LockDown| ಶೀಘ್ರದಲ್ಲೇ ಕರ್ನಾಟಕದಲ್ಲಿ ಲಾಕ್​ಡೌನ್?; ಕೋವಿಡ್​ ನಿಗ್ರಹಕ್ಕಾಗಿ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಕೋವಿಡ್​ ನೀತಿ ನಿರ್ಬಂಧಗಳ ಹೊರತಾಗಿಯೂ ನಡೆಯುತ್ತಿರುವ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ರ್ಯಾಲಿಗಳ ಬಗ್ಗೆ ಮಾತ್ರ ಸಿಎಂ ಬಸವರಾಜ ಬೊಮ್ಮಾಯಿ ತುಟಿ ಬಿಚ್ಚಿಲ್ಲ. ರಾಜ್ಯದಾದ್ಯಂತ "ಜನ ಆಶೀರ್ವಾದ ಯಾತ್ರೆಗಳನ್ನ" ಆಯೋಜಿಸಿದ ಬಿಜೆಪಿ ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು (ಸೆಪ್ಟೆಂಬರ್​ 09); ಕೊರೋನಾ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಹೇರಲಾಗಿದೆ. ಕೋವಿಡ್​ ನಿಯಮಗಳನ್ನು ರೂಪಿಸಲಾಗಿದೆ. ಆದರೂ, ಹಲವರು ದೊಡ್ಡ ಪ್ರಮಾಣದ ಕಾರ್ಯಕ್ರಮಗಳು ಮತ್ತು ರ್ಯಾಲಿಗಳನ್ನು ಆಯೋಜಿಸುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಈ ಸಂಬಂಧ ಅನೇಕ ಪ್ರಕರಣಗಳು ದಾಖಲಾಗುತ್ತಲೇ ಇದೆ. ಅಲ್ಲದೆ, ಇಂತಹ ಕೃತ್ಯಗಳು ಕೊರೋನಾ ಸೋಂಕು ಮತ್ತೆ ಹೆಚ್ಚಲೂ ಕಾರಣವಾಗುವ ಸಾಧ್ಯತೆಗಳು ಅಧಿಕವಾಗಿದೆ. ಹೀಗಾಗಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘನೆಗಳನ್ನು ತಡೆಯುವ ದೃಷ್ಟಿಯಿಂದ ಶನಿವಾರ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅಲ್ಲದೆ, ದೊಡ್ಡ ಪ್ರಮಾಣದ ಕಾರ್ಯಕ್ರಮಗಳು ಮತ್ತು ರ್ಯಾಲಿಗಳನ್ನು ತಡೆಯಲು ಹೊಸ ಕೋವಿಡ್ -19 ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

  ಸಭೆಯ ಬಳಿಕ ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, "ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರನ್ನು ಒಟ್ಟುಗೂಡಿಸಿ ಕಾರ್ಯಕ್ರಮಗಳನ್ನು, ರ್ಯಾಲಿಗಳನ್ನು ನಡೆಸಲಾಗುತ್ತಿದೆ. ನಾವು ಈ ಎಲ್ಲಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಹೀಗಾಗಿ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸುವ ಸಲುವಾಗಿ ಹೊಸ ಕೋವಿಡ್ ನಿಯಮಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.

  ಆದರೆ, ಕೋವಿಡ್​ ನೀತಿ ನಿರ್ಬಂಧಗಳ ಹೊರತಾಗಿಯೂ ನಡೆಯುತ್ತಿರುವ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ರ್ಯಾಲಿಗಳ ಬಗ್ಗೆ ಮಾತ್ರ ಸಿಎಂ ಬಸವರಾಜ ಬೊಮ್ಮಾಯಿ ತುಟಿ ಬಿಚ್ಚಿಲ್ಲ. ರಾಜ್ಯದಾದ್ಯಂತ "ಜನ ಆಶೀರ್ವಾದ ಯಾತ್ರೆಗಳನ್ನ" ಆಯೋಜಿಸಿದ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳ ಹಲವಾರು ಘಟನೆಗಳು ಅಥವಾ ಸಭೆಗಳು ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ. ದೊಡ್ಡ ಪ್ರಮಾಣದ ಜನಸಂದಣಿಯನ್ನು ಕಂಡಿದೆ ಮತ್ತು ಇಂತಹ ಕಾರ್ಯಕ್ರಮಗಳಿಗೆ ಜನರಿಂದ ತೀವ್ರವಾದ ಟೀಕೆಗಳೂ ವ್ಯಕ್ತವಾಗಿದ್ದವು ಎಂಬುದು ಉಲ್ಲೇಖಾರ್ಹ.

  ಇದೇ ವೇಳೆ ಶಾಲೆಗಳನ್ನು ಮತ್ತೆ ತೆರೆಯುವ ಬಗ್ಗೆಯೂ ಮಾತನಾಡಿರುವ ಬಸವರಾಜ ಬೊಮ್ಮಾಯಿ, "1 ರಿಂದ 5 ನೇ ತರಗತಿವರೆಗೆ ಶಾಲೆಗಳನ್ನು ಮತ್ತೆ ತೆರೆಯಲು ಸರ್ಕಾರ ಇನ್ನೂ ಯೋಚಿಸಿಲ್ಲ. ನಾವು ಅದನ್ನು ಇನ್ನೂ ಪರಿಗಣಿಸಿಲ್ಲ. 6,7 ಮತ್ತು 8 ನೇ ತರಗತಿಯೊಂದಿಗೆ ಕಾರ್ಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾವು ನೋಡುತ್ತೇವೆ ಮತ್ತು ಅದರ ಆಧಾರದ ಮೇಲೆ ಸರ್ಕಾರ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ" ಎಂದು ತಿಳಿಸಿದ್ದಾರೆ.

  ಆಗಸ್ಟ್ 23 ರಿಂದ 9 ನೇ ತರಗತಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, 6, 7 ಮತ್ತು 8 ನೇ ತರಗತಿಯು ಸೆಪ್ಟೆಂಬರ್ 6 ರಿಂದ ಪುನರಾರಂಭಗೊಳ್ಳಲಿದೆ.

  ಇದನ್ನೂ ಓದಿ: Actor Chetan Controversy| ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ; ನಟ ಚೇತನ್ ವಿವಾದ

  ಇತ್ತೀಚಿನ ಪ್ರವಾಹಗಳು ಮತ್ತು ಭೂಕುಸಿತಗಳ ಹಿನ್ನೆಲೆಯಲ್ಲಿ ಅಂತರ ಸಚಿವಾಲಯದ ಕೇಂದ್ರ ತಂಡವು (ಐಎಮ್‌ಸಿಟಿ) ರಾಜ್ಯಕ್ಕೆ ಭೇಟಿ ನೀಡುತ್ತಿರುವುದನ್ನು ಗಮನಿಸಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಅಡಿಯಲ್ಲಿ ರಾಜ್ಯ ಸರ್ಕಾರದ ಬೇಡಿಕೆಯಂತೆ ಹಣವನ್ನು ಪಡೆಯುವ ಬಗ್ಗೆ ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  "ನಾನು ಇಂದು ಕೇಂದ್ರ ತಂಡದ ಜೊತೆಗೆ ಮಾತುಕತೆ ನಡೆಸಿದ್ದೇನೆ. ಅಲ್ಲದೆ, ಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸುತ್ತೇನೆ. ಈ ಮೂಲಕ ಎಲ್ಲಾ ಮಾಹಿತಿಗಳು ಮತ್ತು ವರದಿಯನ್ನು ಕೇಂದ್ರ ತಂಡದ ಜೊತೆಗೆ ಹಂಚಿಕೊಳ್ಳುತ್ತೇನೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

  ಇದನ್ನೂ ಓದಿ: Bihar MLA Snatched Gold Ring| ಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಬಿಹಾರದ ಶಾಸಕ: ಕೇಸ್ ದಾಖಲು

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: