ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಸಿಎಂ ಬಿಎಸ್ವೈಗೆ ಬೆಂಗಳೂರು ನಗರ ಜವಾಬ್ದಾರಿ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ.
ಬೆಂಗಳೂರು: ಕೊರೋನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿದ್ದು, ಸರ್ಕಾರ ಕೂಡ ಸಮರೋಪಾದಿಯಲ್ಲಿ ಹತ್ತಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಎಲ್ಲ ಸಚಿವರಿಗೂ ಒಂದೊಂದು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ.