‘ಹಿರಿಯರನ್ನು ಕೋವಿಡ್​​-19 ವೈರಸ್​​ನಿಂದ ಕಾಪಾಡಿ‘ - ಯುವಕರಿಗೆ ಸಚಿವ ಡಾ. ಸುಧಾಕರ್​​ಗೆ ಮನವಿ

ಟೆಸ್ಟಿಂಗ್ ಹೆಚ್ಚಿಸುವ ನಿಟ್ಟಿನಲ್ಲಿ ಶನಿವಾರ ನಗರದಲ್ಲಿ 20,000 ಆಂಟಿಜೆನ್ ಪರೀಕ್ಷೆ ಮಾಡಲಾಗುತ್ತಿದೆ. ಇನ್ನೂ 2 ಲಕ್ಷ ಟೆಸ್ಟ್ ಕಿಟ್​ಗಳಿಗೆ ಆರ್ಡರ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್-19 ಟೆಸ್ಟ್ ಮತ್ತಷ್ಟು ಹೆಚ್ಚಿಸಲಾಗುವುದು ಡಾ. ಸುಧಾಕರ್​​ ಎಂದು ತಿಳಿಸಿದರು.

news18-kannada
Updated:July 11, 2020, 2:08 PM IST
‘ಹಿರಿಯರನ್ನು ಕೋವಿಡ್​​-19 ವೈರಸ್​​ನಿಂದ ಕಾಪಾಡಿ‘ - ಯುವಕರಿಗೆ ಸಚಿವ ಡಾ. ಸುಧಾಕರ್​​ಗೆ ಮನವಿ
ಸಚಿವ ಡಾ. ಸುಧಾಕರ್
  • Share this:
ಬೆಂಗಳೂರು(ಜು.11): ರಾಜಧಾನಿ ಬೆಂಗಳೂರಿನಲ್ಲಿ ತೀವ್ರಗೊಂಡ ಕೊರೋನಾ ಕಾರಣದಿಂದಾಗಿ ಹಾಸಿಗೆ ಹಂಚಿಕೆ ಸೇರಿದಂತೆ ಸಮರ್ಪಕ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಸೋಂಕಿತರಿಗೆ ಯಾವುದೇ ಕೊರತೆ ಇಲ್ಲದೇ ಬೆಡ್​​ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಹಂಚಿಕೆಗೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ ಬರಲಿದೆ. ಸರ್ಕಾರ ಎಲ್ಲವನ್ನೂ ವ್ಯವಸ್ಥಿತವಾಗಿ ನಿರ್ವಹಿಸಲಿದೆ ಎಂದು ಸುಧಾಕರ್​​ ಆಶ್ವಾಸನೆ ನೀಡಿದರು.

ಇನ್ನು, ರಾಜ್ಯದ ಸೋಂಕಿತ ಪ್ರಕರಣಗಳ ಅಂಶಗಳನ್ನು ನೀಡಿದ ಸಚಿವ ಡಾ. ಸುಧಾಕರ್, ಕರ್ನಾಟಕದಲ್ಲಿ ಶುಕ್ರವಾರ 2,313 ಪ್ರಕರಣಗಳು ದಾಖಲಾಗಿವೆ. ಹಾಗೆಯೇ ಮಾರಕ ಕೊರೋನಾದಿಂದ 57 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ 1447 ಕೇಸ್​ ದಾಖಲಾಗಿದ್ದ, 29 ಮಂದಿ ಬಲಿಯಾಗಿದ್ದಾರೆ. ಹೀಗಾಗಿ ನಗರದಲ್ಲಿ ಎಲ್ಲ ವ್ಯವಸ್ಥೆಯೂ ಮಾಡಲಾಗಿದೆ. ಈಗ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.

ಶೇ.2ರಷ್ಟು ಸೋಂಕಿತರಿಗೆ ಮಾತ್ರ ಐಸಿಯು ಅವಶ್ಯಕತೆ ಉಂಟಾಗಬಹುದು. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹಂಚಿಕೆ ಮಾಡಲು ಪಾರದರ್ಶಕ ಕೇಂದ್ರೀಕೃತ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆ ಇದೆ ಎಂದು ತಿಳಿಯಬಹುದು. ವೈಜ್ಞಾನಿಕ ಪದ್ಧತಿಯಲ್ಲಿ ಯಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ ಎಂದು ನಿರ್ಧರಿಸಿ ಹಾಸಿಗೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಟೆಸ್ಟಿಂಗ್ ಹೆಚ್ಚಿಸುವ ನಿಟ್ಟಿನಲ್ಲಿ ಶನಿವಾರ ನಗರದಲ್ಲಿ 20,000 ಆಂಟಿಜೆನ್ ಪರೀಕ್ಷೆ ಮಾಡಲಾಗುತ್ತಿದೆ. ಇನ್ನೂ 2 ಲಕ್ಷ ಟೆಸ್ಟ್ ಕಿಟ್​ಗಳಿಗೆ ಆರ್ಡರ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್-19 ಟೆಸ್ಟ್ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಇನ್ನೂ ಓದಿ: ಕೋವಿಡ್​​-19 ಅವ್ಯವಹಾರ ಆರೋಪ: ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ - ನಳಿನ್​​ ಕುಮಾರ್​ ಕಟೀಲ್ಕೊರೋನಾ ಸೋಂಕಿಗೆ ಹೆಚ್ಚು ಅಪಾಯದಲ್ಲಿರುವ ಹಿರಿಯರ ರಕ್ಷಣೆಗೆ ಆಧುನಿಕ ಶ್ರವಣಕುಮಾರರಂತೆ ತೊಡಗಿಸಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಯುವಕರಿಗೆ ಕರೆ ನೀಡಿದ್ದಾರೆ. ಶ್ರವಣಕುಮಾರ ವೃದ್ಧ ತಂದೆ ತಾಯಿಯರನ್ನು ಹೊತ್ತು ಕಾಲ್ನಡಿಗೆಯಲ್ಲೇ ತೀರ್ಥಯಾತ್ರೆ ಮಾಡಿಸಿ ಜನ್ಮ ಸಾರ್ಥಕ ಮಾಡಿಕೊಂಡ. ಇಂದು ನಾವೆಲ್ಲಾ ತ್ರೇತಾ ಯುಗದ ಶ್ರವಣ ಕುಮಾರನಂತೆ ಕಷ್ಟಪಡಬೇಕಾಗಿಲ್ಲ. ಹಿರಿಯರನ್ನು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಹೋಗದಂತೆ ಎಚ್ಚರ ವಹಿಸಿದರೆ ಅದೇ ನಾವು ಅವರಿಗೆ ಮಾಡುವ ಸೇವೆ.  ಆದ್ದರಿಂದ ಯುವಕರಲ್ಲಿ ನಾನು ಮಾಡುವ ಮನವಿ ಏನಂದರೆ ದಯವಿಟ್ಟು ಮನೆಯಲ್ಲಿರುವ ಹಿರಿಯರನ್ನು ಮನೆಯಲ್ಲೇ ಇರುವಂತೆ  ನೋಡಿಕೊಂಡು ಅವರನ್ನು ರಕ್ಷಿಸಿ, ಸೋಂಕಿನಿಂದ ಕಾಪಾಡಿ ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
Published by: Ganesh Nachikethu
First published: July 11, 2020, 2:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading