HOME » NEWS » Coronavirus-latest-news » KARNATAKA HAS REPORTED 39 POSITIVE CASES FOUND IN STATE GNR

ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್​​ ಪ್ರಕರಣ; ಸೋಂಕಿತರ ಸಂಖ್ಯೆ 39ಕ್ಕೇರಿಕೆ

ಇಂದು ಒಂದೇ ದಿನ ಆರು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾಸರಗೋಡಿನ ಓರ್ವ ವ್ಯಕ್ತಿ ಮಾ. 20ರಂದು ದುಬೈನಿಂದ ಮಂಗಳೂರು ಏರ್​ಪೋರ್ಟ್​ಗೆ ಆಗಮಿಸಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಅವರಿಗೆ ಕೊರೋನಾ ವೈರಸ್​ ತಗುಲಿರುವುದು ಖಚಿತವಾಗಿದೆ.

news18-kannada
Updated:March 24, 2020, 5:03 PM IST
ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್​​ ಪ್ರಕರಣ; ಸೋಂಕಿತರ ಸಂಖ್ಯೆ 39ಕ್ಕೇರಿಕೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಮಾ.24): ರಾಜ್ಯದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್​​ ಪ್ರಕರಣ ಪತ್ತೆಯಾಗಿದೆ.  ಇಂದು ಒಂದೇ ದಿನ ಆರು ಮಂದಿಗೆ ಸೋಂಕು ಇರುವುದು ಧೃಡವಾಗಿದ್ದು, ಕರ್ನಾಕದಲ್ಲಿ ಸೋಂಕಿತರ ಸಂಖ್ಯೆ 39ಕ್ಕೇರಿದೆ.

ಈಗಾಗಲೇ ಕಲಬುರ್ಗಿಯಲ್ಲಿ ವೃದ್ಧರೊಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾನುವಾರದಿಂದ ಸೋಮವಾರದವರೆಗೆ 7 ಹೊಸ ಸೋಂಕಿತ ಪ್ರಕರಣಗಳು ದಾಖಲಾಗಿದ್ದವು. ದುಬೈನಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಕೇರಳ ಮೂಲದ 46 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ದುಬೈನಿಂದ ವಾಪಸ್ಸಾಗಿದ್ದ 38 ವರ್ಷದ ವ್ಯಕ್ತಿಯಲ್ಲೂ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಒಂದೇ ದಿನ ಆರು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾಸರಗೋಡಿನ ಓರ್ವ ವ್ಯಕ್ತಿ ಮಾ. 20ರಂದು ದುಬೈನಿಂದ ಮಂಗಳೂರು ಏರ್​ಪೋರ್ಟ್​ಗೆ ಆಗಮಿಸಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಅವರಿಗೆ ಕೊರೋನಾ ವೈರಸ್​ ತಗುಲಿರುವುದು ಖಚಿತವಾಗಿದೆ.

ಇದನ್ನೂ ಓದಿ: ಪೆಟ್ರೋಲ್ ಬಂಕ್ ಮುಚ್ಚೀತು ಜೋಕೆ - ಜನರು ರಸ್ತೆಗೆ ಬರದಂತೆ ಬಂಕ್​ಗಳನ್ನೇ ಮುಚ್ಚಲು ಸರ್ಕಾರಕ್ಕೆ ಸಲಹೆ

ಬೆಂಗಳೂರೊಂದರಲ್ಲೇ ಒಟ್ಟು 25 ಪ್ರಕರಣಗಳು ಪತ್ತೆಯಾಗಿದೆ. ಸೋಂಕು ತಗುಲಿದ್ದ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರ್ಗಿಯಲ್ಲಿ 3, ಕೊಡಗಿನಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 3, ಮೈಸೂರಿನಲ್ಲಿ 2, ಧಾರವಾಡದಲ್ಲಿ 1 ಮತ್ತು ದಕ್ಷಿಣ ಕನ್ನಡದಲ್ಲಿ 1, ಉತ್ತರ ಕನ್ನಡದಲ್ಲಿ 2 ಪ್ರಕರಣ ಪತ್ತೆಯಾಗಿದೆ.

ಇನ್ನು, ದೇಶದಲ್ಲಿ ಕೊರೋನಾ ವೈರಸ್​​​ಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಮುಂಬೈನಲ್ಲಿ 65 ವರ್ಷದ ವ್ಯಕ್ತಿ ಕೊರೋನಾ ವೈರಸ್​​ನಿಂದಾಗಿ ಮೃತಪಟ್ಟಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸುಮಾರು 500 ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
!function(e,i,n,s){var t="InfogramEmbeds",d=e.getElementsByTagName("script")[0];if(window[t]&&window[t].initialized)window[t].process&&window[t].process();else if(!e.getElementById(n)){var o=e.createElement("script");o.async=1,o.id=n,o.src="https://e.infogram.com/js/dist/embed-loader-min.js",d.parentNode.insertBefore(o,d)}}(document,0,"infogram-async");
First published: March 24, 2020, 4:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories