HOME » NEWS » Coronavirus-latest-news » KARNATAKA HIGH COURT ORDERS TO INITIATE STRICT ACTION AGAINST POLITICIANS IF BREAK CORONA RULES SNVS

ಕೋವಿಡ್ ನಿಯಮ ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಪಾಲಿಸದೆ ಕೊರೋನಾ ನಿಯಮಗಳನ್ನ ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧವೂ ಕಠಿಣ ಕ್ರಮ ಜರುಗಬೇಕೆಂದು ಹೈಕೋರ್ಟ್ ಆದೇಶಿಸಿದೆ.

news18-kannada
Updated:July 17, 2020, 1:31 PM IST
ಕೋವಿಡ್ ನಿಯಮ ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
  • Share this:
ಬೆಂಗಳೂರು(ಜುಲೈ 17): ರಾಜ್ಯದ ಅನೇಕ ರಾಜಕಾರಣಿಗಳು ಸಾರ್ವಜನಿಕವಾಗಿ ಯಾವುದೇ ಸಾಮಾಜಿಕ ಅಂತರ ಪಾಲನೆ ಮಾಡುತ್ತಿಲ್ಲ, ಮಾಸ್ಕ್ ಧರಿಸುತ್ತಿಲ್ಲ ಎಂಬಿತ್ಯಾದಿ ಆರೋಪಗಳು ಬಹಳಷ್ಟು ಕೇಳಿಬರುತ್ತಲೇ ಇವೆ. ರಾಜ್ಯ ಉಚ್ಚ ನ್ಯಾಯಾಲಯ ಈ ಆರೋಪಗಳನ್ನ ಗಂಭೀರವಾಗಿ ಪರಿಗಣಿಸಿದ್ದು, ಕೊರೋನಾ ನಿಯಮಗಳನ್ನ ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕಟಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದೆ.

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ, ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ವಕೀಲರಾದ ಪುತ್ತಿಗೆ ರಮೇಶ್ ಮತ್ತು ಜಿ.ಆರ್. ಮೋಹನ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಬಳಿಕ ನ್ಯಾಯಪೀಠ ಈ ಅಭಿಪ್ರಾಯ ನೀಡಿತು.

ಇದನ್ನೂ ಓದಿ: ತಿಂಗಳಿನಿಂದ ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ತಂದೆ ತಾಯಿಯನ್ನು ನೋಡದೆ ಮಗಳು ಕಣ್ಣೀರು

ರಾಜಕಾರಣಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಸಭೆ ಸಮಾರಂಭದ ವೇಳೆ ಮಾಸ್ಕ್ ಧರಿಸುತ್ತಿಲ್ಲ ಎಂದು ಪಿಐಎಲ್​ನಲ್ಲಿ ಆಪಾದಿಸಲಾಗಿತ್ತು. ಬಳ್ಳಾರಿಯ ಪರಮೇಶ್ವರ್ ನಾಯಕ್ ಅವರ ಮಗನ ಮದುವೆ ಕಾರ್ಯಕ್ರಮವನ್ನು ಅರ್ಜಿದಾರರು ಪ್ರಸ್ತಾಪಿಸಿದ್ದರು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಪಾಲ್ಗೊಂಡಿದ್ದರು. ಈ ವೇಳೆ ಕೇಂದ್ರ ಸರ್ಕಾರ ಹೊರಡಿಸಿದ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನ ಗಾಳಿಗೆ ತೂರಲಾಗಿದೆ. ಕೆಂಪೇಗೌಡ ಪುತ್ಥಳಿ ಸಮಾರಂಭದಲ್ಲೂ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಎತ್ತಿತೋರಿಸಾಗಿತ್ತು.

Youtube Video


ಕೊರೋನಾ ನಿಯಮಗಳನ್ನ ಯಾರೇ ಉಲ್ಲಂಘಿಸಿದರೂ, ಅವರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಪೀಠ ಸೂಚಿಸಿದೆ.
Published by: Vijayasarthy SN
First published: July 17, 2020, 1:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories