Karnataka Lockdown Extension: ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ?; ನಾಳೆ ಸಂಜೆ ಸಿಎಂ ಯಡಿಯೂರಪ್ಪ ಘೋಷಣೆ

Karnataka Lockdown Extension: ನಾಳೆ ಸಂಜೆ ಸಚಿವರ ಸಭೆ ಇದೆ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ಎಲ್ಲ ಸಚಿವರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ

ಬಿಎಸ್ ಯಡಿಯೂರಪ್ಪ

 • Share this:
  ಬೆಂಗಳೂರು (ಮೇ 21): ಕರ್ನಾಟಕದಲ್ಲಿ ಪ್ರತಿದಿನದ ಕೊರೋನಾ ಸೋಂಕಿನ ಪ್ರಮಾಣ 50 ಸಾವಿರ ದಾಟಿದ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ Karnataka Lockdown ಘೋಷಿಸಲಾಗಿದೆ. ಮೇ 24ರವರೆಗೂ ಲಾಕ್​ಡೌನ್ ಜಾರಿಯಲ್ಲಿರಲಿದ್ದು, ಕೆಲವು ದಿನಗಳಿಂದ Covid-19 ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಇದಕ್ಕೆ Coronavirus Testing Rate ಕಡಿಮೆಗೊಳಿಸಿರುವುದೇ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಕೊರೋನಾ ನಿಯಂತ್ರಣ ಪರಿಣಾಮಕಾರಿಯಾಗಲು ಇನ್ನೂ ಕೆಲವು ದಿನಗಳ ಕಾಲ ಲಾಕ್​ಡೌನ್ ಮುಂದುವರೆಸುವುದು ಉತ್ತಮ ಎಂಬ ಅಭಿಪ್ರಾಯ ವಿಪಕ್ಷದಿಂದ ಮಾತ್ರವಲ್ಲದೆ ಬಿಜೆಪಿ ಸಚಿವರಿಂದಲೂ ವ್ಯಕ್ತವಾಗಿದೆ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಬಗ್ಗೆ ನಾಳೆ ಸಂಜೆ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

  Lockdown Extension ಮಾಡಬೇಕೋ, ಬೇಡವೋ ಎಂಬ ಬಗ್ಗೆ ಮೇ 23ರಂದು ನಿರ್ಧಾರ ಮಾಡುವುದಾಗಿ ಈ ಹಿಂದೆ ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ, ನಾಳೆ ಸಂಜೆಯೇ ಸಚಿವರ ಜೊತೆ ಸಭೆ ನಡೆಸಿ, ಲಾಕ್​ಡೌನ್ ವಿಸ್ತರಣೆ ಬಗ್ಗೆ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇತ್ತೀಚೆಗೆ ಕೋವಿಡ್ ಪ್ರಮಾಣ ಹೆಚ್ಚಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೋನಾ ಹರಡುತ್ತಿದೆ. ಗ್ರಾಮೀಣ ಭಾಗದತ್ತ ಹೆಚ್ಚಿನ ಗಮನ ಹರಿಸಲು ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಾಳೆ ಸಂಜೆ ಸಚಿವರ ಸಭೆ ಇದೆ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ಎಲ್ಲ ಸಚಿವರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

  ಇದನ್ನೂ ಓದಿ: Karnataka Lockdown: ಕೊರೊನಾ ಹತೋಟಿಗೆ ಬರಲು ಲಾಕ್‌ಡೌನ್ ಶೇ. 80ರಷ್ಟು ಅನಿವಾರ್ಯ; IISc ಸಲಹೆ

  ಭಾರತದಲ್ಲಿ ಅತಿಹೆಚ್ಚು ಪಾಸಿಟಿವಿಟಿ ರೇಟ್ ಹೊಂದಿರುವ ಟಾಪ್ 5 ಜಿಲ್ಲೆಗಳ ಪೈಕಿ ಕರ್ನಾಟಕದ 2 ಜಿಲ್ಲೆಗಳು ಗುರುತಿಸಿ ಕೊಂಡಿವೆ. ಬಳ್ಳಾರಿ ಮತ್ತು ಉತ್ತರ ಕನ್ನಡದಲ್ಲಿ ಅತಿಹೆಚ್ಚು ಕೊರೋನಾ ಪಾಸಿಟಿವಿಟಿ ರೇಟ್ ಇರುವುದು ಪತ್ತೆಯಾಗಿದೆ. ಇದರ ನಡುವೆ ಕೊರೋನಾ ಸೋಂಕು ಹೆಚ್ಚಳದಿಂದ ಒತ್ತಡಕ್ಕೆ ಒಳಗಾಗಿ ಕಡಿಮೆ ಟೆಸ್ಟ್ ಮಾಡಲು ಸರ್ಕಾರ ಸೂಚನೆ ನೀಡಿದೆ. ರೋಗ ಲಕ್ಷಣಗಳಿದ್ದರೆ ಮಾತ್ರ ಕೊರೋನಾ ಟೆಸ್ಟ್ ನಡೆಸಲು ಸರ್ಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ದೈನಂದಿನ ಟೆಸ್ಟ್​ ಪ್ರಮಾಣ 1 ಲಕ್ಷಕ್ಕೂ ಕಡಿಮೆಯಾಗಿದೆ.

  ಇದನ್ನೂ ಓದಿ: Karnataka High Court: ಜನರಿಗೆ ಎರಡನೇ ಡೋಸ್ ಲಸಿಕೆ ತಪ್ಪಿಸದಂತೆ, ರಾಜ್ಯ ಹಾಗೂ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

  ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ 28,869 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಅಲ್ಲದೆ, ಒಂದೇ ದಿನ ಬರೋಬ್ಬರಿ 548 ಜನ ಕೊರೋನಾಗೆ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಇಂದು 9,409 ಕೇಸ್ ಪತ್ತೆಯಾಗಿದ್ದು, 289 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ 52,257 ಮಂದಿ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 9 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ನಿನ್ನೆ 9,409 ಕೇಸ್ ಪತ್ತೆಯಾಗಿದೆ. ಬರೋಬ್ಬರಿ 289 ಮಂದಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ.

  ಕೊರೋನಾ ಬೆನ್ನಿಗೆ ಇದೀಗ ಭಾರತವನ್ನು ಕಾಡುವ ಸೂಚನೆ ನೀಡಿರುವ ಮತ್ತೊಂದು ಸಾಂಕ್ರಾಮಿಕ ರೋಗವಾದ ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗಗಳ ಕಾಯಿದೆಯಡಿ ಅಧಿಸೂಚಿತ ರೋಗವೆಂದು ಘೋಷಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯಿಂದ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
  Published by:Sushma Chakre
  First published: