HOME » NEWS » Coronavirus-latest-news » KARNATAKA RECORDS HIGHEST COVID DEATH CASE IN SINGALE DAY ON MAY 7 SESR

Karnataka Covid: ಕೊರೋನಾಗೆ ಒಂದೇ ದಿನದಲ್ಲಿ 592 ಬಲಿ; ಬೆಂಗಳೂರಿನಲ್ಲಿ ನಿಯಂತ್ರಣ ಮೀರಿದ ಸೋಂಕು

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊರೋನಾದಿಂದ 592 ಮಂದಿ ಸಾವನ್ನಪ್ಪಿದ್ದು, ಇಷ್ಟು ಪ್ರಮಾಣದ ಸಾವು ರಾಜ್ಯದಲ್ಲಿ ಹಿಂದೆಂದೂ ದಾಖಲಾಗಿಲ್ಲ.

news18-kannada
Updated:May 7, 2021, 8:44 PM IST
Karnataka Covid: ಕೊರೋನಾಗೆ ಒಂದೇ ದಿನದಲ್ಲಿ 592 ಬಲಿ; ಬೆಂಗಳೂರಿನಲ್ಲಿ ನಿಯಂತ್ರಣ ಮೀರಿದ ಸೋಂಕು
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು (ಮೇ 7): ಎರಡನೇ ಅಲೆ ಕೊರೋನಾ ಅಲೆ ಸೋಂಕು ರಾಜ್ಯದಲ್ಲಿ ನಿಯಂತ್ರಣ ಮೀರಿದೆ. ಜನತಾ ಕರ್ಫ್ಯೂನಡುವೆಯೋ ಸೋಂಕು ನಿಯಂತ್ರಣವಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ಸರಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ನಡುವೆ ಒಂದೇ ದಿನದಲ್ಲಿ 592 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಮೀರಿರುವುದು ಸ್ಪಷ್ಟವಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊರೋನಾದಿಂದ 592 ಮಂದಿ ಸಾವನ್ನಪ್ಪಿದ್ದು, ಇಷ್ಟು ಪ್ರಮಾಣದ ಸಾವು ರಾಜ್ಯದಲ್ಲಿ ಹಿಂದೆಂದೂ ದಾಖಲಾಗಿಲ್ಲ. ಇದರಲ್ಲಿ ಬೆಂಗಳೂರಿನಲ್ಲಿಯೇ 346 ಜನ ಸಾವನ್ನಪ್ಪಿರುವುದು ಮತ್ತಷ್ಟು ಆತಂಕ ಮೂಡಿಸಿದೆ.

ರಾಜ್ಯದಲ್ಲಿಂದು 48, 781 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 21, 376 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಸಕ್ರಿಯವಾಗಿ 5 ಲಕ್ಷ 36 ಸಾವಿರದ 641 ಪ್ರಕರಣಗಳಿವೆ. ಬೆಂಗಳೂರಿನಲ್ಲಿ 3 ವರೆ ಲಕ್ಷ ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ರಾಜ್ಯದಲ್ಲಿ ಈ ಮಟ್ಟಿಗೆ ಸೋಂಕು ಹರಡುತ್ತಿದ್ದು, ಹೀಗೆ ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲಿದೆ. ಈ ಹಿನ್ನಲೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಒಂದೇ ಮಾರ್ಗ ಎಂಬ ಅಭಿಪ್ರಾಯವನ್ನು ಅನೇಕ ತಜ್ಞರು ಸರ್ಕಾರಕ್ಕೆ ನೀಡಿದ್ದರು. ಅದರಂತೆ ರಾಜ್ಯದಲ್ಲಿ ಮೇ. 10 ರಿಂದ ಮೇ 24ರವರೆಗೆ ಲಾಕ್​ಡೌನ್​ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬಾರಿ ಕೆಲವು ವಿನಾಯಿತಿಗಳ ಹೊರಾತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇನ್ನಾದರೂ ಸೋಂಕು ನಿಯಂತ್ರಣಕ್ಕೆ ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ತಜ್ಞರ ಪ್ರಕಾರ, ಮುಂದಿನ ಕನಿಷ್ಠ 10 ರಿಂದ 14 ದಿನ ಬಹಳ ಕಷ್ಟಕರವಾದ ದಿನವಾಗಿದ್ದುಮ, ಸೋಂಕು ಹೆಚ್ಚು ಉಲ್ಬಣಗೊಳ್ಳಲಿದೆ. ಈ ಹಿನ್ನಲೆ ರಾಜ್ಯದಲ್ಲಿ ಲಾಕ್​ಡೌನ್​ ಮಹತ್ವದ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಲಾಗಿತ್ತು. ಈ ಸೋಂಕು ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಸೋಂಕಿನ ಸರಪಳಿ ಕತ್ತರಿಸಲು ಜನರು ಮನೆಯಲ್ಲಿರುವುದಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದಂತೆ ಮತ್ತಷ್ಟು ಆಕ್ಸಿಜನ್​ ಮತ್ತು ಬೆಡ್​ ಸಮಸ್ಯೆ ಹೆಚ್ಚಲಿದೆ. ಈ ಹಿನ್ನಲೆ ಮತ್ತಷ್ಟು ಆಕ್ಸಿಜನ್​ ಪೂರೈಕೆಗೆ ಮತ್ತು ಕೊರೋನಾ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವ ಅವಶ್ಯಕತೆ ಇದೆ.

ಇದನ್ನು ಓದಿ: ಮದ್ಯದಂಗಡಿಗಳು ಬಂದ್​; ಪಾರ್ಸೆಲ್​ಗೆ ಅನುಮತಿ ನೀಡಿದ ಸರ್ಕಾರ

ಕೊರೋನಾ ಸೋಕಿನ ಮೂರನೇ ಅಲೆ ಕೂಡ ಶೀಘ್ರದಲ್ಲಿಯೇ ಬರಲಿದೆ. ಇದಕ್ಕಅಗಿ ಸಿದ್ಧವಾಗಬೇಕಿದೆ ಎರಡನೇ ಅಲೆಯಲ್ಲಿ ಬಿಗಿ ನಿಯಂತ್ರಣಗಳನ್ನು ಕೈಗೊಂಡರೇ ಮೂರನೇ ಅಲೆಗೆ ಎದುರಿಸಲು ಸಾಧ್ಯ. ಇದಕ್ಕಾಗಿ ಸ್ಥಳೀಯ ಮಟ್ಟದಲ್ಲಿ ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಅವುಗಳನ್ನು ಕಾರ್ಯಗತಗೊಳಿಸಬೇಕು. ಈ ನಿಯಮಗಳು ಎಷ್ಟರ ಮಟ್ಟಿಗೆ ಪಾಲನೆಯಾಗುತ್ತವೆ ಎಂಬುದರ ಮೇಲೆ ಮೂರನೇ ಅಲೆಯ ನಿಯಂತ್ರಣದ ಅವಲಂಬಿತವಾಗಿದೆ ಎಂದು ಈಗಾಗಲೇ ಪ್ರಧಾನ ಮಂತ್ರಿಯವರ ಪ್ರಧಾನ ವೈಜ್ಞಾನಿಕ ಸಲಹೆಗಾರರು ತಿಳಿಸಿದ್ದಾರೆ.ಮುಂಬೈ ಮತ್ತು ದೆಹಲಿಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್​ ಕ್ರಮ ಅನುಸರಿಸಿದ ಹಿನ್ನಲೆ ಅಲ್ಲಿನ ಸೋಂಕು ಪ್ರಕರಣಗಳು ಗಮನಾರ್ಹವಾಗಿ ಸುಧಾರಣೆಯಾಗಿದೆ. ಈ ನಡುವೆ ಕರ್ನಾಟಕ ಸೇರಿದಂತೆ ಕೆಲ ದಕ್ಷಿಣ ರಾಜ್ಯಗಳಲ್ಲಿ ಸೋಂಕಿನ ಪರಿಸ್ಥಿತಿ ಹದಗೆಡುತ್ತಿದೆ.

ಭಾರತದಲ್ಲಿ 4,14,188 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,31,507 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ ಎರಡು ಕೋಟಿ ದಾಟಿದ್ದು 2,14,91,598ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಗುರುವಾರ 3,915 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,34,083ಕ್ಕೆ ಏರಿಕೆ ಆಗಿದೆ.
Published by: Seema R
First published: May 7, 2021, 8:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories