BS Yediyurappa - ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ವಿವಿಧ ನಾಯಕರು

ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಭಾನುವಾರ ದೃಢಪಟ್ಟಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

news18-kannada
Updated:August 3, 2020, 7:04 AM IST
BS Yediyurappa - ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ವಿವಿಧ ನಾಯಕರು
ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು(ಆ. 03): ಕೊರೋನಾ ಪಾಸಿಟಿವ್ ಬಂದಿರುವ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಬೇಗ ಗುಣಮುಖರಾಗಲೆಂದು ರಾಜ್ಯದ ಅನೇಕ ಮುಖಂಡರು ಹಾರೈಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಂಪುಟದ ಅನೇಕ ಸಚಿವರು ಅವರು ಸಿಎಂಗೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸಚಿವ ಪಿಯೂಶ್ ಗೋಯಲ್ ಕೂಡ ಯಡಿಯೂರಪ್ಪಗೆ ಶುಭ ಹಾರೈಸಿದ್ದಾರೆ.

ನಿನ್ನೆ ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಇತ್ತೀಚೆಗೆ ರಾಜ್ಯಪಾಲ ವಜುಭಾಯಿ ವಾಲ ಸೇರಿದಂತೆ ಅನೇಕ ಗಣ್ಯರನ್ನು ಭೇಟಿ ಮಾಡಿದ್ದರು. ಈಗ ಅವರೆಲ್ಲರಿಗೂ ಕೊರೋನಾ ಆತಂಕ ಶುರುವಾಗಿದೆ.


ನಿನ್ನೆ ಭಾನುವಾರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಉತ್ತರ ಪ್ರದೇಶದಲ್ಲಿ ಸಚಿವೆ ಕಮಲ್ ರಾಣಿ ಅವರು ಕೋವಿಡ್​ಗೆ ಬಲಿಯಾದ ಆಘಾತವಾಗಿದೆ. ಮತ್ತೊಬ್ಬ ಸಚಿವರಿಗೆ ಸೋಂಕು ತಗುಲಿದೆ ತಮಿಳುನಾಡು ರಾಜ್ಯಪಾಲಿರಿಗ ಸೋಂಕು ಇರುವುದು ದೃಢಪಟ್ಟಿದೆ.
Published by: Vijayasarthy SN
First published: August 3, 2020, 6:49 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading