‘ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ‘ - ಸಿದ್ದರಾಮಯ್ಯಗೆ ಸಚಿವ ಸುಧಾಕರ್​​ ತಿರುಗೇಟು

ಇದಾದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​​, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ಅದೇ ರೀತಿ ಸುಧಾಕರ್​​ ಕೂಡ ರಾಜ್ಯ ಸರ್ಕಾರ ಮೇಲೆ ಸಿದ್ದರಾಮಯ್ಯ ಹೊರಸಿದ ಆರೋಪ ಆಧಾರಹಿತ ಸುಳ್ಳು ಎಂದು ಕೆಂಡಕಾರಿದ್ದಾರೆ.

ಸಚಿವ ಕೆ.ಸುಧಾಕರ್​

ಸಚಿವ ಕೆ.ಸುಧಾಕರ್​

 • Share this:
  ಬೆಂಗಳೂರು(ಜು.23): ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ ಎಂದು ಟ್ವೀಟ್​​ ಮಾಡುವ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​​​​​​ ಮಾಜಿ ಸಿಎಂ ಸಿದ್ದರಾಮಯ್ಯರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

  ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಡಾ. ಕೆ ಸುಧಾಕರ್​​​​, ಕೊರೋನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದು ಮತ್ತೊಂದು ಟ್ವೀಟ್​​ನಲ್ಲಿ ಬರೆದುಕೊಂಡಿದ್ಧಾರೆ.

  ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಸಿದ್ದರಾಮಯ್ಯಗೆ ಸುಧಾಕರ್​​​​ ಕುಟುಕಿದ್ದಾರೆ.

  ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ? ಎಂದು ಸುಧಾಕರ್​ ಪ್ರಶ್ನಿಸಿದ್ಧಾರೆ.

  ರಾಜ್ಯ ಸರ್ಕಾರದಿಂದ ಕೋಟ್ಯಂತರ ರೂ ಅವ್ಯವಹಾರ ನಡೆದಿದೆ ಎಂದು ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಮುಗಿದ ಬಳಿಕ ಈ ಆರೋಪಗಳ ಬಗ್ಗೆ ಮೊದಲಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ತಮ್ಮ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಕೂಡ ಅವ್ಯಹಾರ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

  ಇದನ್ನೂ ಓದಿ: ಸಿದ್ದರಾಮಯ್ಯರ ಭ್ರಷ್ಟಾಚಾರ ಆರೋಪಕ್ಕೆ ಶ್ರೀರಾಮುಲು, ಶೆಟ್ಟರ್ ತಿರುಗೇಟು; ರೇಣುಕಾಚಾರ್ಯ ಆಕ್ರೋಶ

  ಇದಾದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​​, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ಅದೇ ರೀತಿ ಸುಧಾಕರ್​​ ಕೂಡ ರಾಜ್ಯ ಸರ್ಕಾರ ಮೇಲೆ ಸಿದ್ದರಾಮಯ್ಯ ಹೊರಸಿದ ಆರೋಪ ಆಧಾರಹಿತ ಸುಳ್ಳು ಎಂದು ಕೆಂಡಕಾರಿದ್ದಾರೆ.
  Published by:Ganesh Nachikethu
  First published: