ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಬಸ್ ಸಂಚಾರ ಆರಂಭಕ್ಕೂ ಮುನ್ನ ಹಲವು ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಚನೆ ನೀಡಲಾಗಿದೆ.
ನಾಳೆಯಿಂದ 1500 ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದರೆ ಶೇ. 25 ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ನಂತರ ಹಂತಹಂತವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲು ಚಿಂತಿಸಲಾಗಿದೆ. ಬೆಂಗಳೂರಿನಿಂದ ಹೊರಡುವ ಬಸ್ಗಳು ಸಂಜೆ 7 ಗಂಟೆಯೊಳಗೆ ನಿಗದಿತ ನಿಲ್ದಾಣ ತಲುಪಬೇಕು. ಸಂಜೆ 7 ಗಂಟೆ ನಂತರ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸಂಜೆ 4 ಗಂಟೆಯೊಳಗೆ ಬೆಂಗಳೂರಿನಿಂದ ಎಲ್ಲ ಬಸ್ಸುಗಳು ಹೊರಡಲಿವೆ. ಬಸ್ ಪ್ರಯಾಣ ದರ ಯಥಾಸ್ಥಿತಿ ಇರಲಿದೆ.
ಬೆಂಗಳೂರಿನಿಂದ ಮೈಸೂರಿಗೆ ಸಂಜೆ 4ವರೆಗೆ ಬಸ್ಗಳು ಹೊರಡಲಿವೆ. ಆನಂತರ ಮೈಸೂರಿಗೆ ಯಾವುದೇ ಬಸ್ಸುಗಳು ಇರುವುದಿಲ್ಲ. ಬೆಂಗಳೂರಿನಿಂದ ಶಿವಮೊಗ್ಗ ಮಧ್ಯಾಹ್ನ 12 ಗಂಟೆಯೊಳಗೆ ಬಸ್ ಹೊರಡಲಿದೆ. ಬೆಂಗಳೂರಿನಿಂದ ದಾವಣಗೆರೆಗೆ ಮಧ್ಯಾಹ್ನ 1 ಗಂಟೆಗೆ ಕಡೆಯ ಬಸ್ ತೆರಳಲಿದೆ. ಬೆಂಗಳೂರಿನಿಂದ ಹಾಸನಕ್ಕೆ ಮಧ್ಯಾಹ್ನ 3 ಗಂಟೆಗೆ, ಬೆಂಗಳೂರಿನಿಂದ ಮಂಗಳೂರಿಗೆ ಬೆಳಗ್ಗೆ 11.30ಕ್ಕೆ ಕಡೆಯ ಬಸ್ ಹೊರಡಲಿದೆ.
ಇದನ್ನು ಓದಿ: ಬಿಎಂಟಿಸಿ ಸಿಬ್ಬಂದಿ ಕೊರೋನಾ ಪಿಡುಗಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಡಿಸಿಎಂ ಲಕ್ಷ್ಮಣ ಸವದಿ ಘೋಷಣೆ
ಬಸ್ನಲ್ಲಿ ಪ್ರಯಾಣದ ಕ್ರಮಗಳು
- ಒಂದು ಬಸ್ ನಲ್ಲಿ ಕೇವಲ 30 ಪ್ರಯಾಣಿಕರು ಮಾತ್ರ ಇರಬೇಕು.
- ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ.
- ಮಾಸ್ಕ್ ಇಲ್ಲದೆ ಬಸ್ ಹತ್ತುವಂತಿಲ್ಲ.
- ಬಸ್ಸಿನಲ್ಲಿ ಸಾಮಾಜಿಕ ಅಂತರ ಕಡ್ಡಾಯ.
- ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರು ಹತ್ತಬೇಕು.
- ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯ.
- ರಾಜ್ಯದೊಳಗೆ ಮಾತ್ರ ಬಸ್ ಸಂಚಾರ.
- ಎಸಿ ಬಸ್ ಸಂಚಾರ ಸ್ಥಗಿತ.
- ಭಾನುವಾರ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತ.
- ಪ್ರಯಾಣಿಕರು ಗುರುತಿನ ಚೀಟಿ ಸಮೇತ ಬರುವಂತೆ ಸೂಚನೆ.
- ಮಾರ್ಗ ಮಧ್ಯೆ ಊಟ, ತಿಂಡಿಗೆ ಬಸ್ ನಿಲ್ಲಿಸದಿರಲು ಸೂಚನೆ.
- ಊಟ, ತಿಂಡಿ ವ್ಯವಸ್ಥೆಯನ್ನು ಪ್ರಯಾಣಿಕರೇ ಮಾಡಿಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ