Lockdown 5.0: ಲಾಕ್​ಡೌನ್ ವಿಸ್ತರಣೆ; ಕರ್ನಾಟಕದಲ್ಲಿ ಇಂದು ಸಂಜೆ ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

Karnataka Lockdown Extension: ನಾಳೆಯಿಂದ 5ನೇ ಹಂತದ ಲಾಕ್​ಡೌನ್ ಜಾರಿಯಾಗಲಿದೆ. ಇದಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಇಂದು ಸಂಜೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.

news18-kannada
Updated:May 31, 2020, 4:12 PM IST
Lockdown 5.0: ಲಾಕ್​ಡೌನ್ ವಿಸ್ತರಣೆ; ಕರ್ನಾಟಕದಲ್ಲಿ ಇಂದು ಸಂಜೆ ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು (ಮೇ 31): 4ನೇ ಹಂತದ ಲಾಕ್​ಡೌನ್ ಇಂದು ಅಂತ್ಯಗೊಳ್ಳುವುದರಿಂದ 5ನೇ ಹಂತದ ಲಾಕ್‌ಡೌನ್ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ನಾಳೆಯಿಂದ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿಯಾಗಲಿದ್ದು, ಇಂದು ಸಂಜೆಯ ವೇಳೆಗೆ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಜೊತೆಗೆ ನಡೆದ ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಹೊರರಾಜ್ಯಗಳಿಂದ ಆಗಮಿಸಿರುವ ಪ್ರಯಾಣಿಕರಿಂದ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಮಹಾರಾಷ್ಟ್ರ, ಗುಜರಾತ್​ನಿಂದ ಬಂದಿರುವ ಪ್ರಯಾಣಿಕರು ಆಗೂ ದುಬೈನಿಂದ ಆಗಮಿಸಿರುವ ಪ್ರಯಾಣಿಕರಿಂದ ಕೊರೋನಾ ಸೋಂಕು ಹೆಚ್ಚಾಗಿದೆ.

ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ; ಬುಧವಾರ ಮತ್ತೆ ಬಿಜೆಪಿ ಬಂಡಾಯ ಶಾಸಕರ ಸಭೆ

ಹೀಗಾಗಿ, ಮಹಾರಾಷ್ಟ್ರದಿಂದ ಬರುವ ಜನರಿಗೆ ಕ್ವಾರಂಟೈನ್ ಬಗ್ಗೆ ನಿಯಾಮವಳಿ ಬದಲಾಯಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಲಾಗಿದೆ. ನಾಳೆಯಿಂದ 5ನೇ ಹಂತದ ಲಾಕ್​ಡೌನ್ ಜಾರಿಯಾಗಲಿದೆ. ಇದಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಇಂದು ಸಂಜೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.
First published: May 31, 2020, 4:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading