HOME » NEWS » Coronavirus-latest-news » KARNATAKA LOCKDOWN NEWS CM BS YEDIYURAPPA MEETING WITH COMMERCIAL TAX OFFICERS RH

BS Yediyurappa: ತೆರಿಗೆ ಸೋರಿಕೆ ತಡೆಗಟ್ಟಲು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸೂಚನೆ

Karnataka Coronavirus Updates: ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

news18-kannada
Updated:May 7, 2020, 6:19 PM IST
BS Yediyurappa: ತೆರಿಗೆ ಸೋರಿಕೆ ತಡೆಗಟ್ಟಲು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸೂಚನೆ
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್​ವೈ ಇಂದು ಸಭೆ ನಡೆಸಿದರು.
  • Share this:
ಬೆಂಗಳೂರು (ಮೇ 7ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಬಿಎಸ್​ವೈ, ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಆರ್ಥಿಕ ಚಟುವಟಿಕೆಗಳು ಇದೀಗ ಮತ್ತೆ ಪ್ರಾರಂಭವಾಗುತ್ತಿದ್ದು, ವ್ಯಾಪಾರಿಗಳಿಗೆ ಕಿರುಕುಳ ನೀಡದಂತೆ ಸಲಹೆ ನೀಡಿದರು.

ಇದನ್ನು ಓದಿ: ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನಲ್ಲಿ PIL ಸಲ್ಲಿಕೆ

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮೊದಲಾದವರು ಉಪಸ್ಥಿತರಿದ್ದರು.
First published: May 7, 2020, 5:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading