ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲೂ ಬೇಜವಾಬ್ದಾರಿ ತನ ತೋರಿರುವ ಸಚಿವ ಸುಧಾಕರ್‌ ರಾಜೀನಾಮೆ ನೀಡಲಿ; ಡಿಕೆಶಿ

ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಸಚಿವ ಸುಧಾಕರ್‌, ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ ಎಂದು ಬರೆದುಕೊಂಡಿದ್ದರು.

ಸಚಿವ ಸುಧಾಕರ್‌ ಮತ್ತು ಡಿ.ಕೆ. ಶಿವಕುಮಾರ್‌.

ಸಚಿವ ಸುಧಾಕರ್‌ ಮತ್ತು ಡಿ.ಕೆ. ಶಿವಕುಮಾರ್‌.

  • Share this:
ಬೆಂಗಳೂರು (ಏಪ್ರಿಲ್ 13); ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಂತಹ ಸಂದರ್ಭದಲ್ಲೂ ಬೇಜವಾಬ್ದಾರಿ ತನ ತೋರಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ. ಸುಧಾಕರ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ, ಇಲ್ಲದಿದ್ದರೆ ಸಿಎಂ ಬಿ ಎಸ್‌. ಯಡಿಯೂರಪ್ಪ ಅವರನ್ನು ಸಂಪುಟದಿಂದ ಹೊರಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದ್ದಾರೆ. 

ಭಾನುವಾರ ಮಕ್ಕಳ ಜೊತೆ ಈಜುಕೊಳದಲ್ಲಿ ಆಟವಾಡುತ್ತಿದ್ದ ಪೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಸಚಿವ ಸುಧಾಕರ್‌, "ತುಂಬಾ ದಿನಗಳ ನಂತರ ನಾನು ನನ್ನ ಮಕ್ಕಳ ಜೊತೆ ಈಜುಕೊಳದಲ್ಲಿದ್ದೇನೆ. ಇಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ" ಎಂದು ಬರೆದುಕೊಂಡಿದ್ದರು.

ಆದರೆ, ಸಚಿವರ ಈ ಟ್ವೀಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತು ಹಲವರು ಟ್ವಿಟ್ ಮಾಡಿದ್ದು, "ಲಾಕ್ ಡೌನ್ ಸಮಯದಲ್ಲಿ ವೈದ್ಯರು ,ಪೊಲೀಸರು ಕಷ್ಟ ಪಡುತ್ತಿದ್ದಾರೆ. ನೀವು ಈ ಸಮಯದಲ್ಲಿ ಎಂಜಾಯ್ ಮಾಡುತ್ತಿದ್ದೀರ?. ವೈದ್ಯಕೀಯ ಮಂತ್ರಿಯಾಗಿ ನಿಮಗೆ ಜವಾಬ್ದಾರಿ ಇಲ್ಲವೇ? ಹೀಗೆ ಮನೆಮಂದಿಯೊಂದಿಗೆ ನೀವು ವಿಶ್ರಾಂತಿ ಮೂಡ್‌ನಲ್ಲಿ ಇದ್ದರೂ ಆ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಅಗತ್ಯ ಏನಿತ್ತು?" ಎಂದು ಕಿಡಿಕಾರಿದ್ದರು.ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ಡಾ|ಕೆ. ಸುಧಾಕರ್‌ ತಮ್ಮ ಟ್ವಿಟರ್‌ ಅಕೌಂಟ್‌ನಿಂದ ಆ ಪೋಟೋವನ್ನು ಡಿಲೀಟ್‌ ಮಾಡಿದ್ದಾರೆ.

ಈ ಪ್ರಕರಣದ ಕುರಿತು ಇಂದು ಟ್ವೀಟ್ ಮಾಡುವ ಮೂಲಕ ಸಚಿವ ಕೆ. ಸುಧಾಕರ್ ಅವರಿಗೆ ಚಾಟಿ ಬೀಸಿರುವ ಡಿಕೆಶಿ, "ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿ ತನದಿಂದ ವರ್ತಿಸಿದ್ದಾರೆ.

ಇದು ನೈತಿಕ ಮಾನದಂಡಗಳ ವಿಷಯವಾಗಿದ್ದು, ಅವರು ತಮ್ಮ ಸ್ವಂತ ಇಚ್ಚೆಯಿಂದ ರಾಜೀನಾಮೆ ನೀಡಬೇಕು ಅಥವಾ ಸಿಎಂ ಬಿ.ಎ‌ಸ್‌. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಿಂದ ಸಚಿವ ಸುಧಾಕರ್‌ ಅವರನ್ನು ಹೊರಹಾಕಬೇಕು" ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಲಾಕ್‌ಡೌನ್ ಸಂದರ್ಭದಲ್ಲಿ ಇವೆಲ್ಲಾ ಬೇಕಿತ್ತಾ?; ಟ್ವಿಟರ್‌ನಲ್ಲಿ ವ್ಯಾಪಕ ಟೀಕೆಗೆ ಗುರಿಯಾಯ್ತು ಸಚಿವ ಸುಧಾಕರ್‌ ನಡೆ
First published: