• ಹೋಂ
  • »
  • ನ್ಯೂಸ್
  • »
  • Corona
  • »
  • Karnataka Oxygen Crisis: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಆಕ್ಸಿಜನ್ ಕೊಡುವ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಇಂದು ವಿಚಾರಣೆ

Karnataka Oxygen Crisis: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಆಕ್ಸಿಜನ್ ಕೊಡುವ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಇಂದು ವಿಚಾರಣೆ

ಸುಪ್ರೀಂ ಕೋರ್ಟ್​.

ಸುಪ್ರೀಂ ಕೋರ್ಟ್​.

Karnataka Oxygen Crisis | ಕರ್ನಾಟಕದ ಹೈಕೋರ್ಟ್ ಆದೇಶವನ್ನು‌ ಪ್ರಶ್ನಿಸಿ 'ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲು ಸಾಧ್ಯವಿಲ್ಲ' ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆಯಲಿದೆ.

  • Share this:

ನವದೆಹಲಿ,‌ ಮೇ 6:  ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆ ತಾರಕಕ್ಕೆ ಏರಿದ್ದು ಚಾಮರಾಜನಗರ ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 24 ಜನ ಸಾವನ್ನಪ್ಪಿದ ಧಾರುಣ ಘಟನೆ ಕೂಡ ಸಂಭವಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಆದೇಶ ಮಾಡಿತ್ತು.‌ ರಾಜ್ಯ ಹೈಕೋರ್ಟ್ ಆದೇಶವನ್ನು‌ ಪ್ರಶ್ನಿಸಿ 'ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲು ಸಾಧ್ಯವಿಲ್ಲ' ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆಯಲಿದೆ.


ದೆಹಲಿ ಆಕ್ಸಿಜನ್ ಕೊರತೆ ಪ್ರಕರಣ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಚಂದ್ರಚೂಡ ನೇತೃತ್ವದ ಪೀಠ ಎದುರು ನಿನ್ನೆ (ಮೇ 6ರಂದು) ಸಾಲಿಸಿಟರ್ ಜನರಲ್ ತುಷಾರ್ ‌ಮೆಹ್ತಾ ಅವರು 'ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲು ಸಾಧ್ಯವಿಲ್ಲ. ಈ ವಿಷಯವನ್ನು ಸಹ ಪರಿಗಣಿಸಬೇಕು' ಎಂದು ಮನವಿ ಮಾಡಿಕೊಂಡಿದ್ದರು.‌ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವುದಾಗಿ ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಆಗ ಅವರಿಗೆ ಅರ್ಜಿಯನ್ನು ಶುಕ್ರವಾರ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾಪಿಸುವಂತೆ ಸೂಚಿಸಲಾಗಿತ್ತು. ಇದರ ಪ್ರಕಾರ ಇಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಎದುರು ಕರ್ನಾಟಕಕ್ಕೆ ಆಮ್ಲಜನಕ ನೀಡುವ ಬಗೆಗಿನ ಪ್ರಕರಣದ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಲಾಕ್​ಡೌನ್ ಘೋಷಣೆ?; ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಂಜೆ ಮಹತ್ವದ ಸಭೆ


ರಾಜ್ಯದಲ್ಲಿ‌ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿ ಸಿಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಈ ನಡುವೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ. ಆಕ್ಸಿಜನ್ ಕೊರತೆ ಮತ್ತು ಐಸಿಯು ಬೆಡ್ ಇಲ್ಲದಿರುವುದೇ ಈ ಎಲ್ಲಾ ಸಾವಿಗೆ ಪ್ರಮುಖ ಕಾರಣವಾಗಿದೆ. ಈ ನಡುವೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಜನ ಮೃತಪಟ್ಟ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಸೂಚಿಸಿತ್ತು.

top videos


    ಕರ್ನಾಟಕದಲ್ಲಿ ಆಕ್ಸಿಜನ್ ಸಮಸ್ಯೆ ತಾರಕಕ್ಕೆ ಏರಿದ ಬಳಿಕ ಕೇಂದ್ರ ಸರ್ಕಾರ  862 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವುದಾಗಿ ಹೇಳಿತ್ತು. ಇದನ್ನು 1,200 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ರಾಜ್ಯ ಹೈಕೋರ್ಟ್ ಸೂಚನೆ ನೀಡಿತ್ತು. ಆದರೀಗ ಕೇಂದ್ರ ಸರ್ಕಾರ ರಾಜ್ಯ ಹೈಕೋರ್ಟ್ ಆದೇಶವನ್ನು ಲೆಕ್ಕಿಸದೆ ಸುಪ್ರೀಂ ಕೋರ್ಟ್ ಮುಂದೆ ಕಾನೂನು ಸಮರ ಸಾರಿದೆ.  ಈ ಬಗ್ಗೆ ಇಂದು ಬೆಳಿಗ್ಗೆ 11 ಗಂಟೆಗೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.‌ ರಮಣ ನೇತೃತ್ವದ ಪೀಠದಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.


    ಪ್ರಕರಣದ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್,​ ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಗತ್ಯವಾದ 1200 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ನೀಡಬೇಕು ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್​ ಸೂಚನೆ ವಿರುದ್ಧ ಕೇಂದ್ರ ಸರ್ಕಾರ ಇದೀಗ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಈ ನಡೆಯನ್ನು ವಿಪಕ್ಷ ನಾಯಕ  ಸಿದ್ದರಾಮಯ್ಯ ಸರಣಿ ಟ್ವೀಟ್​ ಮೂಲಕ ಖಂಡಿಸಿದ್ದಾರೆ.

    First published: