ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ರಣಕೇಕೆ ಮುಂದುವರೆದಿದೆ. ದೇಶದಲ್ಲಿ ಅತಿ ವ್ಯಾಪಕವಾಗಿ ಕೋವಿಡ್ ಹರಡುತ್ತಿರುವ ರಾಜ್ಯಗಳಲ್ಲಿ ದೆಹಲಿ ಸಹ ಒಂದಾಗಿದೆ. ದೆಹಲಿಯಲ್ಲಿ ಲಸಿಕೆ ಹಾಗೂ ಆಕ್ಸಿಜನ್ ಕೊರತೆ ಸಹ ವ್ಯಾಪಕವಾಗಿದ್ದು, ದಿನಕ್ಕೆ ನೂರಾರು ಮಂದಿ ಅಸುನೀಗುತ್ತಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಈಗಾಗಲೇ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮತ್ತೊಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
Lockdown in Delhi is being extended by one week
— Arvind Kejriwal (@ArvindKejriwal) May 1, 2021
ದೇಶಾದ್ಯಂತ ಇಂದಿನಿಂದ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಆದರೆ ದೆಹಲಿಯಲ್ಲಿ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಇಂದು ಕೇವಲ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಈ ವಿಷಯವಾಗಿ ಮಾತನಾಡಿರುವ ಅವರು, ದೆಹಲಿಯಲ್ಲಿ ಸೋಮವಾರದಿಂದ ದೊಡ್ಡ ಪ್ರಮಾಣದ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು. ಇಂದು ಸಾಂಕೇತಿಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ದೆಹಲಿಯಲ್ಲಿ ಇನ್ನೂ ಆಮ್ಲಜನಕದ ಕೊರತೆಯನ್ನು ನಾವು ಎದುರಿಸುತ್ತಿದ್ದೇವೆ. ನಾವು ಇನ್ನೂ ಆಸ್ಪತ್ರೆಗಳಿಂದ ಎಸ್‌ಒಎಸ್ ಪಡೆಯುತ್ತಿದ್ದೇವೆ. ನಾವು ನ್ಯಾಯಾಲಯಗಳು ಮತ್ತು ಕೇಂದ್ರಕ್ಕೆ ತಿಳಿಸಿದ್ದೇವೆ. ನಮಗೆ 900 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ಆಕ್ಸಿಜನ್ (ಒ2) ಅಗತ್ಯವಿದೆ. ಆದರೆ ನಮಗೆ ಕೇಂದ್ರದಿಂದ ಕೇವಲ 490 ಮೆಟ್ರಿಕ್ ಟನ್ ಆಕ್ಸಿಜನ್ ಮಾತ್ರ ನೀಡಲಾಗಿದೆ. ಇದನ್ನು ಹೆಚ್ಚಿಸಬೇಕಾಗಿದೆ. ಕೆಲವು ಆಸ್ಪತ್ರೆಗಳು ರೋಗಿಗಳನ್ನು ದೀರ್ಘಕಾಲ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿ: ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಐಸಿಯುನಲ್ಲಿದ್ದ 8 ಮಂದಿ ಸಾವು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ