ಕೊರೋನಾ ವೈರಸ್​: ರಾಜ್ಯದಲ್ಲಿ 8ಕ್ಕೇರಿದ ಸೋಂಕಿತರ ಸಂಖ್ಯೆ; ತೀವ್ರ ಆತಂಕದಲ್ಲಿ ಜನ

ಸದ್ಯ ಕೊರೋನಾ ಸೋಂಕಿತ ವ್ಯಕ್ತಿಗೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ 32 ವರ್ಷದ ವ್ಯಕ್ತಿಯೊಂದಿಗೆ ಇಬ್ಬರು ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇವರನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಇಡಲಾಗಿದೆ. ಜತೆಗೆ ಈತನ ಪತ್ನಿ ಮತ್ತು ಮನೆ ಕೆಲಸದಾಕೆಯ ಮೇಲೆ ನಿಗಾ ಇಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಮಾ.17): ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಸೋಮವಾರ ವಿದೇಶದಿಂದ ಬಂದ ಮತ್ತೋರ್ವ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಈ ವಿದೇಶಿ ಪ್ರಯಾಣಿಕನಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಕ್ಕೇರಿದೆ. ಅಮೆರಿಕಾದಿಂದ ಆಗಮಿಸಿದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದರಿಂದ ಇವರಿಗೆ ಸೋಂಕು ಇರುವುದು ವೈದ್ಯಕೀಯ ತಪಾಸಣೆಯಿಂದ ದೃಢಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

  ಸದ್ಯ ಕೊರೋನಾ ಸೋಂಕಿತ ವ್ಯಕ್ತಿಗೆ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ 32 ವರ್ಷದ ವ್ಯಕ್ತಿಯೊಂದಿಗೆ ಇಬ್ಬರು ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇವರನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಇಡಲಾಗಿದೆ. ಜತೆಗೆ ಈತನ ಪತ್ನಿ ಮತ್ತು ಮನೆ ಕೆಲಸದಾಕೆಯ ಮೇಲೆ ನಿಗಾ ಇಡಲಾಗಿದೆ.

  ಈಗಾಗಲೇ ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್​​ ವಾರ್​​​ ರೂಮ್​​​ ಆರಂಭ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಚಿವ ಡಾ.ಕೆ ಸುಧಾಕರ್, ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದೆ. ಕೋವಿಡ್-19 ಹೇಗೆ ತಡೆಯಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರ ಭಾಗವಾಗಿಯೇ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ವೈರಸ್​​ ವಾರ್ ರೂಮ್​​​ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ ಎಂದಿದ್ದರು.

  ಇದನ್ನೂ ಓದಿ: ‘ಕೊರೋನಾ ತಡೆಗೆ ವಾರ್ ರೂಮ್​, ಹೆಲ್ಪ್ ಡೆಸ್ಕ್, ಪರೀಕ್ಷಾ ಕೇಂದ್ರ ಆರಂಭ‘; ಸಚಿವ ಡಾ.ಕೆ ಸುಧಾಕರ್​​

  ಕೊರೋನಾ ವೈರಸ್​​ ತಡೆಗೆ ಸಾಕಷ್ಟು ಶ್ರಮಿಸುತ್ತಿದ್ದೇವೆ. ಬೆಂಗಳೂರು, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆ ಕೊರೋನಾ ವೈರಸ್​ ವಾರ್​​ ರೂಮ್​​ ಮತ್ತು ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯಾದ್ಯಂತ ಹೆಲ್ಪ್ ಡೆಸ್ಕ್ ಆರಂಭಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲಿ 150-250 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಇದನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಾಗುವುದು ಎಂದರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್.

  ಭಾರತದಲ್ಲಿ 110 ಜನರಿಗೆ ಕೊರೋನಾ ವೈರಸ್ ಹರಡಿದೆ. 93 ಭಾರತೀಯರು, 17 ವಿದೇಶಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ 32, ಕೇರಳದಲ್ಲಿ 22, ಹರಿಯಾಣದಲ್ಲಿ 14, ಉತ್ತರ ಪ್ರದೇಶದಲ್ಲಿ 13, ದೆಹಲಿಯಲ್ಲಿ 7, ಲಡಾಖ್​ನಲ್ಲಿ 3, ರಾಜಸ್ಥಾನದಲ್ಲಿ 4, ಕರ್ನಾಟಕದಲ್ಲಿ 7, ತೆಲಂಗಾಣದಲ್ಲಿ 3, ಜಮ್ಮು-ಕಾಶ್ಮೀರದಲ್ಲಿ 2, ಉತ್ತರಾಖಂಡ್, ಆಂಧ್ರ ಪ್ರದೇಶ, ತಮಿಳುನಾಡು, ಪಂಜಾಬ್​ನಲ್ಲಿ ತಲಾ ಒಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
  First published: