿಖಿತ ಅನುಮತಿಯೊಂದಿಗೆ ಮಾತ್ರ ಮಕ್ಕಳು ಶಾಲೆಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅರ್ಧಂಬರ್ಧ ಮಾಸ್ಕ್ ಧರಿಸುವವರಿಗೂ ಸಹ ದಂಡ ಅನ್ವಯವಾಗಲಿದೆ.  ಇತ್ತೀಚಿನ‌ ದಿನಗಳಲ್ಲಿ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Youtube Video

ಹೊಸ ನಿಯಮದ ಅನ್ವಯ, ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ‌ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು. ಎಲ್ಲ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶವಿರುವುದಿಲ್ಲ. ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅನುಕರಿಸಬೇಕು. ಕೆಲಸದ ಸಂಪೂರ್ಣ ಪ್ರದೇಶವನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.
Published by: Sushma Chakre
First published: October 2, 2020, 11:07 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories