ಬೆಂಗಳೂರು(ಆ.06): ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬುದು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ತಮ್ಮ ಫೇಸ್ಬುಕ್ ಖಾತೆ ಮೂಲಕ ಸ್ಪಷ್ಟನೆ ನೀಡಿರುವ ಸುರೇಶ್ ಕುಮಾರ್, ಆಗಸ್ಟ್7ನೇ ತಾರೀಕು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗುವುದಿಲ್ಲ. ಇನ್ನೂ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿಲ್ಲ ಎಂದರು.
ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲನೇ ವಾರ ಪ್ರಕಟಿಸಲಾಗುವುದು ಹಾಗೂ ಪಿ.ಯು.ಸಿ ಫಲಿತಾಂಶವನ್ನು ಜುಲೈ ಕೊನೆ ವಾರದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಕಳೆದ ತಿಂಗಳು ಸುರೇಶ್ ತಿಳಿಸಿದ್ದರು.
ಹಾಗೆಯೇ ಸದ್ಯದಲ್ಲೇ ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಎನ್ನುವುದನ್ನು ತೀರ್ಮಾನ ಮಾಡಲಾಗುತ್ತದೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಂತ ಮಕ್ಕಳ ಪೋಷಕರು ಕೋರೊನಾ ಭಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಂಗ್ರಹ ಮಾಡಿ ತದ ನಂತರ ನಿರ್ಧಾರವನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದ್ದರು.
ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರಿಂದ ಎಲ್ಲರೂ ಕಾಯುತ್ತಿದ್ದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಆಗಸ್ಟ್ 7ರೊಳಗೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ