ಮಾಜಿ ಸಚಿವ ಜನಾರ್ದನ ರೆಡ್ಡಿಗೂ ತಗುಲಿದ ಕೊರೋನಾ ಸೋಂಕು; ಟ್ವೀಟ್ ಮೂಲಕ ದೃಢಪಡಿಸಿದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನಾರ್ಧನ ರೆಡ್ಡಿ ಅವರು ನಾಳೆ (ಆಗಸ್ಟ್ 30) ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ.

ಮಾಜಿ ಸಚಿವ ಜನಾರ್ದನ ರೆಡ್ಡಿ.

  • Share this:
ಬೆಂಗಳೂರು (ಆಗಸ್ಟ್‌ 29); ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರಿಗೂ ಮಾರಣಾಂತಿಕ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಶ್ರೀರಾಮುಲು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಶ್ರೀರಾಮುಲು, "ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಆಶಿಸಿದ್ದಾರೆ.


ಜನಾರ್ದನ ರೆಡ್ಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನಾರ್ಧನ ರೆಡ್ಡಿ ಅವರು ನಾಳೆ (ಆಗಸ್ಟ್ 30) ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗೆ ಒಳಪಟ್ಟಿದ್ದಾರೆ ಎನ್ನಲಾಗುತ್ತಿದೆ.


ಇನ್ನೂ ಕಳೆದ ಆಗಸ್ಟ್‌ 09 ರಂದು ಸಚಿವ ಶ್ರೀರಾಮುಲು ಅವರಿಗೂ ಸಹ ಕೊರೋನಾ ಸೋಂಕು ದೃಢಪಟ್ಟಿತ್ತು. ಈ ವೇಳೆ ಶ್ರೀರಾಮುಲು ಶಿವಾಜಿ ನಗರದ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೆ, ಕೊರೋನಾ ಸೋಂಕಿನಿಂದ ತಾವು ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರದಿಂದಲೇ ಸಾರ್ವಜನಿಕ ಸೇವೆಗೆ ಮುಂದಾಗುವುದಾಗಿಯೂ ಟ್ವೀಟ್ ಮೂಲಕ ತಿಳಿಸಿದ್ದರು.

ಇದನ್ನೂ ಓದಿ : ಅನ್‌ಲಾಕ್‌-4.0; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುಂಟು..ಏನಿಲ್ಲ?

ದೇಶ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಇಂದು ಒಂದೇ ದಿನ 8,324 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 327076 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ, ಕೊರೋನಾದಿಂದ ಇಂದು 115 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆಯೂ 5483ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ನೀಡಲಾಗಿದೆ.
Published by:MAshok Kumar
First published: