Coronavirus Updates: ಕರ್ನಾಟಕದಲ್ಲಿ ಕೋವಿಡ್​​-19 ಕಾವು: ಇಂದು 2,738 ಹೊಸ ಕೇಸ್​​, 40 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಒಟ್ಟು, 41,581 ಮಂದಿ ಪೈಕಿ 16248 ಮಂದಿಗೆ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ಧಾರೆ. ಸದ್ಯ 24572 ಸಕ್ರಿಯ ಕೇಸುಗಳು ಮಾತ್ರ ಬಾಕಿ ಇವೆ. ಈ ಮಾರಕ ಕೊರೋನಾಗೆ ಇಂದು ಒಂದೇ ದಿನ 73 ಮಂದಿ ಅಸುನೀಗಿದ್ದಾರೆ. ಹೀಗಾಗಿ ರಾಜ್ಯದ ಕೋವಿಡ್​-19 ಮೃತರ ಸಂಖ್ಯೆಯೂ 757ಕ್ಕೆ ಏರಿಕೆಯಾಗಿದೆ.

news18-kannada
Updated:July 13, 2020, 8:29 PM IST
Coronavirus Updates: ಕರ್ನಾಟಕದಲ್ಲಿ ಕೋವಿಡ್​​-19 ಕಾವು: ಇಂದು 2,738 ಹೊಸ ಕೇಸ್​​, 40 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
  • Share this:
ಬೆಂಗಳೂರು(ಜು.13): ರಾಜ್ಯದಲ್ಲಿ ಮಾರಕ ಕೊರೋನಾ ಹಾವಳಿ ಮುಂದುವರೆದಿದೆ. ಇದರ ಪರಿಣಾಮ ಇಂದು 2738 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 40 ಸಾವಿರ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇದುವರೆಗೂ 41581 ಮಂದಿಗೆ ಕೊರೋನಾ ಬಂದಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ- 1315, ಮೈಸೂರು- 151, ಬಳ್ಳಾರಿ-106, ವಿಜಯಪುರ-86, ಶಿವಮೊಗ್ಗ-74, ಚಿಕ್ಕಬಳ್ಳಾಪುರ- 42, ದಕ್ಷಿಣ ಕನ್ನಡ- 131, ಉತ್ತರ ಕನ್ನಡ- 37, ಕಲಬುರಗಿ- 89, ದಾವಣಗೆರೆ- 45, ಉಡುಪಿ- 53, ಕೊಡಗು- 29, ಧಾರವಾಡ- 71 ಕೇಸುಗಳು ವರದಿಯಾಗಿವೆ.

ಒಟ್ಟು, 41,581 ಮಂದಿ ಪೈಕಿ 16248 ಮಂದಿಗೆ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ಧಾರೆ. ಸದ್ಯ 24572 ಸಕ್ರಿಯ ಕೇಸುಗಳು ಮಾತ್ರ ಬಾಕಿ ಇವೆ. ಈ ಮಾರಕ ಕೊರೋನಾಗೆ ಇಂದು ಒಂದೇ ದಿನ 73 ಮಂದಿ ಅಸುನೀಗಿದ್ದಾರೆ. ಹೀಗಾಗಿ ರಾಜ್ಯದ ಕೋವಿಡ್​-19 ಮೃತರ ಸಂಖ್ಯೆಯೂ 757ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಎಂದಿನಂತೆಯೇ ಮುಂದುವರೆದಿದೆ. ಇದುವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಡೆಡ್ಲಿ ಕೊರೋನಾ ವೈರಸ್​ನಿಂದ ಮೃತಪಟ್ಟವರ ಸಂಖ್ಯೆ 23 ಸಾವಿರದ ಗಡಿ ದಾಟಿದೆ.

ಹೀಗೆ ಕೊರೋನಾ ಸೋಂಕು ಮಿತಿಮೀರಿ ಹರಡುತ್ತಿರುವ ಕಾರಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಕಾಲ ಲಾಕ್​ಡೌನ್ ಮಾಡಲಾಗಿದೆ. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್​​ ಭಾಸ್ಕರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಜುಲೈ 14ನೇ ತಾರೀಕು ಮಂಗಳವಾರ ರಾತ್ರಿ 8 ಗಂಟೆಯಿಂದಲೇ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್​ಡೌನ್ ಮಾಡಲಾಗುವುದು ಎಂದು ಈ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bengaluru Lockdown: ಜು.14ರಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್​ಡೌನ್​ - ಸರ್ಕಾರ ಅಧಿಕೃತ ಆದೇಶ​ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್​​ ಭಾಸ್ಕರ್ ಅಧಿಕೃತ ಆದೇಶ ಪ್ರತಿಯಲ್ಲಿ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೊರೋನಾ ವೈರಸ್​​ ತಹಬದಿಗೆ ತರಲು ಈ ಲಾಕ್​ಡೌನ್​​ ಸಂದರ್ಭದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್​​ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Published by: Ganesh Nachikethu
First published: July 13, 2020, 8:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading