Karnataka Lockdown Extension: ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಜೂನ್ 6ರೊಳಗೆ ತೀರ್ಮಾನ; ಸಿಎಂ ಯಡಿಯೂರಪ್ಪ

Karnataka Lockdown Extension | ಜೂನ್ 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಲಾಕ್​ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಬಿಎಸ್ ಯಡಿಯೂರಪ್ಪ

ಬಿಎಸ್ ಯಡಿಯೂರಪ್ಪ

 • Share this:
  ಬೆಂಗಳೂರು (ಮೇ 30): ಕರ್ನಾಟಕದಲ್ಲಿ ಈಗಾಗಲೇ ಜೂನ್ 7ರವರೆಗೆ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಸುಮಾರು 1 ತಿಂಗಳಿಂದ ರಾಜ್ಯದಲ್ಲಿ ಲಾಕ್​ಡೌನ್ ಚಾಲ್ತಿಯಲ್ಲಿದ್ದು, ಈ ಲಾಕ್​ಡೌನ್ ಅನ್ನು ಮುಂದುವರೆಸುವ ಬಗ್ಗೆ ಮತ್ತೆ ಚರ್ಚೆಗಳು ನಡೆಯುತ್ತಿದ್ದು, ಲಾಕ್​ಡೌನ್ ವಿಸ್ತರಣೆ ಬಗ್ಗೆ ಜೂನ್ 5 ಅಥವಾ 6ರಂದು ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

  ಜೂನ್ 7ರ ಬಳಿಕ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ವಿಚಾರವಾಗಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ. ಜೂನ್ 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಲಾಗುತ್ತದೆ. ತಜ್ಞರ ಜತೆ, ಸಚಿವರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಲಾಕ್​ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್​ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ. ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

  ಎರಡನೇ ಹಂತದ ಪ್ಯಾಕೇಜ್ ಘೋಷಣೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪ, ಆ ಬಗ್ಗೆ ಸಿದ್ಧತೆಯಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಈ ಬಗ್ಗೆ ಘೋಷಣೆ ಆಗಲಿದೆ ಎಂದಿದ್ದಾರೆ.

  ಕರ್ನಾಟಕದಲ್ಲಿ ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 42,444 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜೂನ್ 7ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡೋ ಬಗ್ಗೆ ಇನ್ನು ಮೂರ್ನಾಲ್ಕು ದಿನಗಳಲ್ಲಿ ತಜ್ಞರು, ಕೋವಿಡ್ ನಿರ್ವಹಣೆಯ ತಂಡಗಳ ಜೊತೆಗೆ ಸಭೆ ನಡೆಸಿ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಮಾಡಲಿದ್ದಾರೆ. ಕೇಂದ್ರ ಗೃಹ ಇಲಾಖೆ ಕೂಡ ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿ ಅಂತ ಸಲಹೆ ಕೊಟ್ಟಿದೆ. ಲಾಕ್ ಡೌನ್ ವಿಸ್ತರಣೆ ಮಾಡೋದು ಜನರ ಮೇಲೆ ನಿಂತಿದೆ. ಕೇಂದ್ರದ ಮಾರ್ಗಸೂಚಿ, ಮತ್ತು ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ ಮಾಡಲಿದ್ದಾರೆ.

  ಇದನ್ನೂ ಓದಿ: Chikmagalur Crime: ಹಣ ನೀಡಲಿಲ್ಲವೆಂದು ಮೂಡಿಗೆರೆಯಲ್ಲಿ ಅಪ್ಪನನ್ನು ಕೊಚ್ಚಿ ಕೊಂದ ಪಾಪಿ ಮಗ

  ಇನ್ನೊಂದೆಡೆ, ಕರ್ನಾಟಕದಲ್ಲಿ ಕೊರೊನಾ‌ ಕೇಸ್ ಕಡಿಮೆಯಾಗುತ್ತಿದ್ದಂತೆ ಮೈ ಮರೆತ ಜನರು ಇಂದು ಮಾಂಸಾಹಾರ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಚಿಕನ್, ಮಟನ್, ಮೀನು ತರಕಾರಿ ಹಾಗೂ ದಿನಸಿ ಖರೀದಿ ಜೋರಾಗಿದ್ದು, ಒಬ್ಬರ ಮೇಲೋಬ್ಬರು ಅಂಟಿಕೊಂಡೇ ತರಕಾರಿ ಖರೀದಿ ಮಾಡುತ್ತಿದ್ದಾರೆ. ಲಾಕ್ ಡೌನ್ ಟಫ್ ರೂಲ್ಸ್ ಜಾರಿಯಲ್ಲಿದ್ದರೂ ಶಿವಾಜಿನಗರದಲ್ಲಿ ಡೋಂಟ್ ಕೇರ್ ಎನ್ನಲಾಗುತ್ತಿದೆ. ಬೆಳ್ಳಂ ಬೆಳಗ್ಗೆಯೇ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ‌ ಜನರ ಓಡಾಟ ಹೆಚ್ಚಾಗಿದೆ. ಚಿಕನ್ ಸ್ಟಾಲ್ , ತರಕಾರಿ ಮಾರ್ಕೆಟ್ ಹಾಗೂ ಟೀ ಸ್ಟಾಲ್ ಗಳ ಮುಂದೆ ಜನರು ಮುಗಿಬಿದ್ದಿದ್ದಾರೆ.

  ಬೆಂಗಳೂರಿನಲ್ಲಿ ಕೊರೋನಾ ಆರ್ಭಟ ಕೊಂಚ ಕಡಿಮೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಲಾಕ್ ಡೌನ್ ವೇಳೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ 1,239 ವಾಹನ ಜಪ್ತಿ ಮಾಡಿದ ಪೊಲೀಸರು ಇಂದು ಕೂಡ ಜಪ್ತಿ ಕಾರ್ಯಚಾರಣೆ ನಡೆಸಿದ್ದಾರೆ. ನಿನ್ನೆ 1044 ದ್ವಿಚಕ್ರ ವಾಹನಗಳು, 82 ಆಟೋಗಳು, 113 ನಾಲ್ಕು ಚಕ್ರದ ವಾಹನಗಳನ್ನು ಸೀಜ್ ಮಾಡಲಾಗಿದೆ. NDMA ಅಡಿಯಲ್ಲಿ 43 ಪ್ರಕರಣ ದಾಖಲು ಮಾಡಲಾಗಿದೆ.

  ಇದನ್ನೂ ಓದಿ: Mehul Choksi: ಊದಿದ ಕಣ್ಣು, ಕೈಗಳಲ್ಲಿ ಗಾಯ; ಡೊಮಿನಿಕಾ ಜೈಲಿನಲ್ಲಿರುವ ಮೆಹುಲ್ ಚೋಕ್ಸಿ ಮೊದಲ ಫೋಟೋ ರಿಲೀಸ್

  ಸದ್ಯಕ್ಕೆ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್​​ ಪಡೆಯುವವರು, ತುರ್ತು  ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ. ಜೂನ್​​ 7ರವರೆಗೆ ಬಸ್​​ ಸಂಚಾರ, ಮೆಟ್ರೋ ಸಂಚಾರ ಸಂಪೂರ್ಣ ಬಂದ್​​​ ಇರಲಿದೆ. ಮಾಲ್​​, ಚಿತ್ರಮಂದಿರಗಳು, ಪಾರ್ಕ್​ಗಳು, ಈಜುಕೊಳಗಳನ್ನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.

  ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಮಾಡುವ ಬಗ್ಗೆ ನಿನ್ನೆಯೂ ಹೇಳಿಕೆ ನೀಡಿದ್ದ ಸಿಎಂ ಯಡಿಯೂರಪ್ಪ, ಜನರು ಕೊರೋನಾ ನಿಯಂತ್ರಿಸಲು ಸೂಕ್ತವಾಗಿ ಸಹಕರಿಸಿದರೆ ಜೂನ್ 7ರ ಬಳಿಕ ಲಾಕ್​ಡೌನ್ ವಿಸ್ತರಣೆ ಮಾಡುವ ಯೋಚನೆಯಿಲ್ಲ. ಅದರ ಅಗತ್ಯವೂ ಇರುವುದಿಲ್ಲ ಎಂದಿದ್ದರು. ಈ ಬಗ್ಗೆ ಜೂನ್ 6ರ ವೇಳೆಗೆ ಖಚಿತ ಮಾಹಿತಿ ಸಿಗಲಿದೆ.

  ನರೇಂದ್ರ ಮೋದಿ ಪ್ರಧಾನಿಯಾಗಿ ಏಳು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಸೇವಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯಾಧ್ಯಂತ ಕೋವಿಡ್ ಪೀಡಿತರು, ಪೌರಕಾರ್ಮಿಕರಿಗೆ ನೆರವಾಗುವ ಕಾರ್ಯವನ್ನು ಹಮ್ಮಿಕೊಂಡಿರುವ ಬಿಜೆಪಿ ಸೇವಾ ಹಿ ಸಂಘಟನ್ ಹೆಸರಲ್ಲಿ ರಾಜ್ಯದ 58 ಸಾವಿರ ಬೂತ್‍ಗಳಲ್ಲಿ, 29 ಸಾವಿರ ಹಳ್ಳಿಗಳಲ್ಲಿ ಸೇವಾ ಚಟುವಟಿಕೆ ನಡೆಸಿದೆ. ಅಕ್ಕಿ ಕೊಡುವುದು, ಪಡಿತರ ವಿತರಣೆ, ವಿದ್ಯಾರ್ಥಿಗಳ ಶುಲ್ಕ ಕಟ್ಟುವುದು ಸೇರಿದಂತೆ ರಾಜ್ಯದಾದ್ಯಂತ 25 ಲಕ್ಷ ಕಾರ್ಯಕರ್ತರು ಸೇರಿ ಸೇವಾ ಚಟುವಟಿಕೆಯು ಸೇವಾ ಹೀ ಸಂಘಟನ್ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ವೈ ಇಂದು ಪೌರ ಕಾರ್ಮಿಕರಿಗೆ ಪುಡ್ ಕಿಟ್ ವಿತರಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಸಿಎಂ ಯಡಿಯೂರಪ್ಪ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.
  Published by:Sushma Chakre
  First published: