Karnataka Lockdown Extension: ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ?; ಸಚಿವರ ಜೊತೆ ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

Karnataka Lockdown Extension | ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ‌ ಚರ್ಚೆ ನಡೆಸಲಿದ್ದಾರೆ.

ಬಿ.ಎಸ್ ಯಡಿಯೂರಪ್ಪ

ಬಿ.ಎಸ್ ಯಡಿಯೂರಪ್ಪ

  • Share this:
    ಬೆಂಗಳೂರು (ಜೂನ್ 1): ಕರ್ನಾಟಕದಲ್ಲಿ ಈಗಾಗಲೇ ಜೂನ್ 7ರವರೆಗೆ ಲಾಕ್​ಡೌನ್ ಜಾರಿಯಲ್ಲಿದೆ. ಅದಾದ ಬಳಿಕವೂ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಿಸಬೇಕೇ? ಬೇಡವೇ?, ಲಾಕ್​ಡೌನ್ ವಿಸ್ತರಣೆ ಮಾಡಿದರೆ ಅದರಿಂದ ಆಗುವ ತೊಂದರೆಗಳೇನು? ಮಾಡದಿದ್ದರೆ ಆಗುವ ಪರಿಣಾಮಗಳೇನು? ಎಂಬ ಬಗ್ಗೆ ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ಈಗಾಗಲೇ ಸಿಎಂ ಯಡಿಯೂರಪ್ಪನವರಿಗೆ ವರದಿ ನೀಡಿದ್ದಾರೆ. ಇಂದು ಹಿರಿಯ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ‌ ಚರ್ಚೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಕೊರೋನಾ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಲಿದ್ದಾರೆ. ಸಚಿವರು, ತಜ್ಞರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ ಯಡಿಯೂರಪ್ಪ ಲಾಕ್‌ಡೌನ್ ವಿಸ್ತರಣೆಯಾ? ಅಥವಾ ಅನ್ ಲಾಕ್ ಮಾಡಲಾಗುತ್ತದಾ? ಎಂಬುದರ ಕುರಿತು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ. 

    ನಿನ್ನೆ ಆರ್ಥಿಕ ಚಟುವಟಿಕೆ ಪ್ರಾರಂಭಿಸುವುದು ಉತ್ತಮ ಎಂದು ಸಿಎಂ ಯಡಿಯೂರಪ್ಪನವರಿಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಬಹುತೇಕ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿದೆ. ಇದರಿಂದ ರಾಜ್ಯದ ಆರ್ಥಿಕತೆಗೆ, ಖಜಾನೆಗೆ ಭಾರೀ ಹೊಡೆತ ಬೀಳುತ್ತಿದೆ. ಹೀಗಾಗಿ ಸರ್ಕಾರ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸುವುದು ಅನಿವಾರ್ಯ. ಆರ್ಥಿಕ ಇಲಾಖೆ ಅಧಿಕಾರಿಗಳು ಸಿಎಂಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ಜೂನ್ 7ರ ಬಳಿಕ ಲಾಕ್​ಡೌನ್ ವಿಸ್ತರಣೆಯಾಗುವುದು ಅನುಮಾನ ಎನ್ನಲಾಗುತ್ತಿದೆ.

    ಇದನ್ನೂ ಓದಿ: Bengaluru Lockdown: ಬೆಂಗಳೂರಿನಲ್ಲಿ ಜೂನ್ 7ರ ಬಳಿಕ ಲಾಕ್​ಡೌನ್ ತೆರವು?; ಹಂತಹಂತವಾಗಿ ಅನ್​ಲಾಕ್​ ಮಾಡಲು ಬಿಬಿಎಂಪಿ ಚಿಂತನೆ

    ಲಾಕ್‌ಡೌನ್ ಮುಂದುವರಿದರೆ ಆಗುವ ಆರ್ಥಿಕ ಸಮಸ್ಯೆ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವು ಸೂಕ್ತ ಎಂದು ಅಧಿಕಾರಿಗಳಿಂದ ಸಿಎಂಗೆ ಅಭಿಪ್ರಾಯ ಸಲ್ಲಿಕೆ ಮಾಡಲಾಗಿದೆ. ರಾಜ್ಯಮತ್ತು ಬೆಂಗಳೂರಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೂನ್ 7ರ ಬಳಿಕ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡಿ, ಆರ್ಥಿಕ ಚಟುವಟಿಕೆಗಳಿಗೆ ಹಂತ ಹಂತವಾಗಿ ಅವಕಾಶ ಮಾಡಿಕೊಡಬೇಕು. ಲಾಕ್‌ಡೌನ್ ವೇಳೆ ಕೊರೊನಾ ನಿರ್ವಹಣೆಗಾಗಿ ಅಗತ್ಯವಿರುವ ಬೆಡ್ ಪ್ರಮಾಣ, ಆಕ್ಸಿಜನ್, ಐಸಿಯು ಬೆಡ್, ಸಿಸಿಸಿಗಳನ್ನು ಸರ್ಕಾರ ಏರಿಕೆ ಮಾಡಲಾಗುತ್ತಿದೆ. ಕೋವಿಡ್ ನಿರ್ವಹಣೆಗೆ ಬೇಕಾಗಿರುವ ಮೂಲಸೌಕರ್ಯಗಳನ್ನು ವೇಗವಾಗಿ ವೃದ್ಧಿಸಲಾಗುತ್ತಿದೆ. ಹಂತ ಹಂತವಾಗಿ ಅನ್​ಲಾಕ್ ಮಾಡುವುದು ಒಳಿತು ಎಂದು ಆರ್ಥಿಕ ಇಲಾಖೆ ಸಲಹೆ ನೀಡಿದೆ.

    ಇದನ್ನೂ ಓದಿ: ಕೊರೊನಾ ರೂಪಾಂತರಿ ಸೋಂಕುಗಳಿಗೆ ನಾಮಕರಣ: ಭಾರತದಲ್ಲಿನ ವೈರಸ್​​ಗಳಿಗೆ WHO ಕೊಟ್ಟ ಹೆಸರೇನು?

    ಈ ಹಿನ್ನೆಲೆಯಲ್ಲಿ ಅನ್‌ಲಾಕ್ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಕಳೆದ ಬಾರಿಯ ರಾಷ್ಟ್ರೀಯ ಲಾಕ್‌ಡೌನ್ ವೇಳೆ ಅನುಸರಿಸಲಾದ ಅನ್‌ಲಾಕ್ ಮಾರ್ಗಸೂಚಿಯನ್ನೇ ಈ ಬಾರಿಯೂ ಜಾರಿ ಮಾಡೋ ಬಗ್ಗೆ ಸಲಹೆ ನೀಡಲಾಗಿದೆ. ಆರ್ಥಿಕ ಚಟುವಟಿಕೆ ನಿಧಾನವಾಗಿ ಪ್ರಾರಂಭವಾಗಬೇಕು. ಇಲ್ಲವಾದರೆ ರಾಜ್ಯದ ಆರ್ಥಿಕತೆ ಸಂಪೂರ್ಣ ಕುಸಿಯಲಿದೆ. ಹೀಗಾಗಿ ಅನ್‌ಲಾಕ್ ಮಾಡುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಒಂದುವೇಳೆ ಜೂನ್ 7ರ ಬಳಿಕ ಕರ್ನಾಟಕದಲ್ಲಿ ಅನ್​ಲಾಕ್ ಮಾಡಿದರೆ ಯಾವುದಕ್ಕೆಲ್ಲ ಅವಕಾಶ ನೀಡಬಹುದು? ಯಾವುದಕ್ಕೆ ನಿರ್ಬಂಧ ವಿಧಿಸಬೇಕು ಎಂಬುದರ ಬಗ್ಗೆಯೂ ವರದಿಯಲ್ಲಿ ತಿಳಿಸಲಾಗಿದೆ.

    * ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ
    * ಸಾರಿಗೆ ಸಂಚಾರಕ್ಕೆ ನಿರ್ಬಂಧಿತ ಅವಕಾಶ
    * ಓಲಾ, ಉಬರ್, ಆಟೋ ಸಂಚಾರಕ್ಕೆ ಅನುಮತಿ
    * ಮಾಲ್, ವಾಣಿಜ್ಯ ಸಂಕೀರ್ಣಗಳಿಗೆ 50% ಅನುಮತಿ
    * ಸಾರ್ವಜನಿಕ ವಾಹನಗಳಲ್ಲಿ 50% ಪ್ರಯಾಣಿಕರಿಗೆ ಅವಕಾಶ
    * ಅಗತ್ಯೇತರ ಅಂಗಡಿ ಮುಂಗಟ್ಟಿಗೂ ನಿರ್ಬಂಧಿತ ಅವಕಾಶ
    * ಹೋಟೆಲ್​​, ಬಾರ್, ರೆಸ್ಟೋರೆಂಟ್ ನಿರ್ಬಂಧಿತ ಅವಕಾಶ
    * ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಸ್ತರಣೆ
    * ಮೈಕ್ರೋ ಕಂಟೈನ್ಮೆಂಟ್ ಝೋನ್​ಗೆ ಹೆಚ್ಚಿನ ಒತ್ತು
    * ಸಭೆ ಸಮಾರಂಭ, ರಾಜಕೀಯ ಸಭೆ, ಗುಂಪು ಸೇರುವಿಕೆಗೆ ನಿಷೇಧ
    * ಮದುವೆ, ಸಮಾರಂಭಕ್ಕೂ ನಿರ್ಬಂಧಿತ ಅವಕಾಶ
    * ಸದ್ಯ ಪಬ್, ಜಿಮ್, ಈಜುಕೊಳ, ಸಿನಿಮಾ ಥಿಯೇಟರ್​​ಗೆ ನಿಷೇಧ
    * ನೈಟ್ ಕರ್ಫ್ಯೂ ಮುಂದುವರಿಸಲು ಚಿಂತನೆ
    * ಕಠಿಣ ನಿಯಂತ್ರಕ ಕ್ರಮಗಳು ಮುಂದುವರಿಕೆ
    * ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಿತ ಅವಕಾಶ

    ಇನ್ನೊಂದೆಡೆ, ಬೆಂಗಳೂರಿನಲ್ಲಿ ಹಂತ-ಹಂತವಾಗಿ ಲಾಕ್​ಡೌನ್ ತೆರವುಗೊಳಿಸುವ ಬಗ್ಗೆ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತ ಸುಳಿವು ನೀಡಿದ್ದಾರೆ. ಕರ್ನಾಟಕದಲ್ಲಿ  ನಿನ್ನೆ ಕೊರೊನಾ ಕೇಸ್ ಇಳಿಕೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 16 ಸಾವಿರ ಕೊರೊನಾ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಸೋಮವಾರ 16,604 ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ ಬರೋಬ್ಬರಿ 411 ಜನ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 3992 ಕೇಸ್ ಪತ್ತೆಯಾಗಿವೆ.
    Published by:Sushma Chakre
    First published: