HOME » NEWS » Coronavirus-latest-news » KARNATAKA LOCKDOWN 8 DISTRICTS DCS REQUESTED CM BS YEDIYURAPPA TO EXTEND LOCKDOWN TILL JUNE 20 UNLOCK SCT

Karnataka Lockdown: ಅನ್​ಲಾಕ್ ಬೇಡವೆಂದು ಸಿಎಂ ಸಭೆಯಲ್ಲಿ ಒತ್ತಾಯ; ಕರ್ನಾಟಕದ ಲಾಕ್​ಡೌನ್​ ಭವಿಷ್ಯ ಇಂದು ಸಂಜೆ ನಿರ್ಧಾರ

Karnataka Lockdown Extension: 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್​ಡೌನ್ ವಿಸ್ತರಣೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಬಳಿ ಮನವಿ ಮಾಡಿದ್ದಾರೆ.

news18-kannada
Updated:June 10, 2021, 1:54 PM IST
Karnataka Lockdown: ಅನ್​ಲಾಕ್ ಬೇಡವೆಂದು ಸಿಎಂ ಸಭೆಯಲ್ಲಿ ಒತ್ತಾಯ; ಕರ್ನಾಟಕದ ಲಾಕ್​ಡೌನ್​ ಭವಿಷ್ಯ ಇಂದು ಸಂಜೆ ನಿರ್ಧಾರ
ಬಿಎಸ್ ಯಡಿಯೂರಪ್ಪ
  • Share this:
ಬೆಂಗಳೂರು (ಜೂನ್ 10): ಕರ್ನಾಟಕದಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ ಲಾಕ್​ಡೌನ್ ಜೂನ್ 14ರಂದು ತೆರವುಗೊಳ್ಳಲಿದೆ. ಇದಾದ ಬಳಿಕ ಅನ್​ಲಾಕ್ ಮಾಡಬೇಕಾ? ಅಥವಾ ಲಾಕ್​ಡೌನ್ ವಿಸ್ತರಣೆ ಮಾಡಬೇಕಾ? ಎಂಬುದು ಸರ್ಕಾರದ ಮುಂದಿರುವ ಅತಿದೊಡ್ಡ ಪ್ರಶ್ನೆಯಾಗಿದೆ. ಹೀಗಾಗಿ, ಇಂದು 8 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಯಾ ಜಿಲ್ಲೆಗಳ ಕೊರೋನಾ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇಂದು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿರುವ ಯಡಿಯೂರಪ್ಪ ಅನ್​ಲಾಕ್ ಬಗ್ಗೆ ಇಂದು ಸಂಜೆಯೊಳಗೆ ನಿರ್ಧಾರ ಮಾಡುವ ಸಾಧ್ಯತೆಯಿದೆ.

8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್​ಡೌನ್ ವಿಸ್ತರಣೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಬಳಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಯಾದಗಿರಿ ಸೇರಿದಂತೆ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಜೂನ್ 20ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲು ಮನವಿ ಮಾಡಿದ್ದಾರೆ. ಇಂದು ಸಂಜೆ ಇನ್ನೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.ಲಾಕ್ ಡೌನ್ ಬದಲಾಗಿ ಟೆಸ್ಟಿಂಗ್ ಜಾಸ್ತಿ ಮಾಡಿ ಎಂದು ಸಲಹೆ ನೀಡಿದ ಸಿಎಂ ಯಡಿಯೂರಪ್ಪ ಟೆಸ್ಟಿಂಗ್ ಜೊತೆಗೆ ಬಿಗಿ ಯಾದ ಕ್ರಮಗಳನ್ನು ಜಾರಿ ಮಾಡಿ ಎಂದು ಸೂಚಿಸಿದ್ದಾರೆ. ಎಲ್ಲರಿಂದ ಅಭಿಪ್ರಾಯ ಪಡೆದು ಲಾಕ್ ಡೌನ್ ವಿಸ್ತರಣೆ ಮಾಡಬೇಕಾ? ಅಥವಾ ಅನ್ ಲಾಕ್ ಮಾಡಬೇಕಾ? ಎಂಬುದರ ಬಗ್ಗೆ ಸಿಎಂ ನಿರ್ಧಾರ ಮಾಡಲಿದ್ದಾರೆ. ಕೆಲವು ಜಿಲ್ಲಾಧಿಕಾರಿಗಳು ಲಾಕ್ ಡೌನ್ ವಿಸ್ತರಣೆ ಮಾಡಿ ಅಂದಾಗ ಆರ್ಥಿಕ ಚಟುವಟಿಕೆಗೆ ಏನು ಮಾಡೋದು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Karnataka Unlock: ಕರ್ನಾಟಕದಲ್ಲಿ ಹಂತಹಂತವಾಗಿ ಅನ್​ಲಾಕ್?; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಅಂತಿಮವಾಗಿ ಎಲ್ಲರಿಂದ ಅಭಿಪ್ರಾಯ ಪಡೆದು, ಲಾಕ್ ಡೌನ್ ವಿಸ್ತರಣೆನಾ ಅಥವಾ ಅನ್ ಲಾಕ್ ಎಂಬುದರ ಬಗ್ಗೆ ನಿರ್ಧಾರ ಮಾಡಲಿರುವ ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಿಎಂ ಯಡಿಯೂರಪ್ಪ ಆರ್ಥಿಕ ಚಟುವಟಿಕೆಯ ಸಮಸ್ಯೆಯ ಬಗ್ಗೆ ಹೇಳಿದ್ದಾರೆ.

ಬೆಳಗಾವಿ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಒಂದು ವಾರಗಳ ಲಾಕ್ ಡೌನ್ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದಾರೆ. ಜೂನ್ 20ರವರೆಗೂ ತಮ್ಮ ಜಿಲ್ಲೆಗಳಲ್ಲಿ ಲಾಕ್​ಡೌನ್ ಮಾಡಿದರೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ. ಇಂದಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಬಹುತೇಕ ಜಿಲ್ಲೆಗಳ ಡಿಸಿ ಹಾಗೂ ಸಚಿವರಿಂದ ಲಾಕ್ ಡೌನ್ ವಿಸ್ತರಣೆಗೆ ಮನವಿ ಮಾಡಲಾಗಿದೆ. ಈಗಷ್ಟೇ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗ್ತಿದೆ. ಈಗ ಏಕಾಏಕಿ ಲಾಕ್​ಡೌನ್ ಸಡಿಲಿಕೆ ಮಾಡಿದರೆ ಸೋಂಕು ಮತ್ತೆ ಹೆಚ್ಚಳವಾಗಲಿದೆ. ಹೀಗಾಗಿ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಎಂದು ಮನವಿ ಮಾಡಲಾಗಿದೆ.

ಲಾಕ್ ಡೌನ್ ಮುಂದುವರಿಕೆಗೆ ಕೆಲ ಜಿಲ್ಲೆಗಳಿಂದ ಒಲವು ವಿಚಾರವಾಗಿ ಸ್ಥಳೀಯ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಜವಬ್ದಾರಿ ನೀಡಿದ ಸಿಎಂ ಯಡಿಯೂರಪ್ಪನೀವೆಲ್ಲಾ ಕುಳಿತು ಚರ್ಚೆ ಮಾಡಿ ನಿರ್ಧಾರ ಮಾಡಿ ಎಂದು ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಕೆಲವು ಸಚಿವರಿಂದ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದೆ. ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಉಸ್ತುವಾರಿ ಸಚಿವರಿಂದ ಸಭೆ ನಡೆಸಲಾಗುತ್ತಿದೆ. ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಪ್ರಕಟ ಮಾಡಲಿದ್ದಾರೆ. ಯಾವ ಯಾವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ, ಯಾವ ಯಾವ ಜಿಲ್ಲೆಗಳಲ್ಲಿ ಅನ್ ಲಾಕ್ ಎಂಬುದರ ಬಗ್ಗೆ ನಿರ್ಧಾರವಾಗಲಿದೆ.
Youtube Video

ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೊರೋನಾ ಪಾಸಿಟಿವಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಕೆಲವು ನಿರ್ಬಂಧಗಳೊಂದಿಗೆ ಲಾಕ್​ಡೌನ್ ಸಡಿಲಿಕೆ ಮಾಡಿ ಉಳಿದ ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Published by: Sushma Chakre
First published: June 10, 2021, 1:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories