ಮಹಾರಾಷ್ಟ್ರದಲ್ಲಿ ಒಂದೇ ದಿನ 2,100 ಕೊರೋನಾ ಕೇಸ್, 1202 ರೋಗಿಗಳು ಡಿಸ್ಚಾರ್ಜ್!

ಮಹಾರಾಷ್ಟ್ರದಲ್ಲಿ ಪ್ರತಿದಿನ 67 ಲ್ಯಾಬ್​ಗಳಲ್ಲಿ 15,000ಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಸದ್ಯದಲ್ಲೇ 17 ಸಾವಿರ ಜನರನ್ನು ತಪಾಸಣೆ ಮಾಡುವ ಸಾಮರ್ಥ್ಯವನ್ನು ಮಹಾರಾಷ್ಟ್ರ ಹೊಂದಲಿದೆ.

Sushma Chakre | news18-kannada
Updated:May 19, 2020, 9:47 PM IST
ಮಹಾರಾಷ್ಟ್ರದಲ್ಲಿ ಒಂದೇ ದಿನ 2,100 ಕೊರೋನಾ ಕೇಸ್, 1202 ರೋಗಿಗಳು ಡಿಸ್ಚಾರ್ಜ್!
ಪ್ರಾತಿನಿಧಿಕ ಚಿತ್ರ
  • Share this:
ಮುಂಬೈ (ಮೇ 19): ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚುತ್ತಲೇ ಇದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 2,100 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 37,158ಕ್ಕೆ ಏರಿಕೆಯಾಗಿದೆ. ಇದಿಷ್ಟೇ ಅಲ್ಲದೆ, ಮಹಾರಾಷ್ಟ್ರ ಇಂದು ಮತ್ತೊಂದು ದಾಖಲೆಯನ್ನೂ ಬರೆದಿದ್ದು, ಬೆಳಗ್ಗೆಯಿಂದ ಸಂಜೆಯವರೆಗೆ ಬರೋಬ್ಬರಿ 1,202 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಿದಂತೆ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಶೇ. 25ರಷ್ಟು ಕೊರೋನಾ ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ತೋಪೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಪ್ರತಿದಿನ 67 ಲ್ಯಾಬ್​ಗಳಲ್ಲಿ 15,000ಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಸದ್ಯದಲ್ಲೇ 17 ಸಾವಿರ ಜನರನ್ನು ತಪಾಸಣೆ ಮಾಡುವ ಸಾಮರ್ಥ್ಯವನ್ನು ಮಹಾರಾಷ್ಟ್ರ ಹೊಂದಲಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಸಾವಿನ ಸಂಖ್ಯೆ ಕೂಡ ಶೇ. 3.2ಕ್ಕೆ ಇಳಿಕೆಯಾಗಿದೆ.
First published: May 19, 2020, 9:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading