• ಹೋಂ
  • »
  • ನ್ಯೂಸ್
  • »
  • Corona
  • »
  • West Bengal Lock Down: ಪಶ್ಚಿಮ ಬಂಗಾಳದಲ್ಲಿ ಕೈಮೀರಿದ ಕೊರೋನಾ ಪ್ರಕರಣ; ನಾಳೆಯಿಂದ 2 ವಾರ ಸಂಪೂರ್ಣ ಲಾಕ್​ಡೌನ್

West Bengal Lock Down: ಪಶ್ಚಿಮ ಬಂಗಾಳದಲ್ಲಿ ಕೈಮೀರಿದ ಕೊರೋನಾ ಪ್ರಕರಣ; ನಾಳೆಯಿಂದ 2 ವಾರ ಸಂಪೂರ್ಣ ಲಾಕ್​ಡೌನ್

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಪಶ್ಚಿಮ ಬಂಗಾಳದಲ್ಲಿ  ಇತ್ತೀಚೆಗೆ 8 ಹಂತದಲ್ಲಿ ಸುದೀರ್ಘವಾಗಿ ವಿಧಾನಸಭಾ ಚುನಾವಣೆಯನ್ನು ನಡೆಸಲಾಗಿತ್ತು. ಈ ವೇಳೆ ಎಲ್ಲಾ ಪಕ್ಷಗಳು ಸಾಕಷ್ಟು ಚುನಾವಣಾ ರ್ಯಾಲಿಗಳನ್ನು ನಡೆಸಿದ್ದರು. ಕೊರೋನಾ ಸೋಂಕು ಮತ್ತು ಸಾವು ಪ್ರಕರಣಗಳು ಕೈಮೀರುತ್ತಿರುವುದಕ್ಕೆಇದೇ ಮುಖ್ಯ ಕಾರಣ ಎನ್ನಲಾಗುತ್ತಿದೆ.

ಮುಂದೆ ಓದಿ ...
  • Share this:

    ಕೋಲ್ಕತ್ತಾ (ಮೇ 15); ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಕೈಮೀರುತ್ತಿದ್ದು, ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕೆ ಮುಂದಾಗಿರುವ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ನಾಳೆಯಿಂದ ಪಶ್ಚಿಮ ಬಂಗಾಳದಲ್ಲಿ 2 ವಾರಗಳ ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಿ ಆದೇಶಿಸಿದೆ. ಈ ಅವಧಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ, ಕೋಲ್ಕತಾ ಮೆಟ್ರೋ ಸೇರಿದಂತೆ ಸಾರಿಗೆ ಸೇವೆಗಳು ಕೂಡ ಸ್ಥಗಿತಗೊಳ್ಳಲಿವೆ. ಆದರೆ, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಾಜ್ಯದ ಅಧಿಸೂಚನೆ ತಿಳಿಸಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ದಿನಸಿ ಅಂಗಡಿಗಳು ಬೆಳಿಗ್ಗೆ 7 ರಿಂದ 10 ರವರೆಗೆ ತೆರೆದಿರುತ್ತವೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.


    ವಿಶೇಷವೆಂದರೆ, ಪಶ್ಚಿಮ ಬಂಗಾಳದಲ್ಲಿ ಲಾಕ್​ಡೌನ್ ಸಂದರ್ಭದಲ್ಲೂ ಆಹಾರ ಸಾಮಗ್ರಿ ಮಾರಾಟ, ತರಕಾರಿ ಮತ್ತು ಮಾಂಸ ಮಾರಾಟ ಮಳಿಗೆಗಳು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಅದೇ ರೀತಿ, ಪೆಟ್ರೋಲ್ ಪಂಪ್‌ಗಳು ತೆರೆದಿರುತ್ತವೆ ಮತ್ತು ಬ್ಯಾಂಕುಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಇರುತ್ತವೆ. ಆದರೆ, ಈ ಎಲ್ಲಾ ಸೇವೆಗಳನ್ನೂ ಕೋವಿಡ್​ ಗೈಡ್​ಲೈನ್ ಪಾಲಿಸುವ ಮೂಲಕ ಪಡೆಯಬೇಕು ಎಂದು ಸೂಚಿಸಲಾಗಿದೆ.


    ಕೈಗಾರಿಕೆಗಳನ್ನು ಮುಚ್ಚಲಾಗುತ್ತದೆಯಾದರೂ, ಚಹಾ ತೋಟಗಳಲ್ಲಿ ಶೇ.50 ರಷ್ಟು ಜನ  ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಅಲ್ಲದೆ, ಈ ಲಾಕ್​ಡೌನ್ ಅವಧಿಯಲ್ಲಿ ಯಾವುದೇ ಸಾಂಸ್ಕೃತಿಕ, ರಾಜಕೀಯ, ಶೈಕ್ಷಣಿಕ, ಆಡಳಿತಾತ್ಮಕ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಮತಿಸಲಾಗುವುದಿಲ್ಲ ಮತ್ತು ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಯಾವುದೇ ಹೊರಾಂಗಣ ಸಭೆಗಳಿಗೆ ಅನುಮತಿ ನೀಡಲಾಗುವುದಿಲ್ಲ. ವಿವಾಹ ಸಮಾರಂಭಗಳಲ್ಲಿ 50 ಕ್ಕೂ ಹೆಚ್ಚು ಜನರನ್ನು ಅನುಮತಿಸಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.


    ನಿನ್ನೆ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೋವಿಡ್ ಪ್ರಕರಣಗಳು ಮತ್ತು 136 ಸಾವುಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ  ಇತ್ತೀಚೆಗೆ 8 ಹಂತದಲ್ಲಿ ಸುದೀರ್ಘವಾಗಿ ವಿಧಾನಸಭಾ ಚುನಾವಣೆಯನ್ನು ನಡೆಸಲಾಗಿತ್ತು. ಈ ವೇಳೆ ಎಲ್ಲಾ ಪಕ್ಷಗಳು ಸಾಕಷ್ಟು ಚುನಾವಣಾ ರ್ಯಾಲಿಗಳನ್ನು ನಡೆಸಿದ್ದರು. ಈ ರ್ಯಾಲಿಗಳಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಇದೀಗ ಕೊರೋನಾ ಸೋಂಕು ಮತ್ತು ಸಾವು ಪ್ರಕರಣಗಳು ಕೈಮೀರುತ್ತಿರುವುದಕ್ಕೆಇದೇ ಮುಖ್ಯ ಕಾರಣ ಎನ್ನಲಾಗುತ್ತಿದೆ.

    ಭಾರತದಲ್ಲಿ ಕೊರೋನಾ ಆರ್ಭಟ:


    ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರುವರೆ ಲಕ್ಷದಷ್ಟು ಜನ ಸೋಂಕು ಪೀಡಿತರಾಗುತ್ತಿದ್ದಾರೆ.


    ಇದನ್ನೂ ಓದಿ: Covid-19 Death: ರಾಜ್ಯದಲ್ಲಿ ನಡೆದ ಲೋಕ-ವಿಧಾನಸಭಾ ಉಪ ಚುನಾವಣೆ; ಕಾರ್ಯನಿರ್ವಹಿಸಿದ 35 ಶಿಕ್ಷಕರುಗಳು ಕೊರೋನಾಗೆ ಬಲಿ!


    ಶುಕ್ರವಾರ 3,43,144 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,44,776 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,40,46,809ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಶುಕ್ರವಾರ 4,000 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,62,317ಕ್ಕೆ ಏರಿಕೆ ಆಗಿದೆ.


    ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.

    Published by:MAshok Kumar
    First published: