ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ಪರಿಹಾರ ಹಣ ವಿತರಣೆಗೆ ಮಾರ್ಗಸೂಚಿ ಸಿದ್ಧಪಡಿಸಿದ ಸಾರಿಗೆ ಇಲಾಖೆ

ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು “ಸೇವಾಸಿಂಧು" ಆ್ಯಪ್ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಸೇವಾಸಿಂಧು ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು: ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಘೋಷಿಸಿದ 5000 ರೂ. ಪರಿಹಾರ ಹಣ ವಿತರಣೆ ಮಾಡಲು ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಿದೆ. ಸಾರಿಗೆ ಆಯುಕ್ತರು ಸರ್ಕಾರದ ನಡವಳಿಕೆಗಳ ಪಟ್ಟಿಯನ್ನು ತಯಾರಿಸಿದ್ದಾರೆ.

  ಸಾರಿಗೆ ಇಲಾಖೆ ಸಿದ್ದಪಡಿಸಿರುವ ಮಾರ್ಗಸೂಚಿಗಳು

  • ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳು

  • ಫಲಾನುಭವಿಗಳು ಆಟೋರಿಕ್ಷಾ/ಟ್ಯಾಕ್ಸಿ ಚಾಲಕರಾಗಿದ್ದು ದಿನಾಂಕ 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು

  • ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕು

  • ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕ್ ನ IFSC ಕೋಡ್
   MICR ಕೋಡ್‌ಗಳ ವಿವರಗಳನ್ನು ಪೋರ್ಟಲ್‌ನಲ್ಲಿ ಇರಬೇಕು

  • ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕು

  • ವಾಹನ್ -4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು

  • ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು

  • ಆಟೋರಿಕ್ಷಾ/ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು

  • ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು “ಸೇವಾಸಿಂಧು" ಆ್ಯಪ್ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಸೇವಾಸಿಂಧು ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ

  • ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ DBT ಮಾಡಬೇಕು
   ಆನ್‌ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು

  • ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು


  ಇದನ್ನು ಓದಿ: ನೀವು ಕ್ಯಾಬ್, ಆಟೋ ಚಾಲಕರಾಗಿದ್ದರೆ ಸರ್ಕಾರದಿಂದ ಘೋಷಣೆಯಾದ ರೂ. 5,000 ಪಡೆಯುವುದು ಹೀಗೆ
  First published: