ಕೊರೋನಾ ನಿಯಂತ್ರಣಕ್ಕೆ ಲಾಕ್​ಡೌನ್ ಪರಿಹಾರವಲ್ಲ, ಸರ್ಕಾರ ಅದರ​ತ್ತ ಹೆಜ್ಜೆ ಇಡಬಾರದು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಈಗಾಗಲೇ ಸಾರಿಗೆ ಇಲಾಖೆ ಸಾವಿರಾರು ಕೋಟಿ ರೂಪಾಯಿ ನಷ್ಟದಲ್ಲಿದೆ. ಇಷ್ಟಾದರೂ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ವೇತನ ನೀಡೋ ಕೆಲಸ ಮಾಡಿದೆ. ಮುಷ್ಕರದಿಂದಾಗಿ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ ಅನ್ನೋದನ್ನು ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದರು. 

ಪ್ರಹ್ಲಾದ್ ಜೋಷಿ

ಪ್ರಹ್ಲಾದ್ ಜೋಷಿ

  • Share this:
ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಯಾವುದೇ ಸಾಧ್ಯತೆಗಳಿಲ್ಲ. ರಾಜ್ಯದ ಜನ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಆದರೆ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸದಿರೋದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಲವೊಂದು ಕಟ್ಟುನಿಟ್ಟಿನ ನಿಯಮಗಳನ್ನು ಜನರೇ ಜಾರಿಗೆ ತರಬೇಕು. ಜೊತೆಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಆಡಳಿತ ಮಂಡಳಿಗಳು ಸರಿಯಾಗಿ ಅನುಷ್ಠಾನಕ್ಕೆ ತರಬೇಕು. ಬಹುತೇಕ ಜನ ಮಾಸ್ಕ್ ಹಾಕ್ತಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿ ಅಂದ್ರೆ ನಮ್ಮ ವಿರುದ್ಧವೇ ಜನ ಸಿಟ್ಟಾಗೋ ಪರಿಸ್ಥಿತಿ ಇದೆ. ಯಾರಿಗೂ ಇದರ ಗಂಭೀರತೆಯಿಲ್ಲ. ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು. ಕೊರೋನಾ ಎರಡನೇ ಅಲೆ ಅತ್ಯಂತ ತೀವ್ರವಾಗಿದೆ. ಸಾವು-ನೋವಿನ ಸಂಖ್ಯೆಯೂ ಅಧಿಕವಿದೆ. ಇದನ್ನು ಅರ್ಥಮಾಡಿಕೊಂಡು ಜನ ವರ್ತಿಸಬೇಕು. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇದನ್ನು ಓದಿ: Coronavirus | ಸಿಬಿಎಸ್​ಇ 10ನೇ ತರಗತಿ ಪರೀಕ್ಷೆಗಳು ರದ್ದು, 12ನೇ ತರಗತಿ ಪರೀಕ್ಷಾ ದಿನಾಂಕ ಮುಂದೂಡಿಕೆ

ಸತೀಶ್ ಜಾರಕಿಹೊಳಿ ಹೇಳಿಕೆಗೆ ಜೋಶಿ ಕಿಡಿ

ಬೆಳಗಾವಿ ಲೋಕಸಭೆ ಉಪ ಚುನಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಬೆಳಗಾವಿ ಉಪ ಚುನಾವಣೆ ಹಿನ್ನೆಲೆ ಸಿಎಂ ಪದೇ ಪದೇ ಬೆಳಗಾವಿ ಪ್ರವಾಸಕ್ಕೆ ಸಮರ್ಥನೆ ಮಾಡಿಕೊಂಡರು. ಸೋಲಿನ ಭಯ ಇರುವ ಹಿನ್ನೆಲೆ ಸಿಎಂ ಪದೇ ಪದೇ ಆಗಮಿಸುತ್ತಿದ್ದಾರೆಂದು ಸತೀಶ ಜಾರಕಿಹೊಳಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಸಿಎಂ ಅವರು ಕೇವಲ ಎರಡೇ ಬಾರಿ ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದಾರೆ. ರಾಜ್ಯದಲ್ಲಿ ಮೂರು ಕಡೆಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸತೀಶ ಜಾರಕಿಹೊಳಿ ಗೆಲುವಿನ ಭ್ರಮೆಯಲ್ಲಿದ್ದಾರೆ. ಮೂರೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಸಾರಿಗೆ ಮುಷ್ಕರ ಕೈ ಬಿಡಲು ಜೋಶಿ ಮನವಿ

ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಕೇಂದ್ರ ಗಣಿ, ಕಲ್ಲಿದ್ದಲು, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿದೆ. ಇದು ಮುಷ್ಕರ ಮಾಡುವ ಸಮಯವಲ್ಲ. ಏನೇ ಸಮಸ್ಯೆ ಇದ್ದರೂ ಮಾತುಕತೆ ಮಾಡುವ ಮೂಲಕ ಬಗೆಹರಿಸಬೇಕು. ಈಗಾಗಲೇ ಸಾರಿಗೆ ಇಲಾಖೆ ಸಾವಿರಾರು ಕೋಟಿ ರೂಪಾಯಿ ನಷ್ಟದಲ್ಲಿದೆ. ಇಷ್ಟಾದರೂ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ವೇತನ ನೀಡೋ ಕೆಲಸ ಮಾಡಿದೆ. ಮುಷ್ಕರದಿಂದಾಗಿ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ ಅನ್ನೋದನ್ನು ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದರು.

ವರದಿ - ಶಿವರಾಮ ಅಸುಂಡಿ
Published by:HR Ramesh
First published: