ಬೆಂಗಳೂರು: ದೇಶಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಮೇ 18ರಿಂದ ಜಾರಿಯಾಗಿದ್ದು, ಮೇ 31ರವರೆಗೂ ಇರಲಿದೆ. ಲಾಕ್ಡೌನ್ 4.0 ನಲ್ಲಿ ಭಾರಿ ಸಡಿಲಿಕೆ ನೀಡಲಾಗಿದ್ದು, ಬಹುತೇಕ ಎಲ್ಲ ವ್ಯಾಪಾರ- ವಹಿವಾಟು, ಸಂಚಾರ ವ್ಯವಸ್ಥೆ ಆರಂಭವಾಗಲಿದೆ. ಬಸ್ ಸಂಚಾರ ನಿರ್ಧಾರವನ್ನು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದ್ದರಿಂದ ಸೋಮವಾರ ಸಭೆ ನಡೆಸಿದ ಸಿಎಂ ಬಿಎಸ್ವೈ ಅವರು ಇಂದಿನಿಂದ ಸಾರಿಗೆ ಸಂಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಇಂದಿನಿಂದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಸುಗಳ ಸಂಚಾರ ಆರಂಭವಾಗಲಿದೆ.
ಇಂದಿನಿಂದ 1500 ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದರೆ ಶೇ. 25 ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ನಂತರ ಹಂತಹಂತವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲು ಚಿಂತಿಸಲಾಗಿದೆ. ಬೆಂಗಳೂರಿನಿಂದ ಹೊರಡುವ ಬಸ್ಗಳು ಸಂಜೆ 7 ಗಂಟೆಯೊಳಗೆ ನಿಗದಿತ ನಿಲ್ದಾಣ ತಲುಪಬೇಕು. ಸಂಜೆ 7 ಗಂಟೆ ನಂತರ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸಂಜೆ 4 ಗಂಟೆಯೊಳಗೆ ಬೆಂಗಳೂರಿನಿಂದ ಎಲ್ಲ ಬಸ್ಸುಗಳು ಹೊರಡಲಿವೆ. ಬಸ್ ಪ್ರಯಾಣ ದರ ಯಥಾಸ್ಥಿತಿ ಇರಲಿದೆ.
ಬೆಂಗಳೂರಿನಿಂದ ಮೈಸೂರಿಗೆ ಸಂಜೆ 4ವರೆಗೆ ಬಸ್ಗಳು ಹೊರಡಲಿವೆ. ಆನಂತರ ಮೈಸೂರಿಗೆ ಯಾವುದೇ ಬಸ್ಸುಗಳು ಇರುವುದಿಲ್ಲ. ಬೆಂಗಳೂರಿನಿಂದ ಶಿವಮೊಗ್ಗ ಮಧ್ಯಾಹ್ನ 12 ಗಂಟೆಯೊಳಗೆ ಬಸ್ ಹೊರಡಲಿದೆ. ಬೆಂಗಳೂರಿನಿಂದ ದಾವಣಗೆರೆಗೆ ಮಧ್ಯಾಹ್ನ 1 ಗಂಟೆಗೆ ಕಡೆಯ ಬಸ್ ತೆರಳಲಿದೆ. ಬೆಂಗಳೂರಿನಿಂದ ಹಾಸನಕ್ಕೆ ಮಧ್ಯಾಹ್ನ 3 ಗಂಟೆಗೆ, ಬೆಂಗಳೂರಿನಿಂದ ಮಂಗಳೂರಿಗೆ ಬೆಳಗ್ಗೆ 11.30ಕ್ಕೆ ಕಡೆಯ ಬಸ್ ಹೊರಡಲಿದೆ.
ಬಸ್ನಲ್ಲಿ ಪ್ರಯಾಣದ ಕ್ರಮಗಳು
ಇದನ್ನು ಓದಿ: ಕೊರೋನಾ ಎಫೆಕ್ಟ್; ಕೇಂದ್ರ ಸರ್ಕಾರಿ ನೌಕರರಿಗೂ ಇನ್ನುಮುಂದೆ 3 ಶಿಫ್ಟ್ನಲ್ಲಿ ಕೆಲಸ
ದಿನದ ಪಾಸ್, ವಾರದ ಪಾಸ್, ತಿಂಗಳ ಪಾಸ್ ಇರುವವರಿಗೆ ಮಾತ್ರ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ 300 ರೂ. ಮುಖಬೆಲೆಯ ಬಿಎಂಟಿಸಿ ಪಾಸ್ಗಳನ್ನು ಪ್ರಯಾಣಿಕರಿಗೆ ನೀಡಲಾಗುತ್ತದೆ. ಈ ಪಾಸ್ ಪಡೆದರೆ ವಾರ ಪೂರ್ತಿ ಬಿಎಂಟಿಸಿ ಬಸ್ಗಳಲ್ಲಿ ಓಡಾಟ ಮಾಡಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ