Karnataka Lockdown Extension | ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​; ಸಿಎಂ ಯಡಿಯೂರಪ್ಪ ಘೋಷಣೆ

Karnataka Lockdown Extension | ಲಾಕ್​ಡೌನ್​ನಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಜೆ ತೀರ್ಮಾನ ಮಾಡುತ್ತೇವೆ. ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

 • Share this:
  ಬೆಂಗಳೂರು (ಜೂನ್ 2): ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

  ಲಾಕ್​ಡೌನ್​ನಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಜೆ ತೀರ್ಮಾನ ಮಾಡುತ್ತೇವೆ. ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ಕೆಲವೊಂದಕ್ಕೆ ಮಾತ್ರ ವಿನಾಯ್ತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ. ಲಾಕ್​ಡೌನ್ ಸಡಿಲ ಹೇಗೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಜೂನ್ 7ರ ನಂತರವೂ ಲಾಕ್​ಡೌನ್ ವಿಸ್ತರಣೆಗೆ ನಿರ್ಧರಿಸಲಾಗಿದೆ. ವಿಸ್ತರಣೆ ಮಾಡಿ ಬಿಗಿ ಕ್ರಮ ಏನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

  ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದೇನೆ. ಅಲ್ಲಿ ಅವರ ಸಲಹೆಗಳನ್ನು ಪಡೆದು ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಸದ್ಯಕ್ಕೆ ಕೊರೋನಾ ನಿಯಂತ್ರಿಸುವುದು ಮಾತ್ರ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

  ಇದನ್ನೂ ಓದಿ: BS Yediyurappa: ಸಿ.ಪಿ. ಯೋಗೇಶ್ವರ್ ವಿರುದ್ಧ ಸಮರ ಸಾರಿದ ಸಿಎಂ ಯಡಿಯೂರಪ್ಪ; ನಡ್ಡಾ ಭೇಟಿಗೆ ತೆರಳಿದ ಬಿ.ವೈ. ವಿಜಯೇಂದ್ರ

  ರಫ್ತು ಮಾಡುವವರಿಗೆ ಗುರುವಾರದಿಂದ ಅನುಮತಿ ನೀಡಲಾಗುವುದು. ರಫ್ತಿಗೆ ಸಂಬಂಧಿಸಿದ ಕೆಲಸಗಳು ನಾಳೆಯಿಂದಲೇ ಆರಂಭವಾಗಲಿವೆ. ಕೈಗಾರಿಕೆಗಳಿಗೆ ಸಂಬಂಧಿಸಿದ ಕೆಲವು ವಲಯಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

  ಇಂದು ಸಂಜೆ 6 ಗಂಟೆಗೆ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಹಲವು ತಜ್ಞರು ಈವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕನ್ನು ನಿಯಂತ್ರಿಸಲು ಇವರು ಏಕೈಕ ಮಾರ್ಗ ಲಾಕ್​ಡೌನ್ ಮಾತ್ರ. ಹೀಗಾಗಿ ಲಾಕ್​ಡೌನ್​ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಅಲ್ಲದೆ, ಜೂನ್​ ಕೊನೆಯವರೆಗೆ ಲಾಕ್​ಡೌನ್ ಇದ್ದರೆ ಒಳ್ಳೆಯದು ಎಂದಿದ್ದರು. ಹೀಗಾಗಿ, ಸರ್ಕಾರ ಲಾಕ್​ಡೌನ್ ವಿಸ್ತರಿಸಲು ಮುಂದಾಗಿದೆ. ಆದರೆ, ಎಲ್ಲಿಯವರೆಗೂ ಲಾಕ್​ಡೌನ್ ವಿಸ್ತರಣೆಯಾಗಲಿದೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿಯನ್ನು ಸರ್ಕಾರ ನೀಡಿಲ್ಲ.

  ರಾಜ್ಯದ ಪಾಸಿಟಿವಿಟಿ ದರ ಇನ್ನೂ ಶೇಕಡಾ 13.57ರಷ್ಟಿದೆ. ಆದರೂ ಕರ್ನಾಟಕ ಸರ್ಕಾರ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಮೀನಾಮೇಷ ಎಣಿಸುತ್ತಿದೆ ಎಂದು ವಿರೋಧಗಳು ಕೇಳಿ ಬಂದಿದ್ದವು. ಇಂದು ರಾಜ್ಯಾದ್ಯಂತ ಕೊರೋನಾ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಲಿದ್ದಾರೆ. ಸಚಿವರು, ತಜ್ಞರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

  ಲಾಕ್‌ಡೌನ್ ಮುಂದುವರಿದರೆ ಆಗುವ ಆರ್ಥಿಕ ಸಮಸ್ಯೆ ಬಗ್ಗೆ ತಜ್ಞರ ಸಮಿತಿ ಈಗಾಗಲೇ ಸಿಎಂ ಯಡಿಯೂರಪ್ಪನವರಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವು ಸೂಕ್ತ ಎಂದು ಅಧಿಕಾರಿಗಳಿಂದ ಸಿಎಂಗೆ ಅಭಿಪ್ರಾಯ ಸಲ್ಲಿಕೆ ಮಾಡಲಾಗಿದೆ. ರಾಜ್ಯಮತ್ತು ಬೆಂಗಳೂರಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೂನ್ 7ರ ಬಳಿಕ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡಿ, ಆರ್ಥಿಕ ಚಟುವಟಿಕೆಗಳಿಗೆ ಹಂತ ಹಂತವಾಗಿ ಅವಕಾಶ ಮಾಡಿಕೊಡಬೇಕು. ಲಾಕ್‌ಡೌನ್ ವೇಳೆ ಕೊರೊನಾ ನಿರ್ವಹಣೆಗಾಗಿ ಅಗತ್ಯವಿರುವ ಬೆಡ್ ಪ್ರಮಾಣ, ಆಕ್ಸಿಜನ್, ಐಸಿಯು ಬೆಡ್, ಸಿಸಿಸಿಗಳನ್ನು ಸರ್ಕಾರ ಏರಿಕೆ ಮಾಡಲಾಗುತ್ತಿದೆ. ಕೋವಿಡ್ ನಿರ್ವಹಣೆಗೆ ಬೇಕಾಗಿರುವ ಮೂಲಸೌಕರ್ಯಗಳನ್ನು ವೇಗವಾಗಿ ವೃದ್ಧಿಸಲಾಗುತ್ತಿದೆ. ಹಂತ ಹಂತವಾಗಿ ಅನ್​ಲಾಕ್ ಮಾಡುವುದು ಒಳಿತು ಎಂದು ಆರ್ಥಿಕ ಇಲಾಖೆ ಸಲಹೆ ನೀಡಿದೆ.
  Published by:Sushma Chakre
  First published: