HOME » NEWS » Coronavirus-latest-news » KARNATAKA OPPOSITION LEADERS AND SIDDARAMAIAH MET CM BS YEDIYURAPPA AND URGED HIM TO RELEASE SPECIAL ECONOMIC PACKAGE RH

ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ; ಕೇಂದ್ರದಿಂದ 50 ಸಾವಿರ ಕೋಟಿ ರೂ. ಪರಿಹಾರಕ್ಕೆ ಸಿದ್ದರಾಮಯ್ಯ ಒತ್ತಾಯ

BS Yediyurappa Siddaramaiah Meet: ಬರಪೀಡಿತ ತಾಲ್ಲೂಕುಗಳಿಗೆ ಸರ್ಕಾರ ಕೂಡಲೇ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು. ಬರಗಾಲದಿಂದಾಗಿ ಪೀಡಿತ ಪ್ರದೇಶದ ವ್ಯಾಪ್ತಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಪ್ರತಿ ಹೆಕ್ಟೇರ್​ಗೆ 13,500 ರೂಪಾಯಿಯಿಂದ 25,000 ರೂ.ವರೆಗೆ ಪರಿಹಾರ ಒದಗಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

news18-kannada
Updated:May 8, 2020, 3:31 PM IST
ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ; ಕೇಂದ್ರದಿಂದ 50 ಸಾವಿರ ಕೋಟಿ ರೂ. ಪರಿಹಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಸಿಎಂ ಬಿಎಸ್​ವೈ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸರ್ವಪಕ್ಷಗಳ ಮುಖಂಡರು.
  • Share this:
ಬೆಂಗಳೂರು: ಸರ್ವಪಕ್ಷಗಳ ಮುಖಂಡರು ಇಂದು ಸಿಎಂ ಬಿಎಸ್​ವೈ ಅವರನ್ನು ಭೇಟಿಯಾಗಿ ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಿದರು. ನಿಯೋಗದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್. ಡಿ.ರೇವಣ್ಣ ಇದ್ದರು.

ಸಭೆಯ ಬಳಿಕ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಸಾಂಕ್ರಾಮಿಕ ಕಾಯಿಲೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿ ಮೋದಿ ಅವರನ್ನು ಸಿಎಂ ಬಿಎಸ್​ವೈ ಅವರು ಕೂಡಲೇ ಒತ್ತಾಯಿಸಬೇಕು. ಹಾಗೂ ರಾಜ್ಯಕ್ಕೆ ಕೇಂದ್ರದಿಂದ 50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.


ತರಕಾರಿ, ಹಣ್ಣು, ಹೂವು ಮತ್ತು ಇತರೆ ಬೆಳೆಗಾರರು ತಮ್ಮ ಬೆಳೆಗಳನ್ನು ಸಾಗಿಸಲು  ಸಾರಿಗೆ ಮತ್ತು ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಕೂಡಲೇ ಕಲ್ಪಿಸಿಕೊಡಬೇಕು. ಒಂದು ವೇಳೆ ವ್ಯಾಪಾರಿಗಳು ಖರೀದಿ ಮಾಡದಿದ್ದರೆ ಸರ್ಕಾರವೇ ನೇರವಾಗಿ ರೈತರಿಂದ ಬೆಳೆ ಖರೀದಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಹಾಗೆಯೇ ಲಾಕ್​ಡೌನ್​ನಿಂದ ನಷ್ಟ ಅನುಭವಿಸಿರುವ ರೈತರು, ಹೂ, ಹಣ್ಣು ಹಾಗೂ ತರಕಾರಿ ಬೆಳೆಗಾರರು ಮತ್ತು ಕೋಳಿ, ಜಾನುವಾರು ಸಾಕಣೆದಾರರಿಗೆ ನಷ್ಟದ ಶೇ.50ರಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದ್ದಾರೆ.



ಬರಪೀಡಿತ ತಾಲ್ಲೂಕುಗಳಿಗೆ ಸರ್ಕಾರ ಕೂಡಲೇ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು. ಬರಗಾಲದಿಂದಾಗಿ ಪೀಡಿತ ಪ್ರದೇಶದ ವ್ಯಾಪ್ತಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಪ್ರತಿ ಹೆಕ್ಟೇರ್​ಗೆ 13,500 ರೂಪಾಯಿಯಿಂದ 25,000 ರೂ.ವರೆಗೆ ಪರಿಹಾರ ಒದಗಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಹಾಗೆಯೇ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಮತ್ತು ಉದ್ಯೋಗ ಸೃಷ್ಟಿಗಾಗಿ ಸರ್ಕಾರ 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ: ಮದ್ಯ ಮಾರಾಟದ ಬದಲು ಹೋಂ ಡಿಲೆವರಿ ಮಾಡಿ; ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚನೆ

First published: May 8, 2020, 2:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories