Bangalore Lockdown: ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ; ಕಮಿಷನರ್ ಆದೇಶ

Lockdown 5.0: ಸೋಮವಾರದಿಂದ ಸಾರ್ವಜನಿಕರು ಸಹ ರಾತ್ರಿ 9 ಗಂಟೆ ಬಳಿಕ ಮನೆಯಿಂದ ಹೊರ ಬರುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

news18-kannada
Updated:May 31, 2020, 11:00 PM IST
Bangalore Lockdown: ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ; ಕಮಿಷನರ್ ಆದೇಶ
ಪೊಲೀಸ್ ಆಯುಕ್ತ​​ ಭಾಸ್ಕರ್ ರಾವ್
  • Share this:
ಬೆಂಗಳೂರು (ಮೇ 31): ಇಂದಿಗೆ 4ನೇ ಹಂತದ ಲಾಕ್​ಡೌನ್ ಅಂತ್ಯಗೊಳ್ಳಲಿದೆ. ನಾಳೆಯಿಂದ 5ನೇ ಹಂತದ ಲಾಕ್​ಡೌನ್ ಶುರುವಾಗಲಿದೆ. ನಾಳೆಯಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಈ ಹಿಂದಿನಂತೆ ಬೆಂಗಳೂರಿನಲ್ಲಿ ಇನ್ನು ಒಂದು ತಿಂಗಳು ರಾತ್ರಿ ನಿಷೇಧಾಜ್ಞೆ ಮುಂದುವರಿಯಲಿದೆ.

ಜೂನ್ 1ರ ಮಧ್ಯರಾತ್ರಿಯಿಂದ ಜೂನ್ 30ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಮುಂದುವರಿಕೆಗೆ ಕಮೀಷನರ್ ಆದೇಶ ಹೊರಡಿಸಿದೆ. ಇದುವರೆಗೂ ಸಂಜೆ 7 ಗಂಟೆಯಿಂದ ಬೆಳಗ್ಗೆ 7ರವರೆಗೆ ನಿಷೇಧಾಜ್ಞೆ ಹೇರಲಾಗಿತ್ತು. ಆದರೆ, ನಾಳೆಯಿಂದ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗುವುದು.

ಇದನ್ನೂ ಓದಿ: ನಾಳೆಯಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ

ಅಗತ್ಯ ಸೇವೆಗಳ ವಾಹನ ಸಂಚಾರ ಹೊರತುಪಡಿಸಿ ಉಳಿದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹ ರಾತ್ರಿ 9 ಗಂಟೆ ಬಳಿಕ ಮನೆಯಿಂದ ಹೊರ ಬರುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಬೆಂಗಳೂರಿನಲ್ಲೂ ನಿಷೇಧಾಜ್ಞೆ ಹೇರಲಾಗಿದೆ.
First published: May 31, 2020, 10:14 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading