HOME » NEWS » Coronavirus-latest-news » KPCC DEMANDS RESIGNATION OF GOVT FOR NOT CONTROLLING CORONAVIRUS SITUATION SNVS

ಲಾಕ್​ಡೌನ್ ಮಾತ್ರ ನೆಚ್ಚಿಕೊಂಡಿದ್ದಾರೆ; ಇವರಿಗೆ ಸರ್ಕಾರ ನಡೆಸಲು ಬರಲ್ಲ: ಕಾಂಗ್ರೆಸ್ ಕಿಡಿ

ಒಬ್ಬ ಮಂತ್ರಿಯಾದರೂ ಚಾಮರಾಜನಗರದಲ್ಲಿ ಮಡಿದವರ ಕುಟುಂಬದವರ ಜೊತೆ ಮಾತನಾಡಿದ್ದಾರಾ? ಸರ್ಕಾರ ಭಯಗೊಂಡಂತಿದೆ. ಸರ್ಕಾರ ನಡೆಸಲು ಬರದ ಇವರು ರಾಜೀನಾಮೆ ಕೊಟ್ಟು ಹೋಗಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

news18-kannada
Updated:May 4, 2021, 12:29 PM IST
ಲಾಕ್​ಡೌನ್ ಮಾತ್ರ ನೆಚ್ಚಿಕೊಂಡಿದ್ದಾರೆ; ಇವರಿಗೆ ಸರ್ಕಾರ ನಡೆಸಲು ಬರಲ್ಲ: ಕಾಂಗ್ರೆಸ್ ಕಿಡಿ
ಡಿ.ಕೆ. ಶಿವಕುಮಾರ್​.
  • Share this:
ಬೆಂಗಳೂರು(ಮೇ 04): ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಮಿತಿಮೀರಿ ಹೆಚ್ಚಾಗುತ್ತಿರುವುದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿಯವರಿಗೆ ಸರ್ಕಾರ ನಡೆಸೋಕೆ ಆಗಲ್ಲ. ಎಲ್ಲರೂ ರಾಜೀನಾಮೆ ಕೊಟ್ಟು ಹೋಗಲಿ. ಬೇಕಿದ್ದರೆ ರಾಜ್ಯಪಾಲರ ಆಡಳಿತ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದರು. ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ದುರ್ಮರಣಗೊಂಡ ಚಾಮರಾಜನಗರಕ್ಕೆ ಹೊರಡುವ ಮುನ್ನ ಇಲ್ಲಿಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ತನಗೆ ಸರಕಾರದ ಮೇಲೆ ನಂಬಿಕೆಯೇ ಹೊರಟುಹೋಗಿದೆ. ಅದಕ್ಕೆ ತಾನು ನಿನ್ನೆ ಮುಖ್ಯ ಕಾರ್ಯದರ್ಶಿ ಅವರನ್ನ ಭೇಟಿ ಮಾಡಿದ್ದು ಎಂದು ಲೇವಡಿ ಮಾಡಿದರು.

ಸರ್ಕಾರದಲ್ಲಿ 25 ಮಂತ್ರಿಗಳಿದ್ಧಾರೆ. ಒಬ್ಬ ಮಂತ್ರಿಯಾದರೂ ಸತ್ತವರ ಕುಟುಂಬಸ್ಥರ ಜೊತೆ ಮಾತನಾಡಿದ್ದಾರಾ? ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರು ಮೊನ್ನೆಯ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಸಂಬಂಧಿಕರನ್ನು ಮಾತನಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಸರ್ಕಾರವೇ ಭಯಗೊಂಡಂತಿದೆ. ಹಾಗಾಗಿ ಆರೋಗ್ಯ ಸಚಿವ ಸೇರಿ ಎಲ್ಲರೂ ರಾಜೀನಾಮೆ ಕೊಟ್ಟು ಹೋಗಲಿ ಎಂದು ಡಿಕೆಶಿ ಆಗ್ರಹಿಸಿದರು.

ರಾಜ್ಯದಲ್ಲಿ ಜನರ ಆಕ್ರಂದನ ಹೆಚ್ಚಾಗಿದೆ. ಕೇಂದ್ರ ಸರ್ಕಾರದಿಂದ ನಮಗೆ ಬೇಕಾಗುವಷ್ಟು ಆಕ್ಸಿಜನ್ ಕೊಡುತ್ತಿಲ್ಲ. ಇರುವ ಆಮ್ಲಜನಕರನ್ನೂ ಕೂಡ ಸಮರ್ಪಕವಾಗಿ ಸದುಪಯೋಗಿಸಿಕೊಳ್ಳದೇ ಇರುವುದು ಚಾಮರಾಜನಗರದಂಥ ದುರ್ಘಟನೆಗೆ ಕಾರಣವಾಗುತ್ತದೆ. ಜನರು ಭಯದಿಂದ ಸಾಯುತ್ತಿದ್ದಾರೆ. ನನ್ನ ಸಂಬಂಧಿಕರೊಬ್ಬರು ಭಯಗೊಂಡು ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಜನರು ಧೈರ್ಯದಿಂದ ಇರಬೇಕು ಎಂದೂ ಡಿಕೆಶಿ ಕರೆ ನೀಡಿದರು.

ಇದನ್ನೂ ಓದಿ: Sonu Sood - ಆಕ್ಸಿಜನ್ ಇಲ್ಲದೇ ಅರ್ಕ ಆಸ್ಪತ್ರೆ ಪರದಾಟ; ನೆರವಿನ ಹಸ್ತ ಚಾಚಿದ ನಟ ಸೋನು ಸೂದ್

ಮೊನ್ನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮರಣವಪ್ಪಿದವರ ಕುಟುಂಬಗಳಿಗೆ ಸಾಂತ್ವನ ಹೇಳಲು ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಚಾಮರಾಜನಗರಕ್ಕೆ ತೆರಳಿದ್ದಾರೆ. ಅಲ್ಲಿ ಹಾಗೆಯೇ ದುರ್ಘಟನೆ ಬಗ್ಗೆ ಕಾಂಗ್ರೆಸ್ ನಾಯಕರು ನೈಜ ಮಾಹಿತಿ ಕಲೆ ಹಾಕಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗುವ ನಿರೀಕ್ಷೆ ಇದೆ.

ಇದೇ ವೇಳೆ, ಸರ್ಕಾರ ಲಾಕ್ ಡೌನ್ ಒಂದೇ ಮದ್ದು ಎಂದು ನಂಬಿಕೊಂಡಿದೆ. ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದೆ, ಸ್ಪಷ್ಟ ತಯಾರಿ ಮಾಡಿಕೊಳ್ಳದೆ ಏಕಾಏಕಿ ಲಾಕ್ ಡೌನ್ ಮಾಡಿದೆ ಎಂದು ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್​ಗಳ ಮೂಲಕ ತರಾಟೆಗೆ ತೆಗೆದುಕೊಂಡಿದೆ.


“ಸರ್ಕಾರ ಲಾಕ್‌ಡೌನ್ ಒಂದೇ ಮದ್ದು ಎಂದು ನಂಬಿಕೊಂಡಂತಿದೆ, ಪೂರ್ವ ತಯಾರಿ, ಸ್ಪಷ್ಟ ಕಾರ್ಯತಂತ್ರವಿಲ್ಲದ ಏಕಾಏಕೀಯ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರು. ಸೂಕ್ತ ತಪಾಸಣೆ, ಐಸೋಲೇಶನ್, ಚಿಕಿತ್ಸೆಯ ವ್ಯವಸ್ಥೆ ಮಾಡದ ಪರಿಣಾಮ ಈಗ ಜಿಲ್ಲಾ ಕೇಂದ್ರಗಳಲ್ಲೂ ಸೋಂಕು ಉಲ್ಬಣಗೊಳ್ಳುತ್ತಿದೆ.

“ನಾವು ಈ ಹಿಂದೆಯೇ ಜಿಲ್ಲಾ ಕೇಂದ್ರಗಳತ್ತ ಗಮನ ಹರಿಸಿ ಎಂದು ಎಚ್ಚರಿಸಿದ್ದೆವು, ಸರ್ಕಾರ ಎಚ್ಚರಗೊಳ್ಳದ ಪರಿಣಾಮ ಈಗ ರಾಜ್ಯಾದ್ಯಾಂತ ಬೆಂಗಳೂರಿನ ಸ್ಥಿತಿಯೇ ನಿರ್ಮಾಣವಾಗಿ ಎಲ್ಲೆಡೆಯಿಂದಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಆಕ್ಸಿಜನ್, ಬೆಡ್, ಔಷಧಗಳಿಲ್ಲದ ಸುದ್ದಿಗಳು ಬರತೊಡಗಿದೆ…. ಮೂಲಸೌಕರ್ಯಗಳಿಲ್ಲದ ಜಿಲ್ಲೆಗಳ ಸ್ಥಿತಿ ಶೋಚನೀಯವಾಗಿದೆ.

“@BSYBJP ಅವರೇ, ಉಸ್ತುವಾರಿ ಮಂತ್ರಿಗಳನ್ನು ಆಯಾ ಜಿಲ್ಲೆಗಳಲ್ಲೇ ಠಿಕಾಣಿ ಹೂಡಿಸಿ, ಪ್ರತಿ ಕುಂದು ಕೊರತೆಗಳನ್ನು ನಿಭಾಯಿಸುವಂತೆ ಆದೇಶ ಹೊರಡಿಸಿ…. ಆಶಾ ಕಾರ್ಯಕರ್ತೆಯರ ಮೂಲಕ ಹಳ್ಳಿಗಳಿಗೆ ತೆರಳಿದವರನ್ನು ಗುರುತಿಸಿ ಟೆಸ್ಟ್ ಮಾಡಿಸಿ, ಐಸೋಲೇಶನ್ ವ್ಯವಸ್ಥೆ ಮಾಡಿ. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿನ ಸ್ಥಿತಿಗತಿಯ ವರದಿ ಪಡೆಯಿರಿ” ಎಂದು ಕೆಪಿಸಿಸಿ ತನ್ನ ಟ್ವಿಟ್ಟರ್ ಖಾತೆ ಮೂಲಕ ಸರ್ಕಾರಕ್ಕೆ ಸಲಹೆ ನೀಡಿದೆ.
Published by: Vijayasarthy SN
First published: May 4, 2021, 12:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories