• Home
  • »
  • News
  • »
  • coronavirus-latest-news
  • »
  • Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಕೊರೋನಾ; ದೆಹಲಿಯ ಆಸ್ಪತ್ರೆಗೆ ದಾಖಲು

Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಕೊರೋನಾ; ದೆಹಲಿಯ ಆಸ್ಪತ್ರೆಗೆ ದಾಖಲು

ಮನಮೋಹನ್ ಸಿಂಗ್.

ಮನಮೋಹನ್ ಸಿಂಗ್.

Manmohan Singh Health: ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಅವರು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಮುಂದೆ ಓದಿ ...
  • Share this:

ನವದೆಹಲಿ (ಏ. 20): ಕೊರೋನಾ ವೈರಸ್ ಜನಸಾಮಾನ್ಯರನ್ನು ಮಾತ್ರವಲ್ಲದೆ ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿ ಪ್ರಭಾವಿ ವ್ಯಕ್ತಿಗಳನ್ನು ಕೂಡ ಬಿಟ್ಟಿಲ್ಲ. ಎಷ್ಟೇ ಭದ್ರತೆಯಿದ್ದರೂ ಉನ್ನತ ಹುದ್ದೆಯ ವ್ಯಕ್ತಿಗಳಿಗೆ ಕೂಡ ಕೊರೋನಾ ಹರಡುತ್ತಿದೆ. ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೂ ಕೊರೋನಾ ಸೋಂಕು ಹರಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೊರೋನಾ ಲಸಿಕೆ ಪಡೆದವರಿಗೂ ಕೊರೋನಾ ಹರಡುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ 2 ಡೋಸ್ ಲಸಿಕೆ ಪಡೆದಿದ್ದರೂ ಕೊರೋನಾದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಪ್ರಧಾನಮಂತ್ರಿಯೂ ಆಗಿರುವ ಮನಮೋಹನ್ ಸಿಂಗ್ ಕೆಲವು ದಿನಗಳ ಹಿಂದಷ್ಟೇ ಎರಡೂ ಕೊರೋನಾ ಡೋಸ್​ಗಳನ್ನು ಪಡೆದಿದ್ದರು. ಆದರೂ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.2 ದಿನಗಳ ಹಿಂದಷ್ಟೇ ಭಾರತದಲ್ಲಿ ಯಾವ ರೀತಿಯಲ್ಲಿ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಬಹುದು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ 5 ಸಲಹೆಗಳನ್ನು ನೀಡಿ ಮಾಜಿ ಪಿಎಂ ಮನಮೋಹನ್ ಸಿಂಗ್ ಪತ್ರ ಬರೆದಿದ್ದರು. ಭಾರತದಲ್ಲಿ ಕೊರೋನಾ ಲಸಿಕೆ ಪಡೆದ ಜನರ ಪ್ರಮಾಣ ಬಹಳ ಕಡಿಮೆ ಇದೆ. ಲಸಿಕೆಯ ಎಷ್ಟು ಡೋಸ್​ಗಳನ್ನು ಖರೀದಿಸಲು ಸರ್ಕಾರ ಆದೇಶ ನೀಡಿದೆ, ಇದುವರೆಗೆ ಎಷ್ಟು ಡೋಸ್ ಪೂರೈಕೆಯಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಬೇಕು ಎಂದು ಮನಮೋಹನ್ ಸಿಂಗ್ ಒತ್ತಾಯಿಸಿದ್ದರು. ಹಾಗೇ, ಕೊರೋನಾ ಬಿಕ್ಕಟ್ಟನ್ನು ಯಾವ ರೀತಿ ನಿಭಾಯಿಸಬಹುದು ಎಂಬ ಬಗ್ಗೆ 5 ಸಲಹೆಗಳನ್ನೂ ನೀಡಿದ್ದರು.


ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕರ್ನಾಟಕದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಅವರು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪ್ರತಿದಿನ 2 ಲಕ್ಷ ದಾಟುತ್ತಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ್ದಾರೆ. ಮೂರನೇ ಹಂತದ ಲಸಿಕೆ ವಿತರಣೆಯಲ್ಲಿ ದೇಶದ ಎಲ್ಲಾ ವಯಸ್ಕರು ಕೂಡ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪ್ರಧಾನಿ ತಿಳಿಸಿದ್ದಾರೆ. ಕೊರೋನಾ ಲಸಿಕೆ ತಯಾರಕರ ಜೊತೆ ಇಂದು ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಸಭೆ ನಡೆಸಲಿದ್ದಾರೆ.

Published by:Sushma Chakre
First published: