HOME » NEWS » Coronavirus-latest-news » KARNATAKA GOVT TO SUSPEND BIOMETRIC ATTENDANCE TEMPORARILY FOR CORONA VIRUS THREAT RH

ಕೊರೋನಾ ವೈರಸ್ ಭೀತಿಯಿಂದ ಬಯೋಮೆಟ್ರಿಕ್ ಹಾಜರಾತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ರಾಜ್ಯ ಸರ್ಕಾರ

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಐಟಿ ಕಂಪನಿಗಳೊಂದಿಗೆ ಮಾತನಾಡಿದ್ದು, ಕೊರೋನಾ ವೈರಸ್​ ತಡೆಗಟ್ಟುವ ನಿಟ್ಟಿನಲ್ಲಿ ಹಾಜರಾತಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಹೇಳಿದ್ದಾರೆ. ಐಟಿ ಮತ್ತು ಕಾರ್ಪೋರೆಟ್ ಕಂಪನಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿವೆ.

news18-kannada
Updated:March 7, 2020, 5:46 PM IST
ಕೊರೋನಾ ವೈರಸ್ ಭೀತಿಯಿಂದ ಬಯೋಮೆಟ್ರಿಕ್ ಹಾಜರಾತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ರಾಜ್ಯ ಸರ್ಕಾರ
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಐಟಿ ಮತ್ತು ಕಾರ್ಪೋರೆಟ್ ಕಂಪನಿಗಳು ಸೇರಿದಂತೆ ಎಲ್ಲ ಕಚೇರಿಗಳ ಹಾಜರಾತಿ ಬಯೋಮೆಟ್ರಿಕ್ ಸೇವೆಯನ್ನು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ರದ್ದುಗೊಳಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯಲ್ಲಿ ಶನಿವಾರ ವೈದ್ಯಕೀಯ ಮೂಲಸೌಕರ್ಯ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಐಟಿ ಕಂಪನಿಗಳೊಂದಿಗೆ ಮಾತನಾಡಿದ್ದು, ಕೊರೋನಾ ವೈರಸ್​ ತಡೆಗಟ್ಟುವ ನಿಟ್ಟಿನಲ್ಲಿ ಹಾಜರಾತಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಹೇಳಿದ್ದಾರೆ. ಐಟಿ ಮತ್ತು ಕಾರ್ಪೋರೆಟ್ ಕಂಪನಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿವೆ. ಸರ್ಕಾರಿ ಕಚೇರಿಗಳಲ್ಲೂ ಬಯೋಮೆಟ್ರಿಕ್ ಹಾಜರಾತಿ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ನೆನ್ನೆ ಯೋಚಿಸಲಾಗಿತ್ತು ಎಂದು ಸುಧಾಕರ್ ತಿಳಿಸಿದರು.

ಕರ್ನಾಟಕದಲ್ಲಿ ಒಂದೇ ಒಂದು ಕೊರೋನಾ ವೈರಸ್ ಪ್ರಕರಣ ಈವರೆಗೂ ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತೆಯಾಗಿ ಹಲವು ಕ್ರಮಗಳನ್ನು ಪರಿಣಾಮಕಾರಿಯಾಗಿ ತೆಗೆದುಕೊಳ್ಳಲಾಗಿದೆ. ಹಳ್ಳಿಯಿಂದ ಹಿಡಿದು ರಾಜಧಾನಿ ಬೆಂಗಳೂರಿನವರೆಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಿದ್ದಾರೆ. ಅಲ್ಲದೇ, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನು ಓದಿ: ಮಗನ ಮದುವೆಗೆ ಮತದಾರರಿಗೆ ಯಾವುದೇ ಉಡುಗೊರೆ ನೀಡುತ್ತಿಲ್ಲ, ಇದೆಲ್ಲಾ ಸುಳ್ಳು ಸುದ್ದಿ: ಅನಿತಾ ಕುಮಾರಸ್ವಾಮಿ 
First published: March 7, 2020, 5:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories