ಬೆಂಗಳೂರು (ಮೇ 18); ರಾಜ್ಯದಲ್ಲಿ ಹಂತ ಹಂತವಾಗಿ ಈಗಾಗಲೇ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ. ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಆದರೆ, ಇನ್ನು ಭಾನುವಾರಗಳಲ್ಲಿ ಇಡೀ ರಾಜ್ಯ ಕಂಪ್ಲೀಟ್ ಲಾಕ್ಡೌನ್ ಆಗಲಿದೆ, ಮದ್ಯ ಮತ್ತು ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಇಂದು ವಿಧಾನ ಸೌಧದಲ್ಲಿ ಲಾಕ್ಡೌನ್ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, "ರಾಜ್ಯದಲ್ಲಿ ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆರವು ಮಾಡಲಾಗಿದೆ. ಆದರೆ, ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡಲಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಭಾನುವಾರದ ಎಲ್ಲಾ ದಿನಗಳಲ್ಲೂ ರಾಜ್ಯಾದ್ಯಂತ ಕಡ್ಡಾಯವಾಗಿ ಲಾಕ್ಡೌನ್ ಮಾಡಲಾಗುವುದು. ಯಾವುದೇ ಕಾರಣಕ್ಕೂ ಮದ್ಯ ಮತ್ತು ಮಾಂಸ ಮಾರಟಕ್ಕೆ ಅವಕಾಶ ನೀಡಲಾಗುವುದಿಲ್ಲ. ಹೀಗಾಗಿ ಮಾಂಸ ಪ್ರಿಯರು ಹಿಂದಿನ ದಿನವೇ ಮಾಂಸ ಖರೀದಿಸಿಕೊಳ್ಳಬಹುದು" ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ದಂತ ವೈದ್ಯಕೀಯ ಆಸ್ಪತ್ರೆ ಮತ್ತು ಸೆಲೂನ್ ಅಂಗಡಿಗಳ ಕುರಿತೂ ಮಾತನಾಡಿರುವ ಅವರು, "ಇನ್ನೂ ಎಲ್ಲಾ ಜಿಲ್ಲೆಗಳಲ್ಲೂ ದಂತ ವೈದ್ಯಕೀಯ ಆಸ್ಪತ್ರೆ ಮತ್ತು ಸೆಲೂನ್ ತೆರೆಯಬಹುದು. ಆದರೆ, ಸೆಲೂನ್ ನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸರ್ ಕೂಡ ಕಡ್ಡಾಯವಾಗಿ ಇಡಬೇಕು. ಈ ಕುರಿತು ಇಂದೇ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗುವುದು" ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ : ಕೊರೋನಾ ಮುಕ್ತವಾಗಿದ್ದ ಮೈಸೂರಿಗೆ ಮತ್ತೆ ಬಂದ ಹೆಮ್ಮಾರಿ ವೈರಸ್; ಮುಂಬೈ ಮೂಲದಿಂದ ಮತ್ತೆ ಸೋಂಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ