ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೊರೋನಾ ಸೋಂಕು ತಗುಲಿದೆ.
ತಮಗೆ ಸೋಂಕು ತಗುಲಿರುವುದು ದೃಢಪಟ್ಟ ಬಳಿಕ ಚೌಹಾಣ್ ಅವರು, ಯಾರೆಲ್ಲ ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಚೌಹಾಣ್ ಅವರು ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಧಿವಶರಾದ ಗೌವರ್ನರ್ ಲಾಲ್ಜಿ ಟಂಡನ್ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿಲು ಚೌಹಾಣ್ ಅವರು ಇತ್ತೀಚೆಗೆ ಸಂಪುಟ ಸಹೋದ್ಯೋಗಿ ಅರವಿಂದ್ ಭಾದೌರಿಯಾ ಅವರೊಂದಿಗೆ ಲಕ್ನೋಗೆ ಪ್ರಯಾಣ ಬೆಳೆಸಿದ್ದರು. ಆ ಬಳಿಕ ಅವರಿಗೆ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು.
मेरे प्रिय प्रदेशवासियों, मुझे #COVID19 के लक्षण आ रहे थे, टेस्ट के बाद मेरी रिपोर्ट पॉज़िटिव आई है। मेरी सभी साथियों से अपील है कि जो भी मेरे संपर्क में आए हैं, वह अपना कोरोना टेस्ट करवा लें। मेरे निकट संपर्क वाले लोग क्वारन्टीन में चले जाएँ।
— Shivraj Singh Chouhan (@ChouhanShivraj) July 25, 2020
ಇದನ್ನು ಓದಿ; CoronaVirus: ದೇಶದಲ್ಲಿ ಮುಂದುವರೆದ ಕೊರೋನಾ ಉಪಟಳ:13 ಲಕ್ಷ ದಾಟಿದ ಸೋಂಕು ಪೀಡಿತರ ಸಂಖ್ಯೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ