ಲಾಕ್​ಡೌನ್ ನಡುವೆಯೂ ಮಂಡ್ಯದಲ್ಲಿ ಬೇಕರಿ, ಸೆಲೂನ್ ತೆರೆಯಲು ಅನುಮತಿ ಕೊಟ್ಟ ಜಿಲ್ಲಾಡಳಿತ

ಮುಂಜಾಗ್ರತೆ ವಹಿಸದಿದ್ದರೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಮೈಸೂರು ಜಿಲ್ಲೆಯಲ್ಲಿ ಈವರೆಗೆ 21 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇಂತಹ ವೇಳೆಯಲ್ಲಿ ಸೆಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿದ್ದಕ್ಕೆ ಕೆಲವು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

news18-kannada
Updated:April 4, 2020, 9:32 AM IST
ಲಾಕ್​ಡೌನ್ ನಡುವೆಯೂ ಮಂಡ್ಯದಲ್ಲಿ ಬೇಕರಿ, ಸೆಲೂನ್ ತೆರೆಯಲು ಅನುಮತಿ ಕೊಟ್ಟ ಜಿಲ್ಲಾಡಳಿತ
ಮೀನು ಕೊಳ್ಳಲು ಮುಗಿಬಿದ್ದ ಜನತೆ
  • Share this:
ಮಂಡ್ಯ(ಏ.04): ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಈವರೆಗೆ ಯಾವೊಂದು ಕೊರೋನಾ ಪ್ರಕರಣವೂ ಪತ್ತೆಯಾಗಿಲ್ಲ. ಹೀಗಾಗಿ ಮಂಡ್ಯ ಜಿಲ್ಲಾಡಳಿತವು ಲಾಕ್​ಡೌನ್​ನ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಲು ಮುಂದಾಗಿದೆ. ಜಿಲ್ಲೆಯಲ್ಲಿ ಹಂತ-ಹಂತವಾಗಿ ಲಾಕ್​ಡೌನ್​ ಸಡಿಲಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​​ ಚಿಂತನೆ ನಡೆಸಿದ್ದಾರೆ.

ಈ ಹಿನ್ನೆಲೆ ಕೆಲವು ಷರತ್ತುಗಳನ್ನು ವಿಧಿಸಿ ಇಂದಿನಿಂದ ಸೆಲೂನ್, ಬೇಕರಿ ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಬೇಕರಿಯಲ್ಲಿ ಮಾಸ್ಕ್​ ಮತ್ತು ಹ್ಯಾಂಡ್​ ಗ್ಲೌಸ್​ ಬಳಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಸೆಲೂನ್​ ಮತ್ತು ಬೇಕರಿ ಮಾಲೀಕರ ಮನವಿಗೆ ಸ್ಪಂದಿಸಿ ಜಿಲ್ಲಾಡಳಿತವು ಅನುಮತಿ ನೀಡಿದೆ ಎನ್ನಲಾಗಿದೆ.

ಬಾಗಲಕೋಟೆಯಲ್ಲಿ ಕೊರೋನಾಗೆ ವೃದ್ಧ ಬಲಿ; ರಾಜ್ಯದಲ್ಲಿ 4ಕ್ಕೇರಿದ ಸಾವಿನ ಸಂಖ್ಯೆ

ಜೊತೆಗೆ ನಿನ್ನೆಯಿಂದಲೇ ಕೋಳಿ, ಕುರಿ, ಮೇಕೆ, ಮೀನು ಮಾಂಸ ಮಾರಾಟ್ಕಕೂ ಜಿಲ್ಲೆಯಲ್ಲಿ ಅನುಮತಿ ನೀಡಲಾಗಿದೆ. ಲಾಕ್​ಡೌನ್​ ಹಿನ್ನೆಲೆ ಜಿಲ್ಲಾಡಳಿತ ಈವರೆಗೆ ಮಾಂಸ ಮಾರಾಟಕ್ಕೂ ನಿರ್ಬಂಧ ಹೇರಿತ್ತು. ಆದರೆ ಈವರೆಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡದ ಹಿನ್ನೆಲೆ, ಮಾಂಸ ಮಾರಾಟದ ಮೇಲಿನ ನಿರ್ಬಂಧವನ್ನು ತೆಗೆದುಹಾಕಿದ್ದಾರೆ.

ಆದರೆ ಜಿಲ್ಲಾಡಳಿತ ಕೈಗೊಂಡಿರುವ ಈ ಕ್ರಮ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯಾಕೆಂದರೆ ಜನರು ಒಂದೇ ಬಾರಿ ಗುಂಪು ಸೇರುವ ಸಾಧ್ಯತೆ ಇದೆ. ಇದು ಅಪಾಯ ಕೂಡ ಹೌದು. ಮುಂಜಾಗ್ರತೆ ವಹಿಸದಿದ್ದರೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಮೈಸೂರು ಜಿಲ್ಲೆಯಲ್ಲಿ ಈವರೆಗೆ 21 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇಂತಹ ವೇಳೆಯಲ್ಲಿ ಸೆಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿದ್ದಕ್ಕೆ ಕೆಲವು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
First published: April 4, 2020, 9:30 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading