ಪ್ರಧಾನಿ ಮಾತಿನಂತೆ ಎಲ್ಲರೂ ಜನತಾ ಕರ್ಫ್ಯೂ ಪಾಲಿಸೋಣ; ಜನರಲ್ಲಿ ಮನವಿ ಮಾಡಿದ ಸಚಿವ ಶ್ರೀರಾಮುಲು

ಇದೇ ಮಾರ್ಚ್ 22ರ ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ದೇಶದ ಪ್ರತಿಯೊಬ್ಬರು ಜನತಾ ಕರ್ಫ್ಯೂ ಪಾಲಿಸಬೇಕು. ಈ ಸಮಯದಲ್ಲಿ ಯಾರೊಬ್ಬರೂ ಕೂಡ ತಮ್ಮ ಮನೆಯಿಂದ ಹೊರಗೆ ಬರಬಾರದು" ಎಂದು ಮೋದಿ ಜನರಲ್ಲಿ ಮನವಿ ಮಾಡಿದ್ದರು.

ಸಚಿವ ಬಿ ಶ್ರೀರಾಮುಲು

ಸಚಿವ ಬಿ ಶ್ರೀರಾಮುಲು

  • Share this:
ಬೆಂಗಳೂರು (ಮಾರ್ಚ್‌ 20); ಮಾರಣಾಂತಿಕ ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ನಾವೆಲ್ಲರೂ ಇದನ್ನು ಪಾಲಿಸೋಣ ಸಂಕಲ್ಪ ಹಾಗೂ ಸಂಯಮದಿಂದ ಕೆಲವೊಂದು ತ್ಯಾಗ ಮಾಡೋಣ ಎಂದು ಆರೋಗ್ಯ ಸಚಿವ ಶ್ರೀರಾಮುಲು ಜನರಲ್ಲಿ ಮನವಿ ಮಾಡಿದ್ದಾರೆ.

ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ, "ಕೊರೋನಾ ವೈರಸ್​ ಬಗ್ಗೆ ಜನರು ಎರಡು ತಿಂಗಳಿಂದ ಮಾತನಾಡುತ್ತಿದ್ದಾರೆ. ದೇಶದ ಜನರು ಕೊರೋನಾ ವೈರಸ್​ ಬಗ್ಗೆ ಆತಂಕಕ್ಕೆ ಈಡಾಗಿದ್ದಾರೆ. ಇಡೀ ಮಾನವ ಸಮೂಹ ಸಂಕಟಕ್ಕೆ ಸಿಲುಕಿದೆ. ಈ ಮಾರಕ ಮಹಾಮಾರಿಗೆ ಯಾವುದೇ ಔಷಧವನ್ನು ಕಂಡು ಹಿಡಿಯಲಾಗಿಲ್ಲ. ಕೊರೋನಾ ವೈರಸ್​ನಿಂದ ದೇಶದ ಜನರು ನಿಶ್ಚಿಂತೆಯಿಂದ ಇರಲು ಸಾಧ್ಯವಾಗುತ್ತಿಲ್ಲ. ಆದರೂ ಈ ವೈರಸ್​ ಬಗ್ಗೆ ಜನರು ಹೆದರುವ, ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ" ಎಂದಿದ್ದರು.

ಅಲ್ಲದೆ, "ಇಂತಹ ಸಂಕಷ್ಟಕರ ಸಮಯದಲ್ಲಿ ಜನರು ತಮ್ಮಷ್ಟಕ್ಕೆ ತಾವೇ ಕರ್ಫ್ಯೂ ವಿಧಿಸಿಕೊಳ್ಳಬೇಕು. ಈ ಮೂಲಕ ಮಾರಕ ಸೋಂಕು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಹೇಳುವ ಮೂಲಕ ಜನತಾ ಕರ್ಫ್ಯೂಗೆ ಕರೆ ನೀಡಿದರು.

ಇದೇ ಮಾರ್ಚ್ 22ರ ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ದೇಶದ ಪ್ರತಿಯೊಬ್ಬರು ಜನತಾ ಕರ್ಫ್ಯೂ ಪಾಲಿಸಬೇಕು. ಈ ಸಮಯದಲ್ಲಿ ಯಾರೊಬ್ಬರೂ ಕೂಡ ತಮ್ಮ ಮನೆಯಿಂದ ಹೊರಗೆ ಬರಬಾರದು" ಎಂದು ಮೋದಿ ಜನರಲ್ಲಿ ಮನವಿ ಮಾಡಿದ್ದರು.

ಪ್ರಧಾನಿಯ ಈ ಮನವಿಯನ್ನು ಜನ ಪಾಲಿಸಬೇಕು ಎಂದು ಮನವಿ ಮಾಡಿರುವ ಶ್ರೀರಾಮುಲು, "ಪ್ರಧಾನಿಗಳು ಜನರಿಂದ ಜನರಿಗಾಗಿ ಈ ಕರ್ಫ್ಯೂ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನು ಎಲ್ಲರೂ ಪಾಲಿಸಬೇಕು. ಪ್ರಧಾನಿಗಳ ಮಾತಿನಂತೆ ಸಂಕಲ್ಪ ಹಾಗೂ ಸಂಯಮದಿಂದ ನಾವೆಲ್ಲರೂ ಕೆಲವೊಂದು ತ್ಯಾಗ ಮಾಡಬೇಕು. ಈ ತ್ಯಾಗದ ಮೂಲಕ ಕೊರೋನಾ ವೈರಸ್ ವಿರುದ್ಧ ಹೋರಾಡೋಣ" ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಕೋವಿಡ್ -19 ಟಾಸ್ಕ್ ಫೋರ್ಸ್ ಬಗ್ಗೆ ಮಾಹಿತಿ ನೀಡಿದ ಅವರು, "ಸದನದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ವೈರಸ್ ತಡೆಗಟ್ಟಲು ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.  ನಾವು ಸ್ಟೇಜ್ 2 ನಲ್ಲಿ ಇದ್ದೇವೆ, 3 ಹಂತಕ್ಕೆ ಬರಬಾರದು. ಹೀಗಾಗಿ ಮೋದಿ ಅವರ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸಬೇಕು" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿಯ ಜನತಾ ಕರ್ಫ್ಯೂವನ್ನು ನಾವು ಬೆಂಬಲಿಸುತ್ತೇವೆ; ಸಂಸದ ಶಶಿ ತರೂರ್‌

 
First published: