HOME » NEWS » Coronavirus-latest-news » KARNATAKA LOCKDOWN CM BS YEDIYURAPPA MAY ANNOUNCE COMPLETE LOCKDOWN IN KARNATAKA FOR 14 DAYS FROM MAY 10 SCT

Karnataka Lockdown: 14 ದಿನ ಕರ್ನಾಟಕ ಸಂಪೂರ್ಣ ಲಾಕ್​ಡೌನ್?; ಕೆಲವೇ ಕ್ಷಣಗಳಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ

Karnataka Lockdown: ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೇ 10ರಿಂದ 2 ವಾರಗಳ ಕಾಲ ಕಠಿಣ ಲಾಕ್​ಡೌನ್ ಜಾರಿಗೊಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಕೆಲವೇ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

news18-kannada
Updated:May 7, 2021, 4:24 PM IST
Karnataka Lockdown: 14 ದಿನ ಕರ್ನಾಟಕ ಸಂಪೂರ್ಣ ಲಾಕ್​ಡೌನ್?; ಕೆಲವೇ ಕ್ಷಣಗಳಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ
ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ
  • Share this:
ಬೆಂಗಳೂರು (ಮೇ 7): ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೊರೋನಾ ಕೇಸುಗಳು ದಾಖಲಾಗುತ್ತಿರುವುದರಿಂದ ಇನ್ನೂ 14 ದಿನಗಳ ಕಾಲ ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಇದರಿಂದಲೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೇ 10ರಿಂದ 2 ವಾರಗಳ ಕಾಲ ಕಠಿಣ ಲಾಕ್​ಡೌನ್ ಜಾರಿಗೊಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಸಚಿವರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಸೆಮಿ ಲಾಕ್​ಡೌನ್​ನಿಂದ ಯಾವುದೇ ಉಪಯೋಗವಾಗದ ಕಾರಣ ಸೋಮವಾರದಿಂದ ಸಂಪೂರ್ಣ ಲಾಕ್​ಡೌನ್ ಮಾಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕೊರೋನಾ ಮೊದಲ ಅಲೆಯ ಮಾದರಿಯಲ್ಲೇ 14 ದಿನಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಲಾಗುತ್ತಿದ್ದು, ಪ್ಯಾಕೇಜ್ ಕೂಡ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಲು, ತರಕಾರಿ, ದಿನಸಿ ವಸ್ತುಗಳು, ಮೆಡಿಕಲ್ ಶಾಪ್​ಗೆ ಮಾತ್ರ ಅನುಮತಿ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಉಳಿದಂತೆ ಸಂಪೂರ್ಣ ಬಂದ್ ಆಗಿರಲಿದೆ.

ಮೇ 10ರ ನಂತರ ಯಾವುದೇ ಮದುವೆಗಳನ್ನು ಕೂಡ ಮಾಡದಂತೆ ಆದೇಶ ನೀಡಲು ಸರ್ಕಾರ ಮುಂದಾಗಿದೆ. ಈಗಾಗಲೇ ನಿಗದಿ ಆಗಿರುವ ಮದುವೆಗಳಿಗೆ 25 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಗಡಿ ಭಾಗಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆ ಓಡಾಟಕ್ಕೂ ನಿಷೇಧ ಹೇರಲಾಗುವುದು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಕರ್ನಾಟಕದಲ್ಲಿ ಕೊರೋನಾ ಬಿಕ್ಕಟ್ಟು ಕೈ ಮೀರಿ ಹೋಗಿದ್ದು, 2 ದಿನಗಳ ಹಿಂದೆ 50 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸುಗಳು ಪತ್ತೆಯಾಗಿದ್ದವು. ನಿನ್ನೆ ಒಂದೇ ದಿನ ಮತ್ತೆ 49,058 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜನತಾ ಕರ್ಫ್ಯೂ ಬದಲಾಗಿ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡದಿದ್ದರೆ ಜೂನ್ ವೇಳೆಗೆ ಬೆಂಗಳೂರೊಂದರಲ್ಲೇ 33 ಲಕ್ಷ ಕೊರೋನಾ ಕೇಸುಗಳು ಉಂಟಾಗುವ ಸಾಧ್ಯತೆಯಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ತಲೆ ಕೆಡಿಸಿಕೊಂಡಿದ್ದು, ಕರ್ನಾಟಕದಲ್ಲಿ ಲಾಕ್​ಡೌನ್ ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Youtube Video

ಈಗಾಗಲೇ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸೇರಿದಂತೆ ಬಿಜೆಪಿ ಪಕ್ಷದ ಕೆಲವು ನಾಯಕರೇ ಬಹಿರಂಗವಾಗಿ ಲಾಕ್​ಡೌನ್ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಕರ್ನಾಟಕಕ್ಕಿಂತ ಕಡಿಮೆ ಕೊರೋನಾ ಪ್ರಕರಣಗಳನ್ನು ಹೊಂದಿರುವ ಕೇರಳದಲ್ಲಿ ಲಾಕ್​ಡೌನ್ ಘೋಷಿಸಿರುವುದರಿಂದ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.
Published by: Sushma Chakre
First published: May 7, 2021, 12:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories