Karnataka Lockdown: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ವಿಸ್ತರಣೆ?; ಸಿಎಂಗೆ ತಜ್ಞರು ನೀಡಿದ ವರದಿಯಲ್ಲೇನಿದೆ?

Karnataka Lockdown Extension | ಸಚಿವರು, ತಜ್ಞರ ಜೊತೆ ಸಭೆ ನಡೆಸಲಿರುವ ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಅಥವಾ ಅನ್ ಲಾಕ್ ಎಂಬುದರ ಕುರಿತು ಜೂನ್ 4 ಅಥವಾ 5ರಂದು ಅಂತಿಮ ತೀರ್ಮಾನ ಮಾಡಲಿದ್ದಾರೆ.

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

 • Share this:
  ಬೆಂಗಳೂರು (ಮೇ 31): ಜೂನ್ 7ರ ಬಳಿಕ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಿಸಬೇಕೇ? ಬೇಡವೇ? ಎಂಬ ಬಗ್ಗೆ ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ಈಗಾಗಲೇ ವರದಿ ತಯಾರಿಸಿದ್ದಾರೆ. ನಾಳೆ ಹಿರಿಯ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಇಂದು ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ‌ ನಾಳೆ ಚರ್ಚೆ ನಡೆಯಲಿದೆ. ಕೊರೋನಾ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಲಿದ್ದಾರೆ. ಸಚಿವರು, ತಜ್ಞರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಅಥವಾ ಅನ್ ಲಾಕ್ ಎಂಬುದರ ಕುರಿತು ಜೂನ್ 4 ಅಥವಾ 5ರಂದು ಅಂತಿಮ ತೀರ್ಮಾನ ಮಾಡಲಿದ್ದಾರೆ.

  ನಿನ್ನೆ ತಡರಾತ್ರಿಯವರೆಗೂ ಸಭೆ ಮಾಡಿ ಲಾಕ್​ಡೌನ್ ವಿಸ್ತರಣೆಯ ಬಗ್ಗೆ ರಿಪೋರ್ಟ್ ಸಿದ್ಧಪಡಿಸಲಾಗಿದೆ. ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದಾರೆ.

  ಆರ್ಥಿಕ ಚಟುವಟಿಕೆ ಪ್ರಾರಂಭಿಸುವುದು ಉತ್ತಮ ಎಂದು ಸಿಎಂ ಯಡಿಯೂರಪ್ಪನವರಿಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಮಹತ್ವದ ಸಲಹೆ ನೀಡಿದ್ದಾರೆ. ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಬಹುತೇಕ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿದೆ. ಇದರಿಂದ ರಾಜ್ಯದ ಆರ್ಥಿಕತೆಗೆ, ಖಜಾನೆಗೆ ಭಾರೀ ಹೊಡೆತ ಬೀಳುತ್ತಿದೆ. ಹೀಗಾಗಿ ಸರ್ಕಾರ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸುವುದು ಅನಿವಾರ್ಯ. ಆರ್ಥಿಕ ಇಲಾಖೆ ಅಧಿಕಾರಿಗಳು ಸಿಎಂಗೆ ಸಲಹೆ ನೀಡಿದ್ದಾರೆ.

  ಇದನ್ನೂ ಓದಿ: Dakshina Kannada: ಬೆಳ್ತಂಗಡಿಯ ನೆರಿಯಾದಲ್ಲಿ ಕೋವಿಡ್ ಸ್ಫೋಟ; ಸಿಯೋನ್ ಅನಾಥಾಶ್ರಮದ 210 ಜನರಿಗೆ ಕೊರೋನಾ

  ಲಾಕ್‌ಡೌನ್ ಮುಂದುವರಿದರೆ ಆಗುವ ಆರ್ಥಿಕ ಸಮಸ್ಯೆ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವು ಸೂಕ್ತ ಎಂದು ಅಧಿಕಾರಿಗಳಿಂದ ಸಿಎಂಗೆ ಅಭಿಪ್ರಾಯ ಸಲ್ಲಿಕೆ ಮಾಡಲಾಗಿದೆ. ರಾಜ್ಯಮತ್ತು ಬೆಂಗಳೂರಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೂನ್ 7ರ ಬಳಿಕ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡಿ, ಆರ್ಥಿಕ ಚಟುವಟಿಕೆಗಳಿಗೆ ಹಂತ ಹಂತವಾಗಿ ಅವಕಾಶ ಮಾಡಿಕೊಡಬೇಕು. ಲಾಕ್‌ಡೌನ್ ವೇಳೆ ಕೊರೊನಾ ನಿರ್ವಹಣೆಗಾಗಿ ಅಗತ್ಯವಿರುವ ಬೆಡ್ ಪ್ರಮಾಣ, ಆಕ್ಸಿಜನ್, ಐಸಿಯು ಬೆಡ್, ಸಿಸಿಸಿಗಳನ್ನು ಸರ್ಕಾರ ಏರಿಕೆ ಮಾಡಲಾಗುತ್ತಿದೆ. ಕೋವಿಡ್ ನಿರ್ವಹಣೆಗೆ ಬೇಕಾಗಿರುವ ಮೂಲಸೌಕರ್ಯಗಳನ್ನು ವೇಗವಾಗಿ ವೃದ್ಧಿಸಲಾಗುತ್ತಿದೆ. ಹಂತ ಹಂತವಾಗಿ ಅನ್​ಲಾಕ್ ಮಾಡುವುದು ಒಳಿತು ಎಂದು ಆರ್ಥಿಕ ಇಲಾಖೆ ಸಲಹೆ ನೀಡಿದೆ.

  ಇದನ್ನೂ ಓದಿ: Coronavirus India Updates: 50 ದಿನಗಳ ಬಳಿಕ ದೇಶದಲ್ಲಿ ಒಂದೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ

  ಈ ಹಿನ್ನೆಲೆಯಲ್ಲಿ ಅನ್‌ಲಾಕ್ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಕಳೆದ ಬಾರಿಯ ರಾಷ್ಟ್ರೀಯ ಲಾಕ್‌ಡೌನ್ ವೇಳೆ ಅನುಸರಿಸಲಾದ ಅನ್‌ಲಾಕ್ ಮಾರ್ಗಸೂಚಿಯನ್ನೇ ಈ ಬಾರಿಯೂ ಜಾರಿ ಮಾಡೋ ಬಗ್ಗೆ ಸಲಹೆ ನೀಡಲಾಗಿದೆ. ಆರ್ಥಿಕ ಚಟುವಟಿಕೆ ನಿಧಾನವಾಗಿ ಪ್ರಾರಂಭವಾಗಬೇಕು. ಇಲ್ಲವಾದರೆ ರಾಜ್ಯದ ಆರ್ಥಿಕತೆ ಸಂಪೂರ್ಣ ಕುಸಿಯಲಿದೆ. ಹೀಗಾಗಿ ಅನ್‌ಲಾಕ್ ಮಾಡುವುದು ಅನಿವಾರ್ಯ ಎಂದು ಖಡಕ್ ಆಗಿ ಅಧಿಕಾರಿಗಳು ತಿಳಿಸಿದ್ದಾರೆ.

  ಆರ್ಥಿಕ ಇಲಾಖೆಯ ಅನ್‌ಲಾಕ್ ಪ್ಲಾನ್ ಹೇಗಿರಲಿದೆ?:

  * ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ
  * ಸಾರಿಗೆ ಸಂಚಾರಕ್ಕೆ ನಿರ್ಬಂಧಿತ ಅವಕಾಶ
  * ಓಲಾ, ಉಬರ್, ಆಟೋ ಸಂಚಾರಕ್ಕೆ ಅನುಮತಿ
  * ಮಾಲ್, ವಾಣಿಜ್ಯ ಸಂಕೀರ್ಣಗಳಿಗೆ 50% ಅನುಮತಿ
  * ಸಾರ್ವಜನಿಕ ವಾಹನಗಳಲ್ಲಿ 50% ಪ್ರಯಾಣಿಕರಿಗೆ ಅವಕಾಶ
  * ಅಗತ್ಯೇತರ ಅಂಗಡಿ ಮುಂಗಟ್ಟಿಗೂ ನಿರ್ಬಂಧಿತ ಅವಕಾಶ
  * ಹೋಟೆಲ್​​, ಬಾರ್, ರೆಸ್ಟೋರೆಂಟ್ ನಿರ್ಬಂಧಿತ ಅವಕಾಶ
  * ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಸ್ತರಣೆ
  * ಮೈಕ್ರೋ ಕಂಟೈನ್ಮೆಂಟ್ ಝೋನ್​ಗೆ ಹೆಚ್ಚಿನ ಒತ್ತು
  * ಸಭೆ ಸಮಾರಂಭ, ರಾಜಕೀಯ ಸಭೆ, ಗುಂಪು ಸೇರುವಿಕೆಗೆ ನಿಷೇಧ
  * ಮದುವೆ, ಸಮಾರಂಭಕ್ಕೂ ನಿರ್ಬಂಧಿತ ಅವಕಾಶ
  * ಸದ್ಯ ಪಬ್, ಜಿಮ್, ಈಜುಕೊಳ, ಸಿನಿಮಾ ಥಿಯೇಟರ್​​ಗೆ ನಿಷೇಧ
  * ನೈಟ್ ಕರ್ಫ್ಯೂ ಮುಂದುವರಿಸಲು ಚಿಂತನೆ
  * ಕಠಿಣ ನಿಯಂತ್ರಕ ಕ್ರಮಗಳು ಮುಂದುವರಿಕೆ
  * ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಿತ ಅವಕಾಶ
  Published by:Sushma Chakre
  First published: