ತಿರುವನಂಪುರ: ಕೊರೊನಾ ಎರಡನೇ ಅಲೆ ದೇಶದ ಜನತೆಯನ್ನು ತುಂಬಾ ಸಂಕಷ್ಟಕ್ಕೆ ದೂಡಿದೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಕೆಲವು ಕುಟುಂಬಗಳಿಗೆ ಇನ್ನಿಲ್ಲದಂತೆ ಕಾಡುತ್ತಿದೆ. ಇದಕ್ಕೆ ಕೇರಳ ರಾಜ್ಯವು ಹೊರತಾಗಿಲ್ಲ, ಕೇರಳದಲ್ಲಿಯೂ ಕೋವಿಡ್ ಆರ್ಭಟ ಜೋರಾಗಿದೆ. ಅನೇಕರು ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡು ನೋವಿನ ಮಡುವಿನಲ್ಲಿ ಮುಳುಗಿದರೆ, ಇನ್ನೂ ಕೆಲವೊಂದು ಕಡೆಯಲ್ಲಿ ಪೋಷಕರನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿರುವ ಧಾರುಣ ಘಟನೆಗಳು ನಡೆದಿವೆ.
ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರಗಳು ನೊಂದವರ ಪರವಾಗಿ ದನಿಯಾಗಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ಆರ್ಥಿಕ ನೆರವು ಒದಗಿಸುವ ಕೆಲಸ ಮಾಡುತ್ತಿವೆ. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಸರ್ಕಾರಗಳು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿವೆ. ದೆಹಲಿ, ಹರಿಯಾಣ, ಕೇರಳ,ಕರ್ನಾಟಕ ಹಾಗೂ ಆಂಧ್ರಪ್ರದೇಶ ರಾಜ್ಯದಲ್ಲಿ ಈಗಾಗಲೇ ಪರಿಹಾರ ಘೋಷಣೆ ಮಾಡಲಾಗಿದೆ.
ಕೋವಿಡ್ ದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ 50 ಸಾವಿರ, ಹಾಗೂ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪಾಲನೆ ಮಾಡುವ ಬಗ್ಗೆ ಘೋಷಿಸಿದ ದೆಹಲಿ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗಿದೆ. ಈದೀಗ ಕೇರಳ ಸರ್ಕಾರವು ಈ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಇದನ್ನು ಓದಿ: Modi-Banerjee: ಪ್ರಧಾನಿ ಮೋದಿಯೊಂದಿಗೆ ಯಾಸ್ ಚಂಡಮಾರುತ ಹಾನಿಯ ಬಗ್ಗೆ 15 ನಿಮಿಷ ಬ್ಯಾನರ್ಜಿ ಚರ್ಚೆ
We will provide a special package for children who have lost their parents to #Covid19. ₹3,00,000 will be given as immediate relief and a monthly sum of ₹2,000 will be issued till their 18th birthday. GoK will cover educational expenses till graduation.
— Pinarayi Vijayan (@vijayanpinarayi) May 27, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ