Mann Ki Baat: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಪ್ರತಿಯೊಬ್ಬನೂ ಸೈನಿಕನೇ: ಪ್ರಧಾನಿ ಮೋದಿ

Mann Ki Baat: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.

news18-kannada
Updated:April 26, 2020, 11:37 AM IST
Mann Ki Baat: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಪ್ರತಿಯೊಬ್ಬನೂ ಸೈನಿಕನೇ: ಪ್ರಧಾನಿ ಮೋದಿ
ನರೇಂದ್ರ ಮೋದಿ
  • Share this:
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ಕೊರೋನಾ ವೈರಸ್​ ವಿರುದ್ಧದ ಹೋರಾಟದಲ್ಲಿ ದೇಶದ ಪ್ರತಿಯೊಬ್ಬನೂ ಸೈನಿಕನೇ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ವೈರಸ್​ ವಿರುದ್ಧ ದೇಶದ ಜನತೆ ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘನೆ ವ್ಯಕ್ತಪಡಿಸಿದರು. "ಸರ್ಕಾರದ ಜೊತೆಗೂಡಿ ದೇಶದ ಜನತೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ದೇಶದ ಪ್ರತಿಯೊಬ್ಬರೂ ಇದರಲ್ಲಿ ಭಾಗಿಯಾಗಿದ್ದಾರೆ. ಕೊರೋನಾ ವಿರುದ್ಧ ಹೋರಾಡುತ್ತಿರುವ ದೇಶದ ಪ್ರತಿಯೊಬ್ಬನೂ ಸೈನಿಕನೇ," ಎಂದರು ಮೋದಿ.

ಲಾಕ್​ಡೌನ್​ ಸಮಯದಲ್ಲಿ ಮೋದಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ ಹೇಳಿದ್ದರು. ಜನರು ಇದನ್ನು ಶಿರಸಾವಹಿಸಿ ಪಾಲಿಸಿದ್ದರು. ಈ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು.

ಇದನ್ನೂ ಓದಿ: ಭಾರತದಲ್ಲಿ 26 ಸಾವಿರ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ; 824 ಸಾವು

"ನಾನು ದೇಶದ 130 ಕೋಟಿ ಜನರಿಗೂ ಆಭಾರಿಯಾಗಿದ್ದೇನೆ. ಪ್ರತಿಯೊಬ್ಬ ವ್ಯಕ್ತಿಯೂ ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ. ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ," ಎಂದು ಹೇಳಿದ ಮೋದಿ ಮಾಸ್ಕ ಧರಿಸುವಂತೆ ಹಾಗೂ ಎಲ್ಲೆಂದರಲ್ಲಿ ಉಗುಳದಂತೆ ಕೋರಿದ್ದಾರೆ.

"ನಮ್ಮ ಸಮಾಜ ಬದಲಾಗಿದೆ. ಹೊಸ ಹೊಸ ವಿಚಾರಗಳನ್ನು ನಾವು ತಿಳಿದುಕೊಳ್ಳುತ್ತಿದ್ದೇವೆ. ನಮಗೆ ಸಹಾಯ ಮಾಡುತ್ತಿರುವವರಿಗೆ ಧನ್ಯವಾದ ಹೇಳಲು ಹೊಸ ಹೊಸ ಮಾರ್ಗಗಳನ್ನು ಕಂಡು ಹಿಡಿದಿದ್ದೇವೆ. ಕೊರೋನಾ ವಾರಿರ್ಯಸ್​ ಬಗ್ಗೆ ಅನೇಕು ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಬಗ್ಗೆ ನಮಗೆ ಇದ್ದ ಅಭಿಪ್ರಾಯ ಕೂಡ ಬದಲಾಗಿದೆ. ಈ ಬದಲಾವಣೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರಭಾವ ಬೀರಲಿದೆ,” ಎಂದು ಮೋದಿ ಹೇಳಿದರು.

"ಬೇರೇ ದೇಶಗಳಿಗೆ ಅಗತ್ಯವಿದ್ದ ಔಷಧಗಳನ್ನು ಭಾರತ ಪೂರೈಕೆ ಮಾಡಿತ್ತು. ಈ ವಿಚಾರವನ್ನು ಮೋದಿ ಪ್ರಸ್ತಾಪಿಸಿದ್ದಾರೆ. “ಬೇರೆ ಬೇರೆ ದೇಶಗಳಿಗೆ ಸಹಾಯ ಮಾಡಲು ಭಾರತ ಅನೇಕ ಕ್ರಮಗಳನ್ನು ಕೈಗೊಂಡಿದೆ. ನಮ್ಮ ಸಹಾಯಕ್ಕೆ ಸಾಕಷ್ಟು ರಾಷ್ಟ್ರಗಳು ಧನ್ಯವಾದ ಅರ್ಪಿಸಿವೆ,” ಎಂದರು ಮೋದಿ.
First published: April 26, 2020, 11:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading