• Home
  • »
  • News
  • »
  • coronavirus-latest-news
  • »
  • DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಕೊರೋನಾ; ಬೆಂಗಳೂರಿನ ಆಸ್ಪತ್ರೆಗೆ ದಾಖಲು

DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಕೊರೋನಾ; ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಡಿ.ಕೆ ಶಿವಕುಮಾರ್

ಡಿ.ಕೆ ಶಿವಕುಮಾರ್

DK Shivakumar Health: ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

  • Share this:

    ಬೆಂಗಳೂರು (ಆ. 25): ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.


    ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ.



    ಡಿ.ಕೆ. ಶಿವಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.



    ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಸಂಸದೆ ಸುಮಲತಾ ಅಂಬರೀಷ್, ಅನೇಕ ಶಾಸಕರು, ಸಂಸದರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.


    ಸದ್ಯಕ್ಕೆ ಕಲಬುರ್ಗಿ ಸಂಸದ ಉಮೇಶ್ ಜಾಧವ್ ಸೇರಿದಂತೆ ಅವರ ಕುಟುಂಬದ 12 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಖಚಿತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಎಎನ್​ಐ ವರದಿ ಮಾಡಿದೆ.

    Published by:Sushma Chakre
    First published: