HOME » NEWS » Coronavirus-latest-news » LOCKDOWN RELIEF MONEY NOT YET RECEIVED BY STATE GOVERNMENT AUTO DRIVERS PROTEST IN BANGALORE TOMORROW MAK

ರಾಜ್ಯ ಸರ್ಕಾರದಿಂದ ಇನ್ನೂ ಸಿಗದ ಲಾಕ್‌ಡೌನ್ ಪರಿಹಾರ ಹಣ; ನಾಳೆ ಬೆಂಗಳೂರಿನಲ್ಲಿ ಆಟೋ ಚಾಲಕರ ಪ್ರತಿಭಟನೆ

ಲಾಕ್‌ಡೌನ್ ಸಂದರ್ಭದಲ್ಲಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದ ಯಡಿಯೂರಪ್ಪ ಸರ್ಕಾರ ಆಟೋ ಚಾಲಕರು ಮಾತ್ರವಲ್ಲದೆ, ಅಗಸರು, ಕಟ್ಟಡ ಕಾರ್ಮಿಕರು, ಟ್ಯಾಕ್ಸಿ ಚಾಲಕರು, ಹೂ ಹಣ್ಣು ಮಾರಾಟಗಾರರು, ಕೂಲಿ ಕೆಲಸದವರು ಸೇರಿದಂತೆ ಸಂಘಟಿತ ಮತ್ತು ಅಸಂಘಟಿತ ವಲಯಕ್ಕೆ ಸೇರಿದ ಅನೇಕರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಈವರೆಗೆ ಬಹುತೇಕರಿಗೆ ಪರಿಹಾರದ ಹಣ ತಲುಪಿಲ್ಲ ಎಂದು ಆರೋಪಿಸಲಾಗುತ್ತಿದೆ.

news18-kannada
Updated:August 18, 2020, 10:10 PM IST
ರಾಜ್ಯ ಸರ್ಕಾರದಿಂದ ಇನ್ನೂ ಸಿಗದ ಲಾಕ್‌ಡೌನ್ ಪರಿಹಾರ ಹಣ; ನಾಳೆ ಬೆಂಗಳೂರಿನಲ್ಲಿ ಆಟೋ ಚಾಲಕರ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು (ಆಗಸ್ಟ್‌ 18); ಕೊರೋನಾ ಸಾಂಕ್ರಾಮಿಕ ರೋಗ ಸಾಮುದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಕಳೆದ ಮಾರ್ಚ್‌.25ರಿಂದ ದೇಶದಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಿತ್ತು. ಈ ನಡುವೆ ರಾಜ್ಯ ಸರ್ಕಾರ ಲಾಕ್‌ಡೌನ್‌ನಿಂದ ಉಂಟಾದ ನಷ್ಟ ಭರಿಸಲು ಆಟೋ ಚಾಲಕರಿಗೆ ರೂ. 5000 ನೀಡುವುದಾಗಿ ಘೋಷಿಸಿತ್ತು. ಆದರೆ, ಈ ಪರಿಹಾರ ಇನ್ನೂ ಫಲಾನುಭವಿಗಳಿಗೆ ತಲುಪದ ಕಾರಣ ಆಗಸ್ಟ್ 19 ರಂದು ಆಟೋ ಚಾಲಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ‘ಎಲ್ಲಿ 5 ಸಾವಿರ?’ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಆಟೋ ಘಟಕದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದ್ದಾರೆ.

ಕೊರೋನಾದಿಂದ ಬಹುತೇಕ ಎಲ್ಲಾ ವಹಿವಾಟುಗಳು ಸ್ಥಗಿತಗೊಂಡಿದ್ದರಿಂದ ಚಾಲಕರ ಪರಿಸ್ಥಿತಿ ದಯನೀಯವಾಗಿದೆ. ಅನ್ಲಾಕ್ ಪ್ರಾರಂಭವಾಗಿದ್ದರೂ ಸಹ ಮೊದಲಿನಂತೆ ವ್ಯವಹಾರ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರವು ಕೊಟ್ಟ ಭರವಸೆ ಈಡೇರಿಸಿಲ್ಲ. ಹಾಗಾಗಿ ಹೋರಾಟ ಅನಿವಾರ್ಯವಾಗಿದ್ದು ಈ ಪ್ರತಿಭಟನೆಗೆ ರಾಜ್ಯದಾದ್ಯಂತ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಚಾಲಕರಿದ್ದಾರೆ. ಅವರಲ್ಲಿ ಸುಮಾರು 3.5ಲಕ್ಷ ಜನ ಈ ಪರಿಹಾರ ದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ ಕೇವಲ 40 ಸಾವಿರ ಆಟೋ ಚಾಲಕರಿಗೆ ಮಾತ್ರ ಪರಿಹಾರ ಸಿಕ್ಕಿದೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಹೇಳಿದ್ದಾರೆ. ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳುವುದಾಗಿ ಆಟೋ ಚಾಲಕರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಕಿಮ್ಸ್‌ನಲ್ಲಿ ಆಕ್ಸಿಜನ್ ಕೊರತೆ, ಅಷ್ಟಕ್ಕೂ ನಿನ್ನೆ ಆಸ್ಪತ್ರೆಯಲ್ಲಿ ನಡೆದಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್

ಲಾಕ್‌ಡೌನ್ ಸಂದರ್ಭದಲ್ಲಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದ ಯಡಿಯೂರಪ್ಪ ಸರ್ಕಾರ ಆಟೋ ಚಾಲಕರು ಮಾತ್ರವಲ್ಲದೆ, ಅಗಸರು, ಕಟ್ಟಡ ಕಾರ್ಮಿಕರು, ಟ್ಯಾಕ್ಸಿ ಚಾಲಕರು, ಹೂ ಹಣ್ಣು ಮಾರಾಟಗಾರರು, ಕೂಲಿ ಕೆಲಸದವರು ಸೇರಿದಂತೆ ಸಂಘಟಿತ ಮತ್ತು ಅಸಂಘಟಿತ ವಲಯಕ್ಕೆ ಸೇರಿದ ಅನೇಕರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು.
Youtube Video
ಆದರೆ, ಈವರೆಗೆ ಬಹುತೇಕರಿಗೆ ಪರಿಹಾರದ ಹಣ ತಲುಪಿಲ್ಲ ಎಂದು ಆರೋಪಿಸಲಾಗುತ್ತಿದೆ. ಈ ನಡುವೆ ಆಟೋ ಚಾಲಕರು ಸರ್ಕಾರದ ವಿರುದ್ಧ ನಾಳೆ ಹೋರಾಟಕ್ಕೆ ಮುಂದಾಗಿರುವುದು ಕೊರೋನಾ ನಿಯಂತ್ರಣದ ನಡುವೆ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತಂದೊಡ್ಡಲಿದೆ ಎನ್ನಲಾಗುತ್ತಿದೆ.
Published by: MAshok Kumar
First published: August 18, 2020, 10:10 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories