ಬೆಂಗಳೂರು (ಜೂನ್ 7): ಕಳೆದೊಂದು ತಿಂಗಳಿಗೂ ಹೆಚ್ಚು ಕಾಲದಿಂದ ಕರ್ನಾಟಕದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಜೂನ್ 14ರವರೆಗೂ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆ ಶುರುವಾಗಿದೆ. ರಾಜ್ಯಾದ್ಯಂತ ಇಂದಿನಿಂದ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇದೇ ರೀತಿ ಹಂತ ಹಂತವಾಗಿ ಅನ್ಲಾಕ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಿದ್ದರೆ ಕರ್ನಾಟಕದಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ? ಯಾವುದಕ್ಕೆ ಅನುಮತಿಯಿಲ್ಲ? ಯಾವ ವಲಯಗಳಿಗೆ ಅನ್ಲಾಕ್ ಘೋಷಿಸಲಾಗಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...
ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವುದರಿಂದ ಇಂದಿನಿಂದ ಅನ್ಲಾಕ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗುತ್ತಿದೆ. ಒಂದೇ ಸಮಯದಲ್ಲಿ ಎಲ್ಲ ಲಾಕ್ಡೌನ್ ನಿಯಮಗಳನ್ನೂ ಸಡಿಲಗೊಳಿಸಿದರೆ ಮತ್ತೆ ಕೊರೋನಾ ಕೇಸುಗಳು ತಾರಕಕ್ಕೇರುವ ಅಪಾಯ ಇರುವುದರಿಂದ ಹಂತ ಹಂತವಾಗಿ ಅನ್ಲಾಕ್ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ಕೊರೋನಾ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ: Breaking News: ಪಾಕಿಸ್ತಾನದಲ್ಲಿ 2 ರೈಲುಗಳು ಮುಖಾಮುಖಿ ಡಿಕ್ಕಿ; 30 ಮಂದಿ ಸಾವು, 50 ಜನರಿಗೆ ಗಾಯ
ಇಂದಿನಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಇಂದಿನಿಂದ ಕೈಗಾರಿಕೆಗಳಿಗೆ ಲಾಕ್ಡೌನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಈ ಮೂಲಕ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಚುರುಕು ಪಡೆದಿವೆ. ರಾಜ್ಯದಲ್ಲಿ ಅನ್ ಲಾಕ್ ಜಾರಿ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಲಿದ್ದಾರೆ. ಹಂತ ಹಂತವಾಗಿ ಅನ್ ಲಾಕ್ಗೆ ಮುಂದಾದ ಕರ್ನಾಟಕ ಸರ್ಕಾರ ಆರ್ಥಿಕ ಚಟುವಟಿಕೆಗಳತ್ತ ಚಿತ್ತ ನೆಟ್ಟಿದೆ. ಹೀಗಾಗಿ, ಇಂದಿನಿಂದ ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದೆ. ಕೋವಿಡ್ ನಿಯಮಾನುಸಾರ ಕಾರ್ಯ ಚಟುವಟಿಕೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.
ಕೈಗಾರಿಕೆಗಳಿಗೆ ವಿನಾಯಿತಿ ನೀಡಿರುವುದರಿಂದ ದೂರದೂರುಗಳಿಂದ ಕಾರ್ಮಿಕರು ಬೆಂಗಳೂರಿಗೆ ಬರುತ್ತಿದ್ದಾರೆ. ಕ್ಯಾಬ್, ಆಟೋ, ಬೈಕ್ ಸೇರಿದಂತೆ ಸ್ವಂತ ವಾಹನಗಳಲ್ಲಿ ನಗರಕ್ಕೆ ಆಗಮಿಸಿದ್ದಾರೆ. ಇದರಿಂದ ಇಂದು ಬೆಳಗ್ಗೆ ನೆಲಮಂಗಲ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಮಕೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಜನರು ಬೆಂಗಳೂರಿಗೆ ಬರತೊಡಗಿರುವುದರಿಂದ ತುಮಕೂರು ಬೆಂಗಳೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.
ಇದನ್ನೂ ಓದಿ: Petrol Price in Karnataka: ಕರ್ನಾಟಕದ ಚಿಕ್ಕಮಗಳೂರು, ಶಿರಸಿ, ಬಳ್ಳಾರಿಯಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ!
ಶಿವಮೊಗ್ಗ, ಮೈಸೂರು, ವಿಜಯಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಕಠಿಣ ಲಾಕ್ಡೌನ್ ನಿಯಮಗಳನ್ನು ಕೊಂಚ ಸಡಿಲಗೊಳಿಸಲಾಗಿದೆ. ಜೂನ್ 14ರವರೆಗೆ ಸಂಜೆಯವರೆಗೂ ಹೋಟೆಲ್, ರೆಸ್ಟೋರೆಂಟ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಪಾರ್ಸಲ್ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಾರ್ಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಧಾರ್ಮಿಕ ಕೇಂದ್ರಗಳು, ಶಾಲಾ-ಕಾಲೇಜುಗಳು, ಜಾತ್ರೆಗಳು, ಸಾರ್ವಜನಿಕ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ