HOME » NEWS » Coronavirus-latest-news » KERALA HIGH COURT GRANTS ANTICIPATORY BAIL TO AISHA SULTANA IN SEDITION CASE MAK

ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಕೊರೋನಾ ಪ್ರಕರಣ ಶೂನ್ಯ ಪ್ರಮಾಣದಲ್ಲಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರನ್ನು ಜೈವಿಕ ಅಸ್ತ್ರ ರೂಪದಲ್ಲಿ ಪ್ರಯೋಗಿಸಿದೆ ಎಂದು ಆಯಿಷಾ ಸುಲ್ತಾನ್ ಟೀಕಿಸಿದ್ದರು.

news18-kannada
Updated:June 25, 2021, 3:09 PM IST
ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್
ಆಯಿಷಾ ಸುಲ್ತಾನ್.
  • Share this:
ಕೊಚ್ಚಿ (ಜೂನ್ 25); ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀರಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು ಒಂದು ವಾರ ಬಂಧನದಿಂದ ರಕ್ಷಣೆ ನೀಡಿತ್ತು. ಆದರೆ, ಇಂದು ಒದೇ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಕೊನೆಗೂ ನಿರೀಕ್ಷಣಾ ಜಾಮೀನು ನೀಡಿ ಬಂಧನದ ಭೀತಿಯಲ್ಲಿದ್ದ ಆಯಿಷಾ ಸುಲ್ತಾನ್ ಅವರಿಗೆ ರಕ್ಷಣೆ ನೀಡಿದೆ.

ಕಳೆದ ತಿಂಗಳು ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ್, ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, "ಕೊರೋನಾ ಪ್ರಕರಣ ಶೂನ್ಯ ಪ್ರಮಾಣದಲ್ಲಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ" ಎಂದು ಹೇಳಿದ್ದರು.

ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಆಯಿಷಾ ಸುಲ್ತಾನಾ ವಿರುದ್ದ ದೇಶದ್ರೋಹ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬಿಜೆಪಿಯ ಒಳಗೆ ಪ್ರತಿಭಟನೆ ಪ್ರಾರಂಭವಾಗಿ, ಹದಿನೈದು ನಾಯಕರು ಸೇರಿದಂತೆ ಹಲವು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು. "ಪ್ರಸ್ತುತ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್ ಅವರ ಕ್ರಮಗಳು ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಮತ್ತು ಜನರಲ್ಲಿ ತೀವ್ರ ಸಂಕಟವನ್ನು ಉಂಟುಮಾಡುತ್ತವೆ" ಎಂದು ಬರೆದಿದ್ದ ರಾಜಿನಾಮೆ ಪತ್ರದಲ್ಲಿ, ಬಿಜೆಪಿಯ 12 ನಾಯಕರು ಸಹಿ ಮಾಡಿದ್ದರು.

ಇದನ್ನೂ ಓದಿ: LGBTQ| ಸಲಿಂಗ ವಿವಾಹ ನಡೆಸಿಕೊಡುವ ಮಹಿಳಾ ಪುರೋಹಿತೆ..!

ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ.ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: Emergency Black Day| ಜನರ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ಕಾಂಗ್ರೆಸ್​ ದೇಶದ ಜನರ ಕ್ಷಮೆ ಕೇಳಬೇಕು; ಬಿ.ಎಸ್. ಯಡಿಯೂರಪ್ಪ

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಹಲವು ತಿಂಗಳಿನಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: MAshok Kumar
First published: June 25, 2021, 3:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories