ಕೋವಿಡ್​-19 ಮರಣ ಪ್ರಮಾಣ ಕಡಿಮೆ ಮಾಡುವಲ್ಲಿ ಕರ್ನಾಟಕ ಯಶಸ್ಸು - ಸಚಿವ ಡಾ. ಕೆ ಸುಧಾಕರ್​​

ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು. ಅದರಲ್ಲಿ ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳು, RSS, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸ್ಕೌಟ್ಸ್ ಅಂಡ್ ಗೈಡ್ಸ್ ಮುಂತಾದ ಸಂಘಟನೆಗಳ ಸಹಕಾರ ಇರಬೇಕು ಎಂದರು ಸುಧಾಕರ್​.

news18-kannada
Updated:July 12, 2020, 10:29 AM IST
ಕೋವಿಡ್​-19 ಮರಣ ಪ್ರಮಾಣ ಕಡಿಮೆ ಮಾಡುವಲ್ಲಿ ಕರ್ನಾಟಕ ಯಶಸ್ಸು - ಸಚಿವ ಡಾ. ಕೆ ಸುಧಾಕರ್​​
ಸಚಿವ ಕೆ.ಸುಧಾಕರ್​
  • Share this:
ಬೆಂಗಳೂರು(ಜು.12): ವಾರಾಂತ್ಯದೊಳಗೆ 20 ಸಾವಿರ ಕೋವಿಡ್-19 ಪರೀಕ್ಷೆ ನಡೆಸುವ ಗುರಿ ಹೊಂದಿದ್ದ ನಾವು ಒಂದೇ ದಿನದಲ್ಲಿ ಸುಮಾರು 20,288 ಕೊರೋನಾ ಟೆಸ್ಟ್​ ಮಾಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿನ ಪ್ರಮಾಣ ಇಂದಿಗೂ ಕೂಡ ರಾಜ್ಯದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದ್ದು, ಶೇ.1.69 ಇದೆ. ಮರಣ ಪ್ರಮಾಣ ಕಡಿಮೆ ಮಾಡುವಲ್ಲಿ ಕರ್ನಾಟಕ ಉತ್ತಮ ಯಶಸ್ಸು ಸಾಧಿಸಿದ್ದೇವೆ ಎಂದರು.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶನಿವಾರ 1 ಲಕ್ಷ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಭಾನುವಾರ ಇದರ ಫಲಿತಾಂಶ ಸಿಗಲಿದೆ. ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಾಗಿರುವುದರಿಂದ ಲಾಕ್ಡೌನ್ ಮಾಡುವ ಕುರಿತಂತೆ 8 ವಲಯಗಳ ಉಸ್ತುವಾರಿ ಸಚಿವರು ಮಾನ್ಯ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಿದ್ದರು. ಅದರ ಪರಿಣಾಮವಾಗಿ ಮುಖ್ಯಮಂತ್ರಿಯವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ಕೊರೋನಾ ಮಣಿಸಲು 3C ಗಾಳಿಯಾಡದ ಪ್ರದೇಶ((Close Space, ಹತ್ತಿರದ ಸಂಪರ್ಕ(, Close Contacts), ಗುಂಪುಗೂಡುವುದು(Crowds) ಇವುಗಳಿಂದ ದೂರವಿರಬೇಕು. ಇದರ ಜತೆಗೆ 3W ಅಂತರ ಕಾಯ್ದುಕೊಳ್ಳುವುದು(Watch your distance, ಮಾಸ್ಕ್ ಧರಿಸುವುದು(, Wear Masks, ಆಗಾಗ ಕೈತೊಳೆಯುತ್ತಿರುವುದು( Wash your hands) ವಿಧಾನವನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಕೊರೋನಾ ಗೆಲ್ಲಬಹುದು ಎಂದು ಸುಧಾಕರ್ ಅಭಿಪ್ರಾಯಪಟ್ಟರು.

ಪ್ರತಿದಿನ ನೀತಿಯುಕ್ತ ಮಾಹಿತಿಗಳಿಂದ ಜನರಿಗೆ ಅರಿವು ಮೂಡಿಸಲು ಯತ್ನಿಸುತ್ತಿದ್ದು, ರಾಮಾಯಣದಲ್ಲಿ ರಾಮಸೇತುವೆ ನಿರ್ಮಿಸಲು ಅಳಿಲುಸೇವೆಯ ಮಹತ್ವವನ್ನ ಸುಧಾಕರ್​​ ವಿವರಿಸಿದರು. ಈ ವೇಳೆ ಸೇವೆಯ ಮನಸ್ಥಿತಿ ಇರಬೇಕು, ಗಾತ್ರ ಮುಖ್ಯವಲ್ಲ ಎಂದರು.

ಅದೇ ರೀತಿ ಕೊರೋನಾ ವಿರುದ್ಧದ ಸಮರದಲ್ಲಿ ನಮ್ಮ ಕೈಲಾಗುವ ನೆರವನ್ನು ಮಾಡಬೇಕು. ಚಿಕ್ಕ ಕೆಲಸ, ಅಲ್ಪ ಕಾಣಿಕೆ ಎಂಬ ಮನೋಭಾವ ಇರಬಾರದು. ಹಿಂಜರಿಕೆ ತೊರೆದು ನಮ್ಮ ಕೈಲಾದ ಸಹಾಯವನ್ನು ಮಾಡಲು ಮುಂದಾಗಬೇಕಿದೆ. ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು. ಅದರಲ್ಲಿ ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳು, RSS, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸ್ಕೌಟ್ಸ್ ಅಂಡ್ ಗೈಡ್ಸ್ ಮುಂತಾದ ಸಂಘಟನೆಗಳ ಸಹಕಾರ ಇರಬೇಕು ಎಂದರು.

ಇದನ್ನೂ ಓದಿ: ವಾಸುದೇವ ಮಯ್ಯ ಆತ್ಮಹತ್ಯೆ ಬೆನ್ನಲ್ಲೀಗ ಮತ್ತೊಂದು ಬಹುಕೋಟಿ ವಂಚನೆ ಆರೋಪ: 14 ಮಂದಿ ವಿರುದ್ಧ ಎಫ್​ಐಆರ್​​ಕೋವಿಡ್ ಕೇರ್ ಸೆಂಟರ್​ಗಳಿಗೆ ಮತ್ತು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡುವುದು. ಹಿರಿಯ ನಾಗರೀಕರು ಒಂಟಿಯಾಗಿದ್ದರೆ ಅವರಿಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿವುದು. ಹೋಮ್ ಐಸೋಲೇಷನ್ ಕುರಿತು ಮನೆಯ ಸದಸ್ಯರಿಗೆ ಮತ್ತು ನೆರೆಹೊರೆಯವರಿಗೆ ಅರಿವು ಮೂಡಿಸುವುದು. ಮುಂಜಾಗ್ರತೆಗಳ ವಹಿಸುವುದು. ಅವರಲ್ಲಿರುವ ಭಯ, ಆತಂಕ ಮತ್ತು ಸೋಂಕಿತರ ಮೇಲಿರುವ ಕಳಂಕ ಭಾವ ನಿವಾರಿಸುವುದು. ಹೀಗೆ ಹಲವಾರು ರೀತಿಯಲ್ಲಿ ಸಮಾಜದ ನೆರವು ಸಹಕಾರ ಅಗತ್ಯವಿದೆ. ಆದ್ದರಿಂದ ನಿಮ್ಮೆಲ್ಲರ ಸಹಕಾರ ಕೋರುತ್ತೇನೆ ಎಂದು ಸಚಿವರು ಮನವಿ ಮಾಡಿದರು.
Published by: Ganesh Nachikethu
First published: July 12, 2020, 10:28 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading