HOME » NEWS » Coronavirus-latest-news » KARNATAKA HEALTH MINISTER DR K SUDHAKAR SAYS NO COVID 19 LOCKDOWN IN KARNATAKA AMP SAKLB SCT

ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಚಿವ ಡಾ. ಸುಧಾಕರ್

ರಾಜ್ಯಕ್ಕೆ ಹೊಂದಿಕೊಂಡಿರೋ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಆರೋಗ್ಯ ಸಚಿವ ಕೆ. ಸುಧಾಕರ್ ಖಚಿತ ಪಡಿಸಿದ್ದಾರೆ.

news18-kannada
Updated:February 21, 2021, 3:19 PM IST
ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಚಿವ ಡಾ. ಸುಧಾಕರ್
ಸಚಿವ ಕೆ. ಸುಧಾಕರ್.
  • Share this:
ಕಲಬುರ್ಗಿ (ಫೆ. 21): ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಗೆ ತರೋ ಉದ್ದೇಶ ಸದ್ಯಕ್ಕಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಆರೋಗ್ಯ ಸಚಿವ ಕೆ. ಸುಧಾಕರ್ ಖಚಿತ ಪಡಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕೇರಳ ಮತ್ತಿತರ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗಿದೆ. ರಾಜ್ಯದಲ್ಲಿ ಈ ಪ್ರಮಾಣದಲ್ಲಿ ಹೆಚ್ಚಾಗಿಲ್ಲ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆಯಿಲ್ಲ. ಆದರೆ ರಾಜ್ಯಕ್ಕೆ ಹೊಂದಿಕೊಂಡಿರೋ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ  ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ ಎಂದರು.

ನಿನ್ನೆಯಷ್ಟೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕಲಬುರ್ಗಿ ಜಿಲ್ಲಾಡಳಿತದೊಂದಿಗೆ ಮಾತನಾಡುತ್ತೇನೆ. ಕಲಬುರ್ಗಿ ಜಿಲ್ಲೆ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದರಿಂದ ಸೂಕ್ಷ್ಮವಾಗಿದೆ. ಇದರ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನ ಸಿದ್ದಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿಯಾದ ಮಾರ್ಗಸೂಚಿಗಳನ್ನ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಬಿಟ್ಟು ಹೋದವರು ಮತ್ತೆ ಪಕ್ಷಕ್ಕೆ ವಾಪಾಸ್ ಬರಬಹುದು; ಡಿಕೆ ಶಿವಕುಮಾರ್ ಆಹ್ವಾನ

ಪಂಚಮಸಾಲಿ 2ಎ ಮೀಸಲಾತಿಗಾಗಿ ಹೋರಾಟ ತೀವ್ರಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಸುಧಾಕರ್, ಇದಕ್ಕಾಗಿ ವಿಶೇಷ ಸಮಿತಿ ರಚಿಸಲಾಗಿದೆ. ಪಂಚಮಸಾಲಿ, ಕುರುಬ ಮತ್ತಿತರ ಸಮುದಾಯದವರು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದಾರೆ. ವಿಶೇಷ ಸಮಿತಿಯಿಂದ ವರದಿ ತರಿಸಿಕೊಳ್ಳಲಾಗುವುದು. ಎಲ್ಲಾ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು. ಅನ್ಯಾಯ ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು. ಇದು ಗಂಭೀರ ಮತ್ತು ಸೂಕ್ಷ್ಮವಾದ ವಿಚಾರವಾಗಿದೆ. ಉಳಿದ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಿಎಂ ನೋಡಿಕೊಳ್ಳುತ್ತಾರೆ. ಆದರೆ ಇದಕ್ಕಾಗಿ ಮಠಾಧೀಶರು ಗಡುವು ನೀಡೋದು ಸರಿಯಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಕಲಬುರ್ಗಿಗೆ ಏಮ್ಸ್​ ಕೈ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಏಮ್ಸ್ ಕಲಬುರ್ಗಿಯಲ್ಲೇ ಸ್ಥಾಪಿಸೋ ಕುರಿತು ಯಾವುದೇ ನಿರ್ಧಾರವಾಗಿರಲಿಲ್ಲ. ಕೇಂದ್ರ ಸರ್ಕಾರ ಹುಬ್ಬಳ್ಳಿಯಲ್ಲಿ ಸ್ಥಾಪಿಸೋ ಚಿಂತನೆ ನಡೆಸಿದೆ. ಕಲಬುರ್ಗಿಯ ಇ.ಎಸ್.ಐ.ಯಲ್ಲಿ ಏಮ್ಸ್ ಸ್ಥಾಪನೆಗೆ ಎಲ್ಲ ಸೌಕರ್ಯಗಳಿವೆ. ರಾಜ್ಯಕ್ಕೆ ಎರಡು ಏಮ್ಸ್  ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ತೇವೆ. ಎಲ್ಲವೂ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿಸಿದೆ ಎಂದು ತಿಳಿಸಿದರು.
Published by: Sushma Chakre
First published: February 21, 2021, 3:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories