HOME » NEWS » Coronavirus-latest-news » KARNATAKA UNLOCK BEGINS FROM TODAY LOCKDOWN RESTRICTIONS TO BE EASED IN BANGALORE WEEKEND CURFEW TO CONTINUE SCT

Karnataka Unlock: ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್​ಡೌನ್ ಸಡಿಲಿಕೆ; ವೀಕೆಂಡ್ ಕರ್ಫ್ಯೂ ಮುಂದುವರಿಕೆ

Bengaluru Unlock Guidelines: ಇಂದಿನಿಂದ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆಯಾಗಿದ್ದರೂ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. 

news18-kannada
Updated:June 14, 2021, 7:41 AM IST
Karnataka Unlock: ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್​ಡೌನ್ ಸಡಿಲಿಕೆ; ವೀಕೆಂಡ್ ಕರ್ಫ್ಯೂ ಮುಂದುವರಿಕೆ
ಲಾಕ್​ಡೌನ್
  • Share this:
ಬೆಂಗಳೂರು (ಜೂನ್ 14): ಕಳೆದ ಒಂದೂವರೆ ತಿಂಗಳಿನಿಂದ ಸ್ತಬ್ಧವಾಗಿದ್ದ ಬೆಂಗಳೂರು ಇಂದು ಮುಂಜಾನೆಯಿಂದ ಮತ್ತೆ ಯಥಾಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆ ಮಾಡಿರುವುದರಿಂದ ತಮ್ಮ ಊರುಗಳಿಗೆ ಹೋಗಿದ್ದ ಜನರು ತಂಡೋಪತಂಡವಾಗಿ ಬೆಂಗಳೂರು ಸೇರಿಕೊಳ್ಳುತ್ತಿದ್ದಾರೆ. ಇಂದಿನಿಂದ ಕಾರ್ಖಾನೆ, ಕಂಪನಿಗಳು, ಗಾರ್ಮೆಂಟ್ಸ್​ನಲ್ಲಿ ಮತ್ತೆ ಕೆಲಸಗಳು ಶುರುವಾಗಿರುವುದರಿಂದ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಆಫೀಸಿಗೆ ಹೋಗುವವರ ವಾಹನಗಳು ಹೆಚ್ಚಾಗಿವೆ. ಹಾಗೇ, ಮಧ್ಯಾಹ್ನದವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿರುವುದರಿಂದ ಬೆಂಗಳೂರು ಮತ್ತೆ ಮೊದಲಿನಂತಾಗಿದೆ.

ಇಂದಿನಿಂದ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆಯಾಗಿದ್ದರೂ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದೆ. ವೀಕೆಂಡ್ ಕರ್ಫ್ಯೂ, ಕಂಪನಿಗಳಲ್ಲಿ ಶೇ. 50ರಷ್ಟು ಉದ್ಯೋಗಿಗಳಿಗೆ ಕೆಲಸ ಮಾಡಲು ಅವಕಾಶ, ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಣೆ ಹೀಗೆ ಕೆಲವು ಹೊಸ ನಿಯಮಗಳನ್ನು ಮಾಡಲಾಗಿದೆ.

ಲಾಕ್​ಡೌನ್ ಸಡಿಲಗೊಂಡಿರುವ ಜಿಲ್ಲೆಗಳಲ್ಲಿ ಸೆಮಿ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಅಂದರೆ, ಅನ್​ಲಾಕ್ ಆದರೂ ಕೆಲವು ವಲಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಕೆಲವು ನಿರ್ಬಂಧಗಳನ್ನೂ ವಿಧಿಸಲಾಗಿದೆ. ಅನ್​ಲಾಕ್​ ಇರುವ ಜಿಲ್ಲೆಗಳ ಪರಿಷ್ಕೃತ ಮಾರ್ಗಸೂಚಿಗಳು ಜೂನ್ 14ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: Karnataka Politics: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರ; ಜೂನ್ 18ಕ್ಕೆ ಯಡಿಯೂರಪ್ಪ ಭವಿಷ್ಯ ನಿರ್ಧಾರ?

ಲಾಕ್​ಡೌನ್ ಸಡಿಲಗೊಳ್ಳಲಿರುವ 19 ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 21ರವರೆಗೆ ಯಾವುದಕ್ಕೆಲ್ಲ ಅನುಮತಿ? ಯಾವುದಕ್ಕೆ ನಿರ್ಬಂಧ? ಇಲ್ಲಿದೆ ಮಾಹಿತಿ...

ಯಾವುದಕ್ಕೆ ಅನುಮತಿ?:
1. ಎಲ್ಲಾ ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ2. ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ.

3. ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ

4. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ
ನಿಮಾಣ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ

5. ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ

6. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ

7. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಸಂಚರಿಸಲು ಅವಕಾಶ

8.  ಅಗತ್ಯವಿದ್ದರೆ ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ

9. ಅನಾರೋಗ್ಯ ಪೀಡಿತ ರೋಗಿಗಳ ತುರ್ತು ಸಂಚಾರಕ್ಕೆ ಅವಕಾಶ.

10. ಮೆಡಿಕಲ್ ಸಿಬ್ಬಂದಿಗೆ ಅವಕಾಶ

11. ಸರಕು ಸಾಗಣೆ ಮತ್ತು ಆನ್ ಲೈನ್ ಸೇವೆಗಳಿಗೆ ಅವಕಾಶ

12. ಅಂತರ್ಜಾಲ, ಟೆಲಿಕಾಂ ಸೇವೆ ಸಿಬ್ಬಂದಿ ಓಡಾಟಕ್ಕೆ ಅವಕಾಶ

13. ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಐಡಿ ಕಾರ್ಡ್ ಇಟ್ಟುಕೊಂಡು ಸಂಚಾರಕ್ಕೆ ಅವಕಾಶ

14. ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶ. ಟಿಕೆಟ್ ತೋರಿಸಿ ಪ್ರಯಾಣಿಸಬಹುದು.

15. ಬೆಳಗ್ಗೆ 6ರಿಂದ 2 ಗಂಟೆಯವರೆಗೆ ಕನ್ನಡಕದ ಅಂಗಡಿ ತೆರೆಯಲು ಅವಕಾಶ

ಇದನ್ನೂ ಓದಿ: Horoscope: ಪಾಲುದಾರಿಕೆ ವ್ಯವಹಾರದಿಂದ ಮಿಥುನ ರಾಶಿಗೆ ಇಂದು ಹೆಚ್ಚಿನ ಲಾಭ; ಇಲ್ಲಿದೆ ದ್ವಾದಶ ರಾಶಿ ಭವಿಷ್ಯ!

ಯಾವುದಕ್ಕೆ ಅನುಮತಿ ಇಲ್ಲ?:
1. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

2. ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೋವಿಡ್ ನೈಟ್ ಕರ್ಫ್ಯೂ ಜಾರಿ. ಈ ವೇಳೆ ಸಂಚಾರಕ್ಕೆ ನಿರ್ಬಂಧ

3. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ

4. ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ
Youtube Video

ಜೂ. 14ರಿಂದ 21ರವರೆಗೆ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು ದೈನಂದಿನ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದೆ. ಇನ್ನು ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತದೆ. ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇರಲಿದೆ.
Published by: Sushma Chakre
First published: June 14, 2021, 6:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories